ನವದೆಹಲಿ: ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಮನೆಯ ಮೇಲೆ ನಡೆದ ದಾಳಿಗೆ ಸಂಬಂಧಿಸಿದಂತೆ 8 ಜನರನ್ನು ದೆಹಲಿ ಪೊಲೀಸರು ಗುರುವಾರ ಬಂಧಿಸಿದ್ದಾರೆ.
ಬುಧವಾರ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸದ ಮೇಲೆ ದುಷ್ಕರ್ಮಿಗಳ ಗುಂಪೊಂದು ದಾಳಿ ನಡೆಸಿತ್ತು. ದೆಹಲಿ ಸಿಎಂ ಕೇಜ್ರಿವಾಲ್ ಅವರ ನಿವಾಸದ ಭದ್ರತಾ ಆಸ್ತಿಗಳನ್ನು ಬಿಜೆಪಿ ಕಾರ್ಯಕರ್ತರು ಧ್ವಂಸಗೊಳಿಸಿದ್ದಾರೆ. ಸಿಸಿಟಿವಿ ಕ್ಯಾಮೆರಾಗಳು ಹಾಗೂ ಭದ್ರತಾ ತಡೆಗೋಡೆಗಳು ಧ್ವಂಸವಾಗಿದೆ. ಈ ಮೂಲಕ ಕೇಜ್ರಿವಾಲ್ ಹತ್ಯೆಗೆ ಬಿಜೆಪಿ ಯತ್ನಿಸಿದೆ ಎಂದು ಆಪ್ ಮುಖಂಡರು ಆರೋಪಿಸಿದ್ದರು.
ಇತ್ತೀಚೆಗೆ ಬಿಡುಗಡೆಯಾಗಿದ್ದ ವಿವೇಕ್ ಅಗ್ನಿಹೋತ್ರಿ ನಿರ್ದೇಶನದ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ಕುರಿತು ಕೇಜ್ರಿವಾಲ್ ವಿರೋಧವಾಗಿ ಹೇಳಿಕೆ ನೀಡಿದ್ದರು. ಇದಕ್ಕಾಗಿ ಅವರ ನಿವಾಸದ ಮುಂದೆ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಭದ್ರತಾ ತಡೆಗೋಡೆ ಹಾಗೂ ಸಿಸಿಟಿವಿ ಕ್ಯಾಮೆರಾಗಳು ಧ್ವಂಸಗೊಂಡಿದೆ ಎಂಬ ಆರೋಪ ಕೇಳಿ ಬಂದಿದೆ. ಇದನ್ನೂ ಓದಿ: ಕೇಜ್ರಿವಾಲ್ ತಪ್ಪಿಸಿಕೊಳ್ಳಲು ಇರುವ ಒಂದೇ ಮಾರ್ಗ ಬಲಿಪಶು: ಗಂಭೀರ್
ಘಟನೆ ಸಂಬಂಧಿಸಿ ಇನ್ನೂ ಕೆಲವರ ಪತ್ತೆಗಾಗಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇದಕ್ಕಾಗಿದೆಯೇ 6 ಪೊಲೀಸರ ತಂಡವೊಂದು ಘಟನೆಗೆ ಸಂಬಂಧಿಸಿ ತನಿಖೆ ಕೈಗೊಂಡಿದೆ. ಇದನ್ನೂ ಓದಿ: ಕೇಜ್ರಿವಾಲ್ ಹತ್ಯೆಗೆ ಬಿಜೆಪಿ ಯತ್ನ – ಎಎಪಿ ಆರೋಪ