ನವದೆಹಲಿ: ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರಿಗೆ ದೆಹಲಿ ನ್ಯಾಯಾಲಯ (Delhi Court) ಸಮನ್ಸ್ ಜಾರಿ ಮಾಡಿದ್ದು, ಮಾರ್ಚ್ 16 ರಂದು ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ. ದೆಹಲಿ ಹೊಸ ಅಬಕಾರಿ ನೀತಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಈ ಸಮನ್ಸ್ ಜಾರಿ ಮಾಡಿದೆ.
ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯ ಪಿಎಂಎಲ್‌ಎಯ ಸೆಕ್ಷನ್ 50 ರ ಅಡಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಎಂಟು ಬಾರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಸಮನ್ಸ್ ನೀಡಿತ್ತು. ಆದರೆ ಈವರೆಗೂ ಒಮ್ಮೆಯೂ ವಿಚಾರಣೆಗೆ ಹಾಜರಾಗದ ಹಿನ್ನೆಲೆ ದೆಹಲಿ ನ್ಯಾಯಲಯದಲ್ಲಿ ಅರ್ಜಿ ಸಲ್ಲಿಸಿತ್ತು. ಇಡಿ (Enforcement Directorate) ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಈಗ ವಿಚಾರಣೆಗೆ ಸಮನ್ಸ್ ಜಾರಿ ಮಾಡಿದೆ. ಇದನ್ನೂ ಓದಿ: ದಕ್ಷಿಣ ಗೆಲ್ಲಲು AI ಮೊರೆ ಹೋದ ಮೋದಿ – ವಿಶ್ವದಲ್ಲೇ ಮೊದಲು ಎಂದು ಬಿಜೆಪಿ
Advertisement
Advertisement
ಇದಕ್ಕೂ ಮೊದಲು ದೆಹಲಿಯ ಅಬಕಾರಿ ನೀತಿಗೆ ಸಂಬಂಧಿಸಿದ ಮನಿ ಲ್ಯಾಂಡರಿಂಗ್ ಪ್ರಕರಣದಲ್ಲಿ ಕೇಜ್ರಿವಾಲ್ ಅವರಿಗೆ ನೀಡಲಾದ ಮೊದಲ ಮೂರು ಸಮನ್ಸ್‌ಗಳಿಗೆ ಹಾಜರಾಗದ ಕಾರಣ ಪ್ರಾಸಿಕ್ಯೂಷನ್ ಕೋರಿ ತನಿಖಾ ಸಂಸ್ಥೆ ಸ್ಥಳೀಯ ನ್ಯಾಯಾಲಯಕ್ಕೆ ಮನವಿ ಮಾಡಿತ್ತು. ನ್ಯಾಯಾಲಯವು ಮಾರ್ಚ್ 16 ರಂದು ವಿಚಾರಣೆಗೆ ಈ ವಿಷಯವನ್ನು ಪಟ್ಟಿ ಮಾಡಿದೆ.
Advertisement
Advertisement
ಅಬಕಾರಿ ನೀತಿ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಸಲ್ಲಿಸಿರುವ ಚಾರ್ಜ್‌ಶೀಟ್‌ಗಳಲ್ಲಿ ಕೇಜ್ರಿವಾಲ್ ಅವರ ಹೆಸರನ್ನು ಹಲವು ಬಾರಿ ಉಲ್ಲೇಖಿಸಲಾಗಿದೆ. 2021-22ರ ಅಬಕಾರಿ ನೀತಿಯನ್ನು ಸಿದ್ಧಪಡಿಸುವ ಕುರಿತು ಆರೋಪಿಗಳು ಕೇಜ್ರಿವಾಲ್ ಅವರೊಂದಿಗೆ ಸಂಪರ್ಕದಲ್ಲಿದ್ದರು ಎಂದು ಇಡಿ ಆರೋಪಿಸಿದೆ. ಈ ಪ್ರಕರಣದಲ್ಲಿ ಎಎಪಿ ನಾಯಕರಾದ ಮನೀಶ್ ಸಿಸೋಡಿಯಾ ಮತ್ತು ಸಂಜಯ್ ಸಿಂಗ್, ಪಕ್ಷದ ಸಂವಹನ ಉಸ್ತುವಾರಿ ವಿಜಯ್ ನಾಯರ್ ಮತ್ತು ಕೆಲವು ಮದ್ಯದ ಉದ್ಯಮಿಗಳನ್ನು ತನಿಖಾ ಸಂಸ್ಥೆ ಇಲ್ಲಿಯವರೆಗೆ ಬಂಧಿಸಿದೆ. ಇದನ್ನೂ ಓದಿ: 15 ವರ್ಷದ ಬಳಿಕ ಘರ್ ವಾಪ್ಸಿ – ಮರಳಿ ಬಿಜೆಪಿ ಜೊತೆ ಬಿಜೆಡಿ ಮೈತ್ರಿ?