ನವದೆಹಲಿ: ಕೆಲ ದಿನಗಳ ಹಿಂದೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಅವರು ʻ50 ವರ್ಷವಾದರೂ ನನಗೆ ಸ್ವಂತ ಮನೆಯಿಲ್ಲʼ ಎಂದು ಹೇಳಿಕೊಂಡಿದ್ದರು. ಇದರೊಂದಿಗೆ ಸಂಸದ ಸ್ಥಾನದಿಂದ ಅನರ್ಹಗೊಂಡ ಬೆನ್ನಲ್ಲೇ ಅಧಿಕೃತ ಸರ್ಕಾರಿ ನಿವಾಸವನ್ನು ತೊರೆಯುವಂತೆ ಸೂಚಿಸಿದೆ.
दिल्ली महिला कांग्रेस सेवादल की अध्यक्ष श्रीमती राजकुमारी गुप्ता जी ने मंगोलपुरी इलाके में अपना घर श्री @RahulGandhi जी के नाम कर दिया है, उन्हें यह घर इंदिरा गांधी जी के समय मिला था।
राजकुमारी जी बोलीं कि मोदी जी, राहुल जी को घर से निकाल सकते हैं, लेकिन लोगों के दिल से नहीं। pic.twitter.com/6wSx8mBhiv
— Congress Sevadal (@CongressSevadal) April 1, 2023
Advertisement
ಈ ನಡುವೆ ಕಾಂಗ್ರೆಸ್ ನಾಯಕಿಯೊಬ್ಬರು ರಾಹುಲ್ ಗಾಂಧಿ ಅವರಿಗೆ ತಮ್ಮ 4 ಅಂತಸ್ತಿನ ಮನೆಯನ್ನೇ ಬರೆದುಕೊಟ್ಟಿದ್ದಾರೆ. ರಾಹುಲ್ ಗಾಂಧಿ ಹೆಸರಿಗೆ ಮನೆ ಬರೆದ ಬಳಿಕ ಅವರು ಪ್ರಮಾಣಪತ್ರವನ್ನು ಮಾಧ್ಯಮದವರಿಗೆ ತೋರಿಸಿದ್ದಾರೆ. ಇದನ್ನೂ ಓದಿ: ರಾಹುಲ್ ಗಾಂಧಿ ಸಂಸದ ಸ್ಥಾನ ಅನರ್ಹಕ್ಕೆ ಅಮೆರಿಕ, ಜರ್ಮನಿ ಸ್ಪಂದನೆ ಅನಗತ್ಯ: ಕೇಂದ್ರ ಸಚಿವ ಜೈಶಂಕರ್
Advertisement
ದೆಹಲಿಯ ಕಾಂಗ್ರೆಸ್ ಸೇವಾ ದಳದ ಅಧ್ಯಕ್ಷೆ ರಾಜಕುಮಾರಿ ಗುಪ್ತಾ (Rajkumari Gupta) ಅವರು ಮಂಗೋಲ್ವುರಿ ಪ್ರದೇಶದಲ್ಲಿ ತಮ್ಮ ಹೆಸರಿನಲ್ಲಿದ್ದ 4 ಅಂತಸ್ತಿನ ಮನೆಯನ್ನು ರಾಗಾ ಹೆಸರಿಗೆ ವರ್ಗಾವಣೆ ಮಾಡಿದ್ದಾರೆ. ಗುಪ್ತಾ ಅವರು ಇಂದಿರಾ ಗಾಂಧಿ ಅವರ ಕಾಲದಲ್ಲಿ ಈ ಮನೆಯನ್ನು ಪಡೆದುಕೊಂಡಿದ್ದರು ಎಂಬುದು ವಿಶೇಷವಾಗಿದೆ. ಈ ಕುರಿತ ವೀಡಿಯೋ ತುಣುಕನ್ನು ಕಾಂಗ್ರೆಸ್ ಸಹ ತನ್ನ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದೆ.
Advertisement
Advertisement
ಬಳಿಕ ಮಾತನಾಡಿರುವ ರಾಜಕುಮಾರಿ ಗುಪ್ತಾ, ರಾಹುಲ್ ಗಾಂಧಿ ಅವರನ್ನ ಮೋದಿ ಅವರು ಮನೆಯಿಂದ ಓಡಿಸಬಹುದು. ಆದರೆ ಜನರ ಹೃದಯದಿಂದ ಓಡಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ರಾಹುಲ್ ಗಾಂಧಿ ತಮ್ಮ ಪಕ್ಷಕ್ಕೆ ರಾಹು ಆಗಿದ್ದಾರೆ: ನಾಲಿಗೆ ಹರಿಬಿಟ್ಟ ಶಿವರಾಜ್ ಸಿಂಗ್ ಚೌಹಾಣ್
ರಾಹುಲ್ ಗಾಂಧಿ ಅವರು ಸಂಸದ ಸ್ಥಾನದಿಂದ ಅನರ್ಹಗೊಳ್ಳುತ್ತಿದ್ದಂತೆ ತಿಂಗಳೊಳಗೆ ದೆಹಲಿಯಲ್ಲಿರುವ ತುಘಲಕ್ ಲೇನ್ (Tughlaq Lane bungalow) ಬಂಗಲೆ ತೊರೆಯುವಂತೆ ಲೋಕಸಭಾ ವಸತಿ ಸಮಿತಿ ನೋಟಿಸ್ ನೀಡಿದೆ. ಮನೆ ಖಾಲಿ ಮಾಡುವುದಾಗಿ ರಾಹುಲ್ ಗಾಂಧಿ ಸಹ ಪ್ರತಿಕ್ರಿಯೆ ನೀಡಿದ್ದಾರೆ.