ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ನವ ಪೀಳಿಗೆಯ ಚುನಾವಣಾ ತಂತ್ರಗಾರ ಎಂದೇ ಖ್ಯಾತಿ ಪಡೆದಿರುವ ಪ್ರಶಾಂತ್ ಕಿಶೋರ್ ಆಮ್ ಆದ್ಮಿ ಪಕ್ಷದ ಪರವಾಗಿ ಕೆಲಸ ಮಾಡಲಿದ್ದಾರೆ.
ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ಟ್ವೀಟ್ ಮಾಡಿ ಪ್ರಶಾಂತ್ ಕಿಶೋರ್ ನೇತೃತ್ವದ ಐಪ್ಯಾಕ್ ಸಂಸ್ಥೆ ನಮ್ಮ ಜೊತೆ ಕೆಲಸ ಮಾಡಲಿದೆ ಎಂದು ಪ್ರಕಟಿಸಿದ್ದಾರೆ.
Advertisement
Happy to share that @indianpac is coming on-board with us. Welcome aboard!
— Arvind Kejriwal (@ArvindKejriwal) December 14, 2019
Advertisement
ಇಂಡಿಯನ್ ಪೊಲಿಟಿಕಲ್ ಆಕ್ಷನ್ ಕಮಿಟಿ(ಐ-ಪ್ಯಾಕ್) ಈಗ ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಪರವಾಗಿ 2021ರ ಚುನಾವಣೆ ಕೆಲಸ ಮಾಡುತ್ತಿದೆ. ಇದನ್ನೂ ಓದಿ: ಆಂಧ್ರದಲ್ಲಿ ನಾಯ್ಡುಗೆ ಹೀನಾಯ ಸೋಲು -ಜಗನ್ ಗೆಲುವಿನ ಹಿಂದಿದೆ ಪ್ರಶಾಂತ್ ಕಿಶೋರ್ ತಂತ್ರಗಾರಿಕೆ!
Advertisement
ಪ್ರಶಾಂತ್ ಕಿಶೋರ್ ಇತ್ತೀಚಿಗೆ ನಡೆದ ಲೋಕಸಭೆ ಮತ್ತು ವಿಧಾನಸಭಾ ಚುನಾವಣೆಯಲ್ಲಿ ಆಂಧ್ರಪ್ರದೇಶದಲ್ಲಿ ವೈ ಜಗನ್ ಮೋಹನ್ ರೆಡ್ಡಿಯ ವೈಎಸ್‍ಆರ್ ಕಾಂಗ್ರೆಸ್ ಪರವಾಗಿ ಕೆಲಸ ಮಾಡಿ ಅಲ್ಲಿ ಪಕ್ಷ ಅಧಿಕಾರಕ್ಕೆ ಬರುವಂತೆ ನೋಡಿಕೊಂಡಿದ್ದರು. ಜೆಡಿಯು ಉಪಾಧ್ಯಕ್ಷರಾಗಿರುವ ಪ್ರಶಾಂತ್ ಕಿಶೋರ್ ಪೌರತ್ವ ತಿದ್ದುಪಡಿ ಮಸೂದೆಯನ್ನು ವಿರೋಧಿಸಿದ್ದರು. ಆದರೆ ಸಂಸತ್ತಿನಲ್ಲಿ ಜೆಡಿಯು ಮೋದಿ ಸರ್ಕಾರವನ್ನು ಬೆಂಬಲಿಸಿತ್ತು. ಈ ವಿಚಾರಕ್ಕೆ ಸಂಬಂಧಿಸಿದಂತೆ ಬಿಹಾರ ಸಿಎಂ ನಿತೀಶ್ ಕುಮಾರ್ ಜೊತೆ ಭಿನ್ನಾಭಿಪ್ರಾಯ ಎದ್ದಿದೆ ಎನ್ನುವ ಸುದ್ದಿ ಪ್ರಕಟವಾಗಿದೆ.
Advertisement
After Punjab results, we acknowledged you as the toughest opponent that we have ever faced. Happy to join forces now with @ArvindKejriwal and @AamAadmiParty. https://t.co/5Rcz4ie6Xs
— I-PAC (@IndianPAC) December 14, 2019
ಯಾರಿಗಾದರೂ ಪಕ್ಷದ ತೀರ್ಮಾನದ ಬಗ್ಗೆ ಭಿನ್ನಾಭಿಪ್ರಾಯವಿದ್ದರೆ ಅವರು ಪಕ್ಷ ಬಿಟ್ಟು ಹೋಗಬಹುದು ಎಂಬ ಸಂದೇಶವನ್ನು ಬಿಹಾರ ಸಿಎಂ ನಿತೀಶ್ ಕುಮಾರ್ ರವಾನಿಸಿದ್ದಾರೆ. ಈ ಸಂಬಂಧ ಪ್ರತಿಕ್ರಿಯಿಸಿರುವ ಜೆಡಿಯು ಸಂಸದರಾದ ರಾಮ್‍ಚಂದ್ರ ಸಿಂಗ್ ನಾನು ಯಾರ ಹೆಸರನ್ನೂ ಹೇಳುವುದಿಲ್ಲ. ಆದರೆ ಯಾರಿಗಾದರೂ ಸಮಸ್ಯೆ ಇದ್ದಲ್ಲಿ ಅವರು ಪಕ್ಷ ಬಿಟ್ಟು ಹೋಗಲು ಮುಕ್ತರು ಎಂದಿದ್ದಾರೆ.
ಪ್ರಶಾಂತ್ ಕಿಶೋರ್ ಯಾರು?:
2014ರ ಲೋಕಸಭಾ ಚುನಾವಣೆಯಲ್ಲಿ ಮೋದಿ ಕ್ಯಾಂಪ್‍ನಲ್ಲಿ ಗುರುತಿಸಿಕೊಂಡಿದ್ದ ಪ್ರಶಾಂತ್ ಕಿಶೋರ್ ನಂತರ ಬಿಹಾರ ಚುನಾವಣೆಯಲ್ಲಿ ನಿತೀಶ್ ಕುಮಾರ್ ಕ್ಯಾಂಪ್‍ನಲ್ಲಿ ಗುರುತಿಸಿಕೊಂಡು ಗೆಲುವಿನ ರೂವಾರಿಯಾಗಿದ್ದರು. ಈ ಕಾರಣಕ್ಕಾಗಿ ಪ್ರಶಾಂತ್ ಕಿಶೋರ್ ಅವರಿಗೆ ರಾಹುಲ್ ಗಾಂಧಿ ಉತ್ತರ ಪ್ರದೇಶ ಚುನಾವಣೆ ಉಸ್ತುವಾರಿ ವಹಿಸಿದ್ದರು. ಆದರೆ ಉತ್ತರ ಪ್ರದೇಶದಲ್ಲಿ ಪ್ರಶಾಂತ್ ಕಿಶೋರ್ ತಂತ್ರಗಾರಿಕೆಗೆ ಸೋಲಾಗಿತ್ತು. ಮೇಲ್ವರ್ಗದ ಮತಗಳನ್ನು ಸೆಳೆಯುವ ಉದ್ದೇಶ ಮತ್ತು ಕಾಂಗ್ರೆಸ್ ಯಾವಾಗಲೂ ಅಲ್ಪಸಂಖ್ಯಾತ ಮತ್ತು ಹಿಂದುಳಿದ ವರ್ಗಗಳ ಪಕ್ಷ ಎನ್ನುವ ಕಲ್ಪನೆಯಿಂದ ಹೊರಬರಲು ಪ್ರಶಾಂತ್ ಕಿಶೋರ್ ಅವರು ಈ ಬ್ರಾಹ್ಮಣ ಸಮುದಾಯ ವ್ಯಕ್ತಿಯನ್ನು ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಕಣಕ್ಕೆ ಇಳಿಸಲು ಶೀಲಾ ದೀಕ್ಷಿತ್ ಅವರನ್ನು ಸಿಎಂ ಅಭ್ಯರ್ಥಿಯನ್ನಾಗಿ ಘೋಷಿಸುವಂತೆ ಸಲಹೆ ನೀಡಿದ್ದರು. ಈ ಸಲಹೆಗೆ ಕಾಂಗ್ರೆಸ್ ವಲಯದಲ್ಲಿ ವಿರೋಧ ವ್ಯಕ್ತವಾಗಿತ್ತು. ಇದನ್ನೂ ಓದಿ: ಅಮಿತ್ ಶಾ ಸಲಹೆ ನಂತ್ರ ಜೆಡಿಯುಗೆ ಪ್ರಶಾಂತ್ ಕಿಶೋರ್ ಸೇರ್ಪಡೆ
2014ರ ಚುನಾವಣೆಯ ವೇಳೆ ಪ್ರಶಾಂತ್ ಕಿಶೋರ್ ಸಲಹೆಯಂತೆ ಚಾಯ್‍ಪೇ ಚರ್ಚಾ ಬಿಜೆಪಿಗೆ ಭಾರೀ ಯಶಸ್ಸನ್ನು ತಂದುಕೊಟ್ಟಿತ್ತು. ಇದಾದ ಬಳಿಕ ಅಮಿತ್ ಶಾ ಜೊತೆಗಿನ ಭಿನ್ನಾಭಿಪ್ರಾಯದಿಂದಾಗಿ ಪ್ರಶಾಂತ್ ಕಿಶೋರ್ ಬಿಜೆಪಿ ಪಾಳೆಯವನ್ನು ತೊರೆದಿದ್ದರು. ಬಿಹಾರದಲ್ಲಿ ಮಹಾಘಟ್‍ಬಂಧನ್ ಮೈತ್ರಿಕೂಟ ನಡೆಸಿ ನಿತೀಶ್ ಕುಮಾರ್ ಅವರನ್ನು ಪ್ರಶಾಂತ್ ಕಿಶೋರ್ ಗೆಲ್ಲಿಸಿದ್ದರು. 2017ರ ಪಂಜಾಬ್ ವಿಧಾನಸಭಾ ಚುನಾವಣೆ ವೇಳೆ ಪ್ರಶಾಂತ್ ಕಿಶೋರ್ ತಂಡ ಕಾಂಗ್ರೆಸ್‍ನೊಂದಿಗೆ ಕೈಜೋಡಿಸಿತ್ತು. ಆಗಲೂ ಕ್ಯಾಪ್ಟನ್ ಅಮರೀಂದರ್ ಸಿಂಗ್ ಎದುರಾಳಿಯನ್ನ ಮಣಿಸಿ ಅಧಿಕಾರ ಹಿಡಿದರು. ಹಲವು ವರ್ಷಗಳಿಂದ ಚುನಾವಣೆಯಲ್ಲಿ ಸತತ ಸೋಲು ಕಂಡಿದ್ದ ಕಾಂಗ್ರೆಸ್‍ಗೆ ಈ ಗೆಲುವು ಸಮಾಧಾನ ತಂದುಕೊಟ್ಟಿತ್ತು.
ಜಗನ್ ಕ್ಲಿಕ್:
ವಿಧಾನಸಭಾ ಚುನಾವಣಾ ಪ್ರಚಾರದ ಹಿನ್ನಲೆಯಲ್ಲಿ ಸಿದ್ಧಪಡಿಸಿದ ರಾವಾಲಿ ಜಗನ್ (ಜಗನ್ ಬರಬೇಕು), ಕಾವಾಲಿ ಜಗನ್ (ಜಗನ್ ಬೇಕು) ಹಾಡು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಯೂಟ್ಯೂಬ್‍ನಲ್ಲಿ ಈ ಹಾಡು ಬರೊಬ್ಬರಿ 2.2 ಕೋಟಿಗೂ ಅಧಿಕ ವೀಕ್ಷಣೆಯಾಗಿತ್ತು. ಅಷ್ಟೇ ಅಲ್ಲದೆ ಸಾಮಾಜಿಕ ಜಾಲತಾಣವನ್ನು ಜಗನ್‍ಮೋಹನ್ ಅವರು ಸಮರ್ಪಕವಾಗಿ ಬಳಸಿಕೊಂಡರು. ಈ ಮೂಲಕ ಯುವಕರ ಗಮನವನ್ನು ಸೆಳೆದು ಭರ್ಜರಿ ಗೆಲುವು ಸಾಧಿಸಿದರು. ಜಗನ್‍ಮೋಹನ್ ಅವರ ಈ ಎಲ್ಲ ಯಶಸ್ವಿ ಪ್ರಚಾರದ ಹಿಂದೆ ಪ್ರಶಾಂತ್ ಕಿಶೋರ್ ಅವರ ತಂತ್ರಗಾರಿಕೆ ಅಡಗಿತ್ತು.