ನವದೆಹಲಿ: ಫೆಬ್ರವರಿ 1 ರಂದು ನಿರ್ಭಯಾ ಅಪರಾಧಿಗಳಿಗೆ ಗಲ್ಲು ಶಿಕ್ಷೆಗೆ ವಿಧಿಸಿದ್ದ ಡೆತ್ ವಾರಂಟ್‍ಗೆ ಪಟಿಯಾಲ ಕೋರ್ಟ್ ತಡೆಯಾಜ್ಞೆ ನೀಡಿದ್ದು, ಗಲ್ಲುಶಿಕ್ಷೆಗೆ ಮುಂದೂಡಿಕೆಯಾಗಿದೆ.
ಫೆ. 1ರಂದು ಬೆಳಗ್ಗೆ 6 ಗಂಟೆಗೆ ನಿರ್ಭಯಾ ಅಪರಾಧಿಗಳಿಗೆ ಗಲ್ಲಿಗೆ ಏರಿಸಲು ಕೋರ್ಟ್ ಆದೇಶ ನೀಡಿತ್ತು. ಆದರೆ ಅಪರಾಧಿಗಳು ಗಲ್ಲುಶಿಕ್ಷೆ ಜಾರಿ ಮುಂದೂಡಲು ನಾನಾ ಪ್ರಯತ್ನವನ್ನು ಮುಂದುವರಿಸಿದ್ದರು.
Advertisement
2012 Delhi gang-rape case: A Delhi Court stays execution of convicts till further orders pic.twitter.com/jdg28SSDmN
— ANI (@ANI) January 31, 2020
Advertisement
ಬುಧವಾರ ಅಪರಾಧಿ ವಿನಯ್ ಶರ್ಮಾ ರಾಷ್ಟ್ರಪತಿ ಅವರಿಗೆ ಎರಡನೇ ಬಾರಿ ಕ್ಷಮಾದಾನ ಕೋರಿ ಅರ್ಜಿ ಸಲ್ಲಿಸಿದ್ದನು. ಆದರೆ ಈಗ ರಾಷ್ಟ್ರಪತಿಯವರ ತೀರ್ಮಾನ ಪ್ರಕಟಗೊಂಡಿರಲಿಲ್ಲ.
Advertisement
ಇನ್ನೊಂದೆಡೆ ಪವನ್, ನಾನು ಅಪ್ರಾಪ್ತನಾಗಿದ್ದಾಗ ಈ ಘಟನೆ ನಡೆದಿತ್ತು. ಹಾಗಾಗಿ ನನ್ನನ್ನು ಮರಣದಂಡನೆಗೆ ಒಳಪಡಿಸಬಾರದು ಎಂದು ಸುಪ್ರಿಂ ಕೋರ್ಟ್‍ಗೆ ಮತ್ತೊಮ್ಮೆ ಮನವಿ ಮಾಡಿದ್ದಾನೆ. ಈ ಹಿಂದೆಯೇ ತ್ರಿಸದಸ್ಯ ಪೀಠ ಪವನ್ ಅರ್ಜಿಯನ್ನು ತಿರಸ್ಕೃತ ಮಾಡಿತ್ತು. ಈಗ ಸುಪ್ರೀಂಕೋರ್ಟಿನ ಸಂವಿಧಾನಿಕ ಪೀಠದ ಮುಂದೆ ಮೇಲ್ಮನವಿ ಸಲ್ಲಿಸಿದ್ದಾನೆ.
Advertisement
Asha Devi, mother of the 2012 Delhi gang-rape victim: The lawyer of the convicts, AP Singh has challenged me saying that the convicts will never be executed. I will continue my fight. The government will have to execute the convicts. pic.twitter.com/NqihzqisQo
— ANI (@ANI) January 31, 2020
ರಾಷ್ಟ್ರಪತಿಗಳ ಕ್ಷಮಾದಾನದ ತೀರ್ಪಿನ ವಿರುದ್ಧ ಮುಖೇಶ್ ಸುಪ್ರೀಂಕೋರ್ಟ್ ಮೊರೆ ಹೋಗಿದ್ದನು. ಬುಧವಾರ ಸುಪ್ರೀಂಕೋರ್ಟ್ ಮುಖೇಶ್ ಅರ್ಜಿಯನ್ನು ವಜಾಗೊಳಿಸಿತ್ತು. ಮುಖೇಶ್ ನಂತೆಯೇ ಉಳಿದ ಅಪರಾಧಿಗಳು ಅರ್ಜಿ ಸಲ್ಲಿಸುವ ಮೂಲಕ ಗಲ್ಲು ಏರುವುದಕ್ಕೆ ವಿಳಂಬ ಮಾಡುವ ತಂತ್ರ ಮಾಡುತ್ತಿದ್ದಾರೆ.