ನವದೆಹಲಿ: ದೆಹಲಿ ಜಾರಿ ನಿರ್ದೇಶನಾಲಯ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಜಾರಿ ನಿರ್ದೇಶನಾಲಯದ (Enforcement Directorate) ಅಧಿಕಾರಿಯೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಗಾಝಿಯಾಬಾದ್ (Ghaziabad) ಮೂಲದ ಅಲೋಕ್ ಕುಮಾರ್ (Alok Kumar) ಆತ್ಮಹತ್ಯೆ ಮಾಡಿಕೊಂಡ ಅಧಿಕಾರಿ. ದೆಹಲಿ ಹತ್ತಿರದ ಸಾಹಿಬಾಬಾದ್ (Sahibabad) ರೈಲ್ವೇ ಹಳಿ ಮೇಲೆ ಅಲೋಕ್ ಕುಮಾರ್ ಅವರ ಮೃತದೇಹ ಪತ್ತೆಯಾಗಿದೆ. ಭ್ರಷ್ಟಾಚಾರದ ಪ್ರಕರಣದಲ್ಲಿ ತನ್ನ ಹೆಸರು ಕೇಳಿ ಬಂದ ಹಿನ್ನೆಲೆಯಲ್ಲಿ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.ಇದನ್ನೂ ಓದಿ: ಬೆಂಗಳೂರು-ಗದಗ ವೋಲ್ವೋ ಬಸ್ ಪುನಃ ಆರಂಭಿಸುವಂತೆ ಸ್ಪಿನ್ ಮಾಂತ್ರಿಕ ಸುನೀಲ್ ಜೋಷಿ ಮನವಿ
ಅಲೋಕ್ ಕುಮಾರ್ ಡೆಪ್ಯುಟೇಷನ್ ಮೇಲೆ ನವದೆಹಲಿಯ (New Delhi) ಇ.ಡಿ ಕಚೇರಿಗೆ ವರ್ಗಾವಣೆಯಾಗಿದ್ದರು. ಅವರು ಆದಾಯ ತೆರಿಗೆ ಇಲಾಖೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು.
ಇತ್ತೀಚಿಗೆ ಅವರನ್ನು ಸಿಬಿಐ ಭ್ರಷ್ಟಾಚಾರದ ಆರೋಪದಡಿಯಲ್ಲಿ ವಶಕ್ಕೆ ವಿಚಾರಣೆ ನಡೆಸಿತ್ತು. ಆದರೆ ಯಾವುದೇ ಸಾಕ್ಷ್ಯಾಧಾರಗಳಿಲ್ಲದೇ ಅವರನ್ನು ಬಿಡುಗಡೆಗೊಳಿಸಿತ್ತು.ಇದನ್ನೂ ಓದಿ: ಹಿಂದಿ ಸಿನಿಮಾಗಳಲ್ಲಿ ಭಾರತವನ್ನು ಕೆಟ್ಟದಾಗಿ ತೋರಿಸಲಾಗಿದೆ: ರಿಷಬ್ ಶೆಟ್ಟಿ
ಇಡಿ ಅಧಿಕಾರಿ ಸಂದೀಪ್ ಸಿಂಗ್ (Sandeep Singh) 50 ಲಕ್ಷ ರೂ. ಬೇಡಿಕೆ ಇಟ್ಟಿದ್ದಾರೆಂದು ಒಬ್ಬ ವ್ಯಕ್ತಿ ಪ್ರಕರಣ ದಾಖಲಿಸಿದ್ದರು. ಈ ಭ್ರಷ್ಟಾಚಾರದ ಪ್ರಕರಣದಲ್ಲಿ ಸಂದೀಪ್ ಸಿಂಗ್ ಅವರ ಮಗ 20 ಲಕ್ಷ ರೂ. ಲಂಚ ಸ್ವಿಕರಿಸುವಾಗ ಸಿಬಿಐ ಬಂಧಿಸಿತ್ತು. ಇದೇ ಪ್ರಕರಣದಲ್ಲಿ ಅಲೋಕ್ ಕುಮಾರ್ ಅವರ ಹೆಸರು ಕೂಡ ಕೇಳಿ ಬಂದಿತ್ತು. ಇದರಿಂದಾಗಿ ಸಂದೀಪ್ ಸಿಂಗ್‌ರನ್ನು ಸೇವೆಯಿಂದ ಅಮಾನತುಗೊಳಿಸಲಾಗಿತ್ತು
ಪೊಲೀಸರು ಇಡಿ ಅಧಿಕಾರಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಶವಾಗಾರಕ್ಕೆ ಸ್ಥಳಾಂತರಿಸಿದ್ದಾರೆ ಮತ್ತು ಆತ್ಮಹತ್ಯೆಗೆ ಕಾರಣವನ್ನು ತಿಳಿಯಲು ಪ್ರಕರಣವನ್ನು ತನಿಖೆ ನಡೆಸುತ್ತಿದ್ದಾರೆ.