ಬೆಂಗಳೂರು: ನ್ಯೂಯಾರ್ಕ್‍ನಿಂದ (New York) ನವದೆಹಲಿಗೆ (Delhi) ಸಂಚರಿಸುತ್ತಿದ್ದ ಏರ್ ಇಂಡಿಯಾ (Air India) ವಿಮಾನದಲ್ಲಿ ಮಹಿಳೆಯೊಬ್ಬರ ಮೇಲೆ ಸಹಪ್ರಯಾಣಿಕ ಕಂಠಪೂರ್ತಿ ಕುಡಿದು ಮೂತ್ರ ವಿಸರ್ಜಿಸಿದ ಆರೋಪಿ ಶಂಕರ್ ಮಿಶ್ರಾನನ್ನು (Shankar Mishra) ಬೆಂಗಳೂರಿನಲ್ಲಿ (Bengaluru) ದೆಹಲಿ ಪೊಲೀಸರು ಬಂಧಿಸಿದ್ದಾರೆ.
Advertisement
ಏರ್ ಇಂಡಿಯಾ ವಿಮಾನದಲ್ಲಿ ಮೂತ್ರ ವಿಸರ್ಜಿಸಿದ ಕುರಿತಾಗಿ ಮಹಿಳೆ ಟಾಟಾ ಸನ್ಸ್ ಗ್ರೂಪ್‍ನ (Tata Groups) ಮುಖ್ಯಸ್ಥ ನಟರಾಜನ್ ಚಂದ್ರಶೇಖರನ್ ಅವರಿಗೆ ಪತ್ರ ಬರೆದು ಮಾಹಿತಿ ಹಂಚಿಕೊಂಡಿದ್ದರು. ಆ ಬಳಿಕ ಆರೋಪಿ ಶಂಕರ್ ಮಿಶ್ರಾ ತಲೆಮರೆಸಿಕೊಂಡಿದ್ದ. ಎಸ್ಕೇಪ್ ಆಗಿ ಬೆಂಗಳೂರಿನಲ್ಲಿ ತಲೆ ಮರೆಸಿಕೊಂಡಿರುವ ಮಾಹಿತಿ ಮೇರೆಗೆ ದೆಹಲಿ ಪೊಲೀಸರು ಬೆಂಗಳೂರಿಗೆ ಆಗಮಿಸಿ ಆರೋಪಿ ಪತ್ತೆಗಾಗಿ ಕಾರ್ಯಚರಣೆಯಲ್ಲಿ ತೊಡಗಿದ್ದರು. ಇದೀಗ ಬೆಂಗಳೂರಿನ ಸಂಜಯ್ ನಗರ ಗೆಸ್ಟ್ ಹೌಸ್‍ನಲ್ಲಿ ತಲೆಮರೆಸಿಕೊಂಡಿದ್ದ ಶಂಕರ್ ಮಿಶ್ರಾನ ಬಂಧವಾಗಿದೆ. ಇದನ್ನೂ ಓದಿ: ಮಹಿಳೆ ಮೇಲೆ ಮೂತ್ರ ವಿಸರ್ಜನೆ – ಬೆಂಗಳೂರು ಕಂಪನಿಯಿಂದ ಆರೋಪಿ ವಜಾ
Advertisement
Advertisement
ಏನಿದು ಘಟನೆ?
ನ್ಯೂಯಾರ್ಕ್‍ನಿಂದ ದೆಹಲಿಗೆ ನ.26 ರಂದು ಏರ್ ಇಂಡಿಯಾ ವಿಮಾನ AI-102 ಸಂಚರಿಸುತ್ತಿತ್ತು. ಈ ವಿಮಾನದಲ್ಲಿ ಬ್ಯುಸಿನೆಸ್ ಕ್ಲಾಸ್‍ನಲ್ಲಿ ಸಂಚರಿಸುತ್ತಿದ್ದ ಪುರುಷ ಪ್ರಯಾಣಿಕರೊಬ್ಬರು ಕುಡಿದ ಮತ್ತಿನಲ್ಲಿ ಸಹಪ್ರಯಾಣಿಕರಾಗಿದ್ದ ಮಹಿಳೆ ಮೇಲೆ ಮೂತ್ರ ವಿಸರ್ಜಿಸಿದ್ದರು. ಮೂತ್ರದಿಂದ ಮಹಿಳೆಯ ಬಟ್ಟೆ, ಶೂ, ಬ್ಯಾಗ್ ಒದ್ದೆಯಾಗಿತ್ತು. ಬ್ಯಾಗ್‍ನಲ್ಲಿ ಅಮೆರಿಕನ್ ಕರೆನ್ಸಿ, ಪಾಸ್‍ಪೋರ್ಟ್ ಸೇರಿ ಮುಖ್ಯವಾದ ದಾಖಲೆಗಳಿದ್ದವು. ಏರ್ ಹೋಸ್ಟೆಸ್ ಕೂಡಾ ಇದನ್ನು ಮುಟ್ಟಲು ನಿರಾಕರಿಸಿದ್ರು. ಬಳಿಕ ಮಹಿಳೆಯನ್ನು ಬಾತ್ ರೂಂಗೆ ಕರೆದುಕೊಂಡು ಹೋಗಿ ಬೇರೆ ಬಟ್ಟೆ ನೀಡಿದ್ರು. ನಂತರ ಬೇರೆ ಸೀಟ್ ಕೊಡುವಂತೆ ಮಹಿಳೆ ಕೇಳಿಕೊಂಡಿದ್ದರು. ಈ ವೇಳೆ ಸೀಟ್‍ಗಳೆಲ್ಲಾ ಭರ್ತಿಯಾಗಿದೆ ಎಂದು ಸಿಬ್ಬಂದಿ ಏರ್ ಹೋಸ್ಟೆಸ್ ಪ್ರಯಾಣ ಮಾಡುವ ಸೀಟ್ ನೀಡಿ ದೆಹಲಿ ಕರೆದುಕೊಂಡು ಬಂದಿದ್ದರು. ಇದನ್ನೂ ಓದಿ: ವಿಮಾನದಲ್ಲಿ ಕಂಠಪೂರ್ತಿ ಕುಡಿದು ಮಹಿಳೆ ಮೇಲೆ ಮೂತ್ರ ವಿಸರ್ಜಿಸಿದ ಸಹಪ್ರಯಾಣಿಕ
Advertisement
ಈ ಘಟನೆಯ ಬಳಿಕ ಮಹಿಳೆ ಬಳಿ ಶಂಕರ್ ಮಿಶ್ರಾ ಕ್ಷಮೆಯಾಚಿಸಿದ್ದ. ಆದರೆ ಏರ್ ಇಂಡಿಯಾ ಮಾತ್ರ ಮಿಶ್ರಾ ವಿರುದ್ಧ ಕ್ರಮ ಕೈಗೊಂಡಿರಲಿಲ್ಲ. ಜೊತೆಗೆ ಮಹಿಳೆಯೊಂದಿಗೆ ಏರ್ ಇಂಡಿಯಾ ಸಿಬ್ಬಂದಿ ನಡೆದುಕೊಂಡ ರೀತಿಯಿಂದ ಮನನೊಂದು ಮಹಿಳೆ ಈ ಬಗ್ಗೆ ಟಾಟಾ ಸನ್ಸ್ ಗ್ರೂಪ್‍ನ ಮುಖ್ಯಸ್ಥರಿಗೆ ಪತ್ರ ಬರೆದು ಮಾಹಿತಿ ಹಂಚಿಕೊಂಡಿದ್ದರು.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k