ನವದೆಹಲಿ: ದೆಹಲಿ ಮುಖ್ಯಮಂತ್ರಿಗಳ (Delhi CM) ನಿವಾಸವನ್ನು ಬಿಜೆಪಿ (BJP) ಒತ್ತಡದಿಂದ ಬಲವಂತವಾಗಿ ಖಾಲಿ ಮಾಡಿಸಲಾಗಿದೆ ಎಂದು ಆಮ್ ಆದ್ಮಿ ಪಕ್ಷ (AAP) ಆರೋಪಿಸಿದೆ.
ದೆಹಲಿ ಮುಖ್ಯಮಂತ್ರಿ ಅತಿಶಿ (Atishi) ಅವರು ತಮ್ಮ ಅಧಿಕೃತ ನಿವಾಸಕ್ಕೆ ತೆರಳಿದ ಎರಡು ದಿನಗಳ ನಂತರ ಅವರನ್ನು ಹೊರಹಾಕಲಾಗಿದೆ ಎಂದು ಎಎಪಿ ದೂರಿದೆ. ಈ ಆರೋಪವು ಎಎಪಿ ಮತ್ತು ಕೇಂದ್ರ ಸರ್ಕಾರದ ನಡುವಿನ ಜಟಾಪಟಿಗೆ ಕಾರಣವಾಗಿದೆ. ಇದನ್ನೂ ಓದಿ: ಇವಿಎಂ ಹ್ಯಾಕ್ ಮಾಡಲಾಗಿದೆ: ಹರಿಯಾಣ ಸೋಲಿನ ಬಗ್ಗೆ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು
Advertisement
Advertisement
ದೆಹಲಿ ಮುಖ್ಯಮಂತ್ರಿ ಕಚೇರಿಯಿಂದ ಅತಿಶಿ ಅವರ ವಸ್ತುಗಳನ್ನು ಬಿಜೆಪಿ ಆಜ್ಞೆಯ ಮೇರೆಗೆ ಲೆಫ್ಟಿನೆಂಟ್ ಗವರ್ನರ್ ವಿನಯ್ ಸಕ್ಸೇನಾ ಅವರು ಬಲವಂತವಾಗಿ ತೆಗೆಸಿದ್ದಾರೆ ಎಂದು ಎಎಪಿ ಆರೋಪಿಸಿದೆ. ಆದರೆ ಸಕ್ಸೇನಾ ಅವರು ಈ ಆರೋಪಗಳನ್ನು ತಳ್ಳಿಹಾಕಿದ್ದಾರೆ.
Advertisement
ದೇಶದ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಮುಖ್ಯಮಂತ್ರಿ ನಿವಾಸವನ್ನು ತೆರವು ಮಾಡಲಾಗಿದೆ. ಬಿಜೆಪಿಯ ಆಜ್ಞೆಯ ಮೇರೆಗೆ ಲೆಫ್ಟಿನೆಂಟ್ ಗವರ್ನರ್, ಮುಖ್ಯಮಂತ್ರಿ ಅತಿಶಿ ಅವರ ವಸ್ತುಗಳನ್ನು ಮುಖ್ಯಮಂತ್ರಿ ನಿವಾಸದಿಂದ ಬಲವಂತವಾಗಿ ತೆಗೆದುಹಾಕಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿ ಆರೋಪಿಸಿದ್ದಾರೆ. ಇದನ್ನೂ ಓದಿ: ವೈಜಾಗ್ ಸ್ಟೀಲ್ ಪುನಶ್ಚೇತನ ವಿಚಾರ – ನಿರ್ಮಲಾ ಸೀತಾರಾಮನ್, ನಾಯ್ಡು ಜೊತೆಗೆ ಹೆಚ್‌ಡಿಕೆ ಚರ್ಚೆ
Advertisement
ಮುಖ್ಯಮಂತ್ರಿ ಅತಿಶಿ ಅವರಿಗೆ ಈ ಮನೆಯನ್ನು (ಸಿವಿಲ್ ಲೈನ್ಸ್‌ನ 6, ಫ್ಲ್ಯಾಗ್ ಸ್ಟಾಪ್ ರಸ್ತೆಯಲ್ಲಿರುವ ಸಿಎಂ ನಿವಾಸ) ಇನ್ನೂ ಮಂಜೂರು ಮಾಡಿಲ್ಲ. ಅವರಿಗೆ ಮಂಜೂರು ಮಾಡಿದ ನಿವಾಸವು ಇನ್ನೂ 17 ಎಬಿ ಮಥುರಾ ರಸ್ತೆಯಾಗಿದೆ. ಎರಡು ಮನೆಗಳನ್ನು ಹೇಗೆ ಮಂಜೂರು ಮಾಡಲು ಸಾಧ್ಯ ಎಂದು ಗವರ್ನರ್ ಕಚೇರಿ ಮೂಲಗಳು ತಿಳಿಸಿವೆ.