ನವದೆಹಲಿ: ಭಾನುವಾರ ಸಂಜೆ ಬೀಸಿದ ಧೂಳು ಮಿಶ್ರಿತ ಬಿರುಗಾಳಿ ಜೊತೆಗೆ ಮಳೆಯಿಂದ ದೆಹಲಿ ತತ್ತರಿಸಿದೆ.
ಹಠಾತ್ ಹವಾಮಾನ ಬದಲಾವಣೆಯಿಂದಾಗಿ ಸಂಜೆ 4:30 ನಂತರ ಮೋಡ ಕವಿದು ಮಳೆ ಸುರಿದಿದೆ. ಇದರಿಂದ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನಗಳ ಹಾರಾಟದಲ್ಲಿ ವ್ಯತ್ಯಯವಾಗಿದೆ. ಶ್ರೀನಗರದಿಂದ ದೆಹಲಿಗೆ ಬರುತ್ತಿದ್ದ ವಿಮಾನವನ್ನು ಮಾರ್ಗ ಮಧ್ಯೆ ಅಮೃತ್‍ಸರಕ್ಕೆ ಮಾರ್ಗ ಬದಲಾವಣೆ ಮಾಡಲಾಗಿದೆ. ಇದೇ ರೀತಿ 10 ವಿಮಾನಗಳ ಮಾರ್ಗ ಬದಲಾವಣೆ ಮಾಡಲಾಗುತ್ತಿದೆ ಎನ್ನಲಾಗಿದೆ.
Advertisement
ಮೆಟ್ರೊ ಸೇವೆಯಲ್ಲಿ 30 ನಿಮಿಷಗಳ ಕಾಲ ವ್ಯತ್ಯಯವಾಗಿದೆ. ಭಾರತೀಯ ಹವಾಮಾನ ಇಲಾಖೆಯು ಉತ್ತರಾಖಂಡ್, ಜಮ್ಮು ಕಾಶ್ಮೀರ ಮತ್ತು ಹಿಮಾಚಲ ಪ್ರದೇಶ ಹಾಗೂ ರಾಜಸ್ಥಾನದ ಕೆಲವು ಭಾಗಗಳಲ್ಲಿ ಚಂಡಮಾರುತದ ಮುನ್ಸೂಚನೆ ನೀಡಿತ್ತು. ಬೆಟ್ಟ ರಾಜ್ಯಗಳ ಮೇಲಿನ ಚಂಡಮಾರತದಿಂದಾಗಿ ಉತ್ತರ ಭಾರತದಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಿತ್ತು.
Advertisement
#WATCH: Skies in Faridabad turn dark as strong winds & dust storm hit the region. #Haryana pic.twitter.com/VRDn8AsGIP
— ANI (@ANI) May 13, 2018
Advertisement