ನವದೆಹಲಿ: ದೆಹಲಿ ವಕ್ಫ್ ಬೋರ್ಡ್ (Delhi Waqf Board) ಅಕ್ರಮಗಳಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಎಎಪಿ ಶಾಸಕ ಅಮಾನತುಲ್ಲಾ ಖಾನ್ (Amanatullah Khan) ಅವರನ್ನು ಬಿಡುಗಡೆ ಮಾಡುವಂತೆ ರೋಸ್ ಅವೆನ್ಯೂ ನ್ಯಾಯಾಲಯವು ಆದೇಶಿಸಿದೆ. ಅವರ ವಿರುದ್ಧ ಸಲ್ಲಿಸಲಾದ ಆರೋಪಪಟ್ಟಿಯನ್ನು ಸ್ವೀಕರಿಸಲು ನಿರಾಕರಿಸಿದೆ.
ವಿಶೇಷ ನ್ಯಾಯಾಧೀಶ ಜಿತೇಂದ್ರ ಸಿಂಗ್ ಅವರು ಖಾನ್ ವಿರುದ್ಧ ಮುಂದುವರೆಯಲು ಸಾಕಷ್ಟು ಸಾಕ್ಷ್ಯಾಧಾರಗಳಿದ್ದರೂ, ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಯಾವುದೇ ಅನುಮತಿ ಇಲ್ಲ. ಆದ್ದರಿಂದ ಚಾರ್ಜ್‌ಶೀಟ್ ನಿರಾಕರಿಸಲಾಗಿದೆ ಎಂದು ನ್ಯಾಯಾಧೀಶರು ಹೇಳಿದರು. ಒಂದು ಲಕ್ಷ ರೂ. ಜಾಮೀನು ಬಾಂಡ್ ಮತ್ತು ಅಂತಹ ಮೊತ್ತದ ಒಂದು ಶ್ಯೂರಿಟಿಯ ಮೇಲೆ ಖಾನ್ ಅವರನ್ನು ತಕ್ಷಣವೇ ನ್ಯಾಯಾಂಗ ಬಂಧನದಿಂದ ಬಿಡುಗಡೆ ಮಾಡುವಂತೆ ನ್ಯಾಯಾಲಯ ಸೂಚಿಸಿದೆ. ಇದನ್ನೂ ಓದಿ: ನಕ್ಸಲರು ಊಟ ಮಾಡಿದ್ದ ಮನೆಗೆ ಎಎನ್‍ಎಫ್ ತಂಡ ಭೇಟಿ – ಚುರುಕುಗೊಂಡ ಕೂಂಬಿಂಗ್
Advertisement
Advertisement
ಅಮಾನತುಲ್ಲಾ ಖಾನ್ ಅವರು ದೆಹಲಿ ವಕ್ಫ್ ಬೋರ್ಡ್‌ನಲ್ಲಿ ಭ್ರಷ್ಟಾಚಾರದ ಮೂಲಕ ಗಳಿಸಿದ ಹಣವನ್ನು ಅಕ್ರಮವಾಗಿ ವರ್ಗಾವಣೆ ಮಾಡಿದ್ದಾರೆ ಎಂದು ಆರೋಪಿಸಿ ಇಡಿ ಅಕ್ಟೋಬರ್ 29 ರಂದು 110 ಪುಟಗಳ ಮೊದಲ ಪೂರಕ ಪ್ರಾಸಿಕ್ಯೂಷನ್ ದೂರನ್ನು (ಇಡಿ ಚಾರ್ಜ್‌ಶೀಟ್‌ಗೆ ಸಮನಾಗಿರುತ್ತದೆ) ಸಲ್ಲಿಸಿತ್ತು. ಚಾರ್ಜ್‌ಶೀಟ್‌ನಲ್ಲಿ ಮರಿಯಮ್ ಸಿದ್ದಿಕಿ ಎಂಬುವರನ್ನು ಹೆಸರಿಸಲಾಗಿತ್ತು. ಅವರು ಪ್ರಕರಣದಲ್ಲಿ ಆರೋಪಿಯಾಗಿದ್ದರೂ ಇ.ಡಿ ಅವರನ್ನು ಬಂಧಿಸಿಲ್ಲ. ಸಿದ್ದಿಕಿ ವಿರುದ್ಧ ಮುಂದುವರಿಯಲು ಯಾವುದೇ ಪುರಾವೆಗಳಿಲ್ಲ ಎಂದು ನ್ಯಾಯಾಲಯ ಹೇಳಿದ್ದು, ಆಕೆಯನ್ನು ಬಿಡುಗಡೆ ಮಾಡಿದೆ. ಅಮಾನತುಲ್ಲಾ ಖಾನ್ ಅವರನ್ನು ಸೆಪ್ಟಂಬರ್ 2ರಂದು ಅವರ ನಿವಾಸದ ಮೇಲೆ ದಾಳಿ ನಡೆಸಿದ ನಂತರ ಇಡಿ ಬಂಧಿಸಿತ್ತು. ಇದನ್ನೂ ಓದಿ: ನವೀಕರಿಸಬಹುದಾದ ಇಂಧನದಲ್ಲಿ ಭಾರತ ಗಮನಾರ್ಹ ಸಾಧನೆ – 24.2 GW ಸಾಮರ್ಥ್ಯ ವೃದ್ಧಿ: ಜೋಶಿ
Advertisement