ನವದೆಹಲಿ: ಲಾಕ್‍ಡೌನ್ ಹಿನ್ನೆಲೆ ಸಂಕಷ್ಟದಲ್ಲಿರುವ ಆಟೋ, ರಿಕ್ಷಾ, ಇ ರಿಕ್ಷಾ, ಕ್ಯಾಬ್ ಚಾಲಕರ ನೆರವಿಗೆ ನಿಂತಿರುವ ಸಿಎಂ ಅರವಿಂದ್ ಕೇಜ್ರಿವಾಲ್ ನೇತೃತ್ವದ ದೆಹಲಿ ಸರ್ಕಾರ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದೆ.
ರಿಕ್ಷಾ, ಆಟೋ, ಇ ರಿಕ್ಷಾ ಚಾಲಕರು, ಕ್ಯಾಬ್ ಚಾಲಕರಿಗೆ 5,000 ರೂಪಾಯಿಗಳ ನೆರವು ನೀಡುವುದಾಗಿ ಅರವಿಂದ್ ಕೇಜ್ರಿವಾಲ್ ಅವರು ಘೋಷಣೆ ಮಾಡಿದ್ದಾರೆ. ಇಂದು ಸಂಜೆ ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು ಲಾಕ್‍ಡೌನ್ ಹಿನ್ನೆಲೆ ಆಟೋ ರಿಕ್ಷಾ ಚಾಲಕರಿಗೆ ಸಂಕಷ್ಟ ಎದುರಾಗಿದ್ದು, ಇವರ ನೆರವಿಗೆ ಸರ್ಕಾರ ನಿಲ್ಲಲಿದೆ ಎಂದರು.
Advertisement
कुछ दिनों से ऑटो, रिक्शा, RTV वालों के मैसेज और फोन आए कि उनकी रोज़ी रोटी बंद हो गई है
मैं उनसे कहना चाहता हूं कि आप सब मेरे भाई जैसे है, मैं किसी भी व्यक्ति को भुखमरी में नहीं रहने दे सकता
सभी पब्लिक सर्विस वाहन चलाने वालों के अकाउंट में ₹5,000 डाले जाएंगे। pic.twitter.com/Ga9Z2KZPPb
— Arvind Kejriwal (@ArvindKejriwal) April 2, 2020
Advertisement
ಪ್ರತಿ ಚಾಲಕನಿಗೆ 5,000 ನೀಡಲು ಸರ್ಕಾರ ನಿರ್ಧರಿಸಿದ್ದು, ಮುಂದಿನ 7ರಿಂದ 10 ದಿನಗಳಲ್ಲಿ ಚಾಲಕರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುವುದು ಎಂದು ಕೇಜ್ರಿವಾಲ್ ಹೇಳಿದರು. ಚಾಲಕರ ಬ್ಯಾಂಕ್ ಖಾತೆಗಳ ಮಾಹಿತಿ ಸರ್ಕಾರದ ಬಳಿ ಇಲ್ಲ. ಹೀಗಾಗಿ ಚಾಲಕರ ಮಾಹಿತಿ ಪಡೆದು ಖಾತೆಗಳಿಗೆ ಹಣ ವರ್ಗಾವಣೆ ಮಾಡಲಾಗುವುದು ಎಂದು ಸ್ಪಷ್ಟಪಡಿಸಿದರು. ಪ್ರತಿ ನಿತ್ಯ 6 ಲಕ್ಷಕ್ಕೂ ಅಧಿಕ ಜನರಿಗೆ ಊಟ ಮತ್ತು ರಾತ್ರಿ ಭೋಜನ ನೀಡಲಾಗುತ್ತಿದೆ ಎಲ್ಲ ರೀತಿಯ ನೆರವು ನೀಡಲು ಸರ್ಕಾರ ಸಿದ್ಧವಿದೆ ಎಂದು ತಿಳಿಸಿದರು.
Advertisement
दिल्ली के 6 लाख लोगों को हम हमारे रैन बसेरों और स्कूलों द्वारा दो वक़्त का खाना खिला रहे हैं। कोरोना को फैलने से रोकने के अलावा ये भी हमारी प्राथमिकता है की दिल्ली में कोई भी भूखा न रहे pic.twitter.com/uXAV8Wthwl
— Arvind Kejriwal (@ArvindKejriwal) April 2, 2020
Advertisement
ದೆಹಲಿಯಲ್ಲಿ ಈವರೆಗೂ 209 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, ಈ ಪೈಕಿ 108 ಮಂದಿ ನಿಜಾಮುದ್ದೀನ್ ಮರ್ಕಜ್‍ನಿಂದ ಬಂದವರಾಗಿದ್ದಾರೆ. ನಿಜಾಮುದ್ದೀನ್ ಮರ್ಕಜ್‍ನಲ್ಲಿದ್ದ 2,346 ಮಂದಿ ಪೈಕಿ 1,810 ಮಂದಿಯನ್ನು ಕ್ವಾರಂಟೈನ್‍ನಲ್ಲಿ ಇಡಲಾಗಿದ್ದು, 536 ಮಂದಿಯನ್ನು ಆಸ್ಪತ್ರೆಗೆ ವರ್ಗಾಯಿಸಲಾಗಿದೆ. ಈವರೆಗೆ 4 ಮಂದಿ ಸಾವನ್ನಪ್ಪಿದ್ದು, ಅದರಲ್ಲಿ ಇಬ್ಬರು ಮರ್ಕಜ್‍ನೊಂದಿಗೆ ಸಂಪರ್ಕ ಇದ್ದವರು ಎಂದು ಕೇಜ್ರಿವಾಲ್ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.