ನವದೆಹಲಿ: ಸಂಜೀವಿನಿ, ಮಹಿಳಾ ಸಮ್ಮಾನ್‌ನಂತಹ ಜನಪರ ಯೋಜನೆಗಳನ್ನು ನಮ್ಮ ಸರ್ಕಾರ ಜಾರಿ ಮಾಡುತ್ತಿದ್ದು, ಇದನ್ನು ಸಹಿಸಲಾಗದ ಜನರು ಮುಖ್ಯಮಂತ್ರಿ ಅತಿಶಿ (Atishi) ಅವರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಲು ಸಂಚು ರೂಪಿಸುತ್ತಿದ್ದಾರೆ ಎಂದು ಆಪ್ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ (Arvind Kejriwal) ಆರೋಪಿಸಿದ್ದಾರೆ.
ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೆಲವು ದಿನಗಳ ಹಿಂದೆ ಇಡಿ, ಐಟಿ ಮತ್ತು ಸಿಬಿಐ ಅಧಿಕಾರಿಗಳ ಸಭೆ ನಡೆದಿದೆ. ಮೇಲಿನಿಂದ ಸಿಎಂ ಅತಿಶಿ ಬಂಧಿಸಲು ಅವರಿಗೆ ಆದೇಶ ಬಂದಿದೆ ಎಂದು ನನ್ನ ಮೂಲಗಳಿಂದ ತಿಳಿದುಬಂದಿದೆ. ನಾನು ಸಂಪೂರ್ಣ ಜವಾಬ್ದಾರಿಯಿಂದ ಈ ಗಂಭೀರ ಆರೋಪ ಮಾಡುತ್ತಿದ್ದೇನೆ ಎಂದು ಹೇಳಿದರು. ಇದನ್ನೂ ಓದಿ: ಗೂಂಡಗಳಿಂದ ಗಲಾಟೆ ಮಾಡಿಸಿ ನನ್ನ ಮೇಲೆ ಆರೋಪ: ಮುನಿರತ್ನಗೆ ಡಿಕೆಸು ತಿರುಗೇಟು
Advertisement
Advertisement
ಕಳೆದ ಹತ್ತು ವರ್ಷಗಳಲ್ಲಿ ದೆಹಲಿಯಲ್ಲಿ ಬಿಜೆಪಿಗೆ ಯಾವುದೇ ಕೆಲಸವಿಲ್ಲ. ಅವರು ಕೇಜ್ರಿವಾಲ್ ಅವರನ್ನು ಟೀಕಿಸುವ ಮತ್ತು ನಿಂದಿಸುವ ಮೂಲಕ ಮತ ಕೇಳುತ್ತಿದ್ದಾರೆ. ಆದರೆ ಆಮ್ ಆದ್ಮಿ ಪಕ್ಷವು ತಾನು ಮಾಡಿದ ಕೆಲಸದ ಆಧಾರದ ಮೇಲೆ ಮತ ಕೇಳುತ್ತಿದೆ. ನಾವು ಮಹಿಳಾ ಸಮ್ಮಾನ್ ಯೋಜನೆಯನ್ನು ಘೋಷಿಸಿದ್ದೇವೆ ಮತ್ತು ಹಿರಿಯ ನಾಗರಿಕರಿಗೆ ಉಚಿತ ವೈದ್ಯಕೀಯ ಚಿಕಿತ್ಸೆಯ ಯೋಜನೆಯನ್ನು ಘೋಷಿಸಿದ್ದೇವೆ. ಈ ಯೋಜನೆಗಳ ನೋಂದಣಿಯಿಂದ ಬಿಜೆಪಿಗೆ ತೊಂದರೆಯಾಗಿದೆ ಎಂದರು. ಇದನ್ನೂ ಓದಿ: ವಾಜಪೇಯಿ ಜನ್ಮದಿನಕ್ಕೆ ಮೋದಿ ಗಿಫ್ಟ್ – ದೇಶದ ಮೊದಲ ನದಿ ಜೋಡಣೆ ಯೋಜನೆಗೆ ಶಿಲಾನ್ಯಾಸ
Advertisement
ದೆಹಲಿ ಮುಖ್ಯಮಂತ್ರಿ ಅತಿಶಿ ಮಾತನಾಡಿ, ದೆಹಲಿಯಲ್ಲಿ ಮಹಿಳೆಯರ ಉಚಿತ ಬಸ್ ಪ್ರಯಾಣವನ್ನು ತಡೆಯಲು ನನ್ನ ವಿರುದ್ಧ ನಕಲಿ ಪ್ರಕರಣ ದಾಖಲಿಸುವ ಪ್ರಯತ್ನ ಮಾಡಲಾಗುತ್ತಿದೆ. ನಾವು ಇಲ್ಲಿಯವರೆಗೆ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇವೆ ಹಾಗಾಗಿ ಅವರ ಏಜೆನ್ಸಿಗಳು ನನ್ನನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದರೆ, ಅಂತಿಮವಾಗಿ ಸತ್ಯಕ್ಕೆ ಜಯ ಸಿಗುತ್ತದೆ ಎಂಬ ವಿಶ್ವಾಸ ನನಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಕಝಾಕಿಸ್ತಾನದಲ್ಲಿ ದುರಂತ – ಪ್ರಯಾಣಿಕ ವಿಮಾನ ಪತನ
Advertisement
ಸುಳ್ಳು ಪ್ರಕರಣದ ನಂತರವೂ ನಮಗೆ ಜಾಮೀನು ಸಿಗುತ್ತದೆ ಎಂಬ ನ್ಯಾಯ ವ್ಯವಸ್ಥೆ ಮತ್ತು ಸಂವಿಧಾನದ ಮೇಲೆ ನನಗೆ ನಂಬಿಕೆ ಇದೆ. ದೆಹಲಿಯ ಜನ ಎಲ್ಲವನ್ನೂ ಗಮನಿಸುತ್ತಿದ್ದಾರೆ. ಬಿಜೆಪಿಗೆ ದೆಹಲಿಯ ಜನ ಉತ್ತರ ನೀಡಲಿದ್ದಾರೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಕುಸುಮಾರನ್ನು ಶಾಸಕಿಯನ್ನಾಗಿ ಮಾಡಲು ನನ್ನ ಕೊಲೆಗೆ ಸಂಚು, ಆಸೀಡ್ ದಾಳಿ : ಮುನಿರತ್ನ