ನವದೆಹಲಿ: ಆರ್ಥಿಕ ಅಕ್ರಮಗಳ ಆರೋಪದ ತನಿಖೆ ಎದುರಿಸುತ್ತಿರುವ ಸ್ವಾಮಿ ಚೈತನ್ಯಾನಂದ ಸರಸ್ವತಿ (Swami Chaitanyanand Saraswati) ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ದೆಹಲಿ ನ್ಯಾಯಾಲಯ ಶುಕ್ರವಾರ ತಿರಸ್ಕರಿಸಿದೆ.
ತನಿಖೆಯ ಈ ಹಂತದಲ್ಲಿ ಆರೋಪಗಳ ಸ್ವರೂಪವು ಕಸ್ಟಡಿ ವಿಚಾರಣೆಗೆ ಅರ್ಹವಾಗಿದೆ ಎಂದು ಹೇಳಿದ ಪಟಿಯಾಲ ಹೌಸ್ ನ್ಯಾಯಾಲಯವು ಈ ಆದೇಶ ಹೊರಡಿಸಿದೆ. ಇದನ್ನೂ ಓದಿ: IAF ಗ್ರೂಪ್ ಕ್ಯಾಪ್ಟನ್ ಕಳಿಸಿದ ಮೇಲ್‌ನಿಂದ ಚೈತನ್ಯಾನಂದನ ಕಾಮಪುರಾಣ ಬಯಲಾಯ್ತು!
ವಂಚನೆ, ಫೋರ್ಜರಿ ಮತ್ತು ಕ್ರಿಮಿನಲ್ ಪಿತೂರಿ ಪ್ರಕರಣದಲ್ಲಿ ಸ್ವಯಂ ಘೋಷಿತ ದೇವಮಾನವನ ನಿರೀಕ್ಷಣಾ ಜಾಮೀನು ಅರ್ಜಿಯ ಮೇಲಿನ ಆದೇಶವನ್ನು ನ್ಯಾಯಾಲಯ ಕಾಯ್ದಿರಿಸಿತ್ತು. ಇದಾದ ಕೆಲವೇ ಗಂಟೆಗಳಲ್ಲಿ ದೆಹಲಿ ಕೋರ್ಟ್‌ನಿಂದ ಆದೇಶ ಹೊರಬಿದ್ದಿದೆ.
ನಕಲಿ ದಾಖಲೆ ಅಥವಾ ಎಲೆಕ್ಟ್ರಾನಿಕ್ ದಾಖಲೆಯನ್ನು ನಕಲಿಯಾಗಿ ಬಳಸಿ ವಂಚನೆ ಮತ್ತು ಕ್ರಿಮಿನಲ್ ಪಿತೂರಿ ಆರೋಪಗಳ ಅಡಿಯಲ್ಲಿ ಸ್ವಾಮೀಜಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಜಗದ್ಗುರು ಶಂಕರಾಚಾರ್ಯ ಮಹಾಸಂಸ್ಥಾನಂ ದಕ್ಷಿಣಾಮ್ನಾಯ ಶಾರದಾ ಪೀಠದ ಆಸ್ತಿಗಳನ್ನು ಆರ್ಥಿಕ ಲಾಭಕ್ಕಾಗಿ ಖಾಸಗಿ ಕಂಪನಿಗಳಿಗೆ ಹಸ್ತಾಂತರಿಸುವ ಮೂಲಕ ಸರಸ್ವತಿ ಸಂಸ್ಥೆಯ ಮೇಲಿನ ತನ್ನ ನಿಯಂತ್ರಣವನ್ನು ಬಿಗಿಗೊಳಿಸಿದ್ದಾರೆ ಎಂದು ದೆಹಲಿ ಪೊಲೀಸರು ತಮ್ಮ ತನಿಖೆಯಲ್ಲಿ ಬಹಿರಂಗಪಡಿಸಿದ್ದಾರೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಸ್ವಾಮೀಜಿ ಬಯಕೆ ಈಡೇರಿಸುವಂತೆ ಮಹಿಳಾ ಅಧ್ಯಾಪಕರಿಂದ್ಲೇ ವಿದ್ಯಾರ್ಥಿನಿಯರ ಮೇಲೆ ಒತ್ತಡ – ತನಿಖೆ ತೀವ್ರ
ಇಂದಿನ ನಿರೀಕ್ಷಣಾ ಜಾಮೀನು ಹಣಕಾಸಿನ ಅಕ್ರಮಗಳಿಗೆ ಸಂಬಂಧಿಸಿದ ಆರೋಪಗಳಿಗೆ ಸಂಬಂಧಿಸಿದ್ದಾಗಿದೆ. ಸ್ವಯಂ ಘೋಷಿತ ದೇವಮಾನವ ಸ್ವಾಮಿ ಚೈತನ್ಯಾನಂದ ಅವರ ವಿರುದ್ಧ ಲೈಂಗಿಕ ಕಿರುಕುಳದ ಪ್ರಕರಣ ಕೂಡ ದಾಖಲಾಗಿದೆ.