ನವದೆಹಲಿ: ಚಾಲಕನ ನಿಯಂತ್ರಣ ತಪ್ಪಿ ಬಸ್‌ವೊಂದು ಪೊಲೀಸ್ ಕಾನ್ಸ್ಟೇಬಲ್ ಹಾಗೂ ನಾಗರಿಕನೊಬ್ಬನಿಗೆ ಡಿಕ್ಕಿ ಹೊಡೆದು ಇಬ್ಬರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ದೆಹಲಿಯ (Delhi) ಟಿಬೆಟಿಯನ್ ಮಾರುಕಟ್ಟೆ (Tibetan Market) ಬಳಿ ಸೋಮವಾರ ರಾತ್ರಿ ನಡೆದಿದೆ.
ಸಿವಿಲ್ ಲೈನ್ಸ್ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪೊಲೀಸ್ ಪೇದೆ ವಿಕ್ಟರ್ ರಾತ್ರಿ ಗಸ್ತು ಕರ್ತವ್ಯದಲ್ಲಿದ್ದರು. ಇನ್ನೋರ್ವ ನಾಗರಿಕನ ಗುರುತು ಇನ್ನೂ ಪತ್ತೆಯಾಗಿಲ್ಲ. ಸೋಮವಾರ ತಡರಾತ್ರಿ 10:15 ರಿಂದ 10:30ರ ನಡುವೆ ಈ ಘಟನೆ ನಡೆದಿದೆ. ಇದನ್ನೂ ಓದಿ: ಕೇಂದ್ರ ಸಚಿವ ಹೆಚ್‌ಡಿಕೆ, ಪುತ್ರ ನಿಖಿಲ್ ವಿರುದ್ಧ ಎಫ್‌ಐಆರ್ ದಾಖಲು
ದೆಹಲಿ ಸಾರಿಗೆ ಸಂಸ್ಥೆಯ (DTC) ಬಸ್ ನಿಯಂತ್ರಣ ತಪ್ಪಿ ಯೂನಿಪೋಲ್‌ಗೆ ಡಿಕ್ಕಿ ಹೊಡೆದಿದೆ. ಟಿಬೆಟಿಯನ್ ಮಾರುಕಟ್ಟೆ ಎದುರಿನ ರಿಂಗ್ ರಸ್ತೆಯಲ್ಲಿ ಇಬ್ಬರಿಗೆ ಡಿಕ್ಕಿ ಹೊಡೆದಿದ್ದು, ಚಾಲಕ ಹೊರತುಪಡಿಸಿದರೆ ಬಸ್‌ನಲ್ಲಿ ಯಾವುದೇ ಪ್ರಯಾಣಿಕರು ಇರಲಿಲ್ಲ. ಇದನ್ನೂ ಓದಿ: ಇನ್ಮುಂದೆ ಮಕ್ಕಳನ್ನು ಬೈಕ್‌ಗಳಲ್ಲಿ ಕರೆದೊಯ್ಯುವಾಗ ಸೇಫ್ಟಿ ಬೆಲ್ಟ್ ಕಡ್ಡಾಯ
ಬಸ್ ಚಾಲಕ ವಿನೋದ್ ಕುಮಾರ್‌ನನ್ನು (57) ಬಂಧಿಸಲಾಗಿದೆ. ಘಟನೆಯಲ್ಲಿ ಪೊಲೀಸ್ ಪೇದೆ ವಿಕ್ಟರ್ ಮುಖ, ತಲೆ ಮತ್ತು ಕುತ್ತಿಗೆಗೆ ವಿಪರೀತ ಗಾಯವಾಗಿದೆ. ತಕ್ಷಣ ಪರಮಾನಂದ ಆಸ್ಪತ್ರೆಗೆ ಸಾಗಿಸಲಾಗಿದ್ದು, ಮೃತಪಟ್ಟಿರುವುದಾಗಿ ಮೂಲಗಳು ತಿಳಿಸಿವೆ. ಈ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ. ಇದನ್ನೂ ಓದಿ: ಚಾಮರಾಜನಗರ| ‘ಮಿಸ್ಟರ್ ಬಿಆರ್‌ಟಿ’ ಎಂದೇ ಹೆಸರಾಗಿದ್ದ ವಕ್ರದಂತ ಹೊಂದಿದ್ದ ಕಾಡಾನೆ ಸಾವು