ನವದೆಹಲಿ: ದೆಹಲಿ ವಿಧಾನಸಭಾ ಚುನಾವಣಾ ಫಲಿತಾಂಶದ ಮೇಲೆ ಎಲ್ಲರ ಕುತೂಹಲ ನೆಟ್ಟಿದೆ. ಒಂದೆಡೆ ಬಿಜೆಪಿ ಬಹುಮತದತ್ತ ದಾಪುಗಾಲಿಡುತ್ತಿದ್ದರೆ, ಕೆಲವು ಕ್ಷೇತ್ರಗಳಲ್ಲಿ ಆಪ್ ನೇರ ಪೈಪೋಟಿ ನೀಡುತ್ತಿದೆ. ಇನ್ನೂ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಪ್ರತಿನಿಧಿಸಿರುವ ನವದೆಹಲಿ ಕ್ಷೇತ್ರದಲ್ಲಿ ಹಾವು-ಏಣಿ ಆಟ ನಡೆಯುತ್ತಿದೆ.
Advertisement
ಆರಂಭಿಕ ಸುತ್ತಿನಲ್ಲಿ ಬಿಜೆಪಿ ಅಭ್ಯರ್ಥಿ ಪರ್ವೇಶ್ ಶಾಹಿಬ್ ಸಿಂಗ್ ವಿರುದ್ಧ 200ಕ್ಕೂ ಹೆಚ್ಚು ಮತಗಳ ಅಂತರದಲ್ಲಿ ಹಿನ್ನಡೆ ಅನುಭವಿಸಿದ್ದ ಕೇಜ್ರಿವಾಲ್ ಸತತ 2 ಸುತ್ತುಗಳಲ್ಲಿ ಅಲ್ಪ ಮುನ್ನಡೆ ಕಂಡಿದ್ದಾರೆ. 2ನೇ ಸುತ್ತಿನಲ್ಲಿ ಒಟ್ಟು 254 ಹಾಗೂ 3ನೇ ಸುತ್ತಿನಲ್ಲಿ ಒಟ್ಟು 344 ಮತಗಳ ಅಲ್ಪ ಮುನ್ನಡೆ ಕಾಯ್ದುಕೊಂಡಿದ್ದಾರೆ. ಈವರೆಗೆ ಕೇಜ್ರಿವಾಲ್ ಒಟ್ಟು 6,442 ಮತಗಳನ್ನು ಪಡೆದು ಮುನ್ನಡೆಯಲ್ಲಿದ್ದರೆ, ಬಿಜೆಪಿ ಅಭ್ಯರ್ಥಿ ಪರ್ವೇಶ್ 6,099 ಮತಗಳನ್ನು ಪಡೆದು ಹಿನ್ನಡೆ ಕಾಯ್ದುಕೊಂಡಿದ್ದಾರೆ. ಕಲ್ಕಾಜಿ ಕ್ಷೇತ್ರದಲ್ಲಿ ಹಾಲಿ ಸಿಎಂ ಅತಿಶಿ 1,149 ಮತಗಳ ಹಿನ್ನಡೆ ಕಾಯ್ದುಕೊಂಡಿದ್ದಾರೆ.
Advertisement
Advertisement
ಮ್ಯಾಜಿಕ್ ನಂಬರ್ ತಲುಪಿದ ಬಿಜೆಪಿ:
ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಶುರುವಾಗಿದ್ದು, 10 ಗಂಟೆ ವೇಳೆಗೆ ಬಿಜೆಪಿ 42 ಸ್ಥಾನಗಳೊಂದಿಗೆ ಭರ್ಜರಿ ಮುನ್ನಡೆ ಸಾಧಿಸಿದೆ. ಆಡಳಿತಾರೂಢ ಆಪ್ 27 ಸ್ಥಾನಗಳನ್ನು ಪಡೆದು ಹಿನ್ನಡೆಯಲ್ಲಿದ್ದರೆ. ಕಾಂಗ್ರೆಸ್ ಇನ್ನೂ ಖಾತೆ ತೆರೆಯುವಲ್ಲಿ ವಿಫಲವಾಗಿದೆ. ದೆಹಲಿಯ 70 ಕ್ಷೇತ್ರಗಳಿಗೆ ಫೆಬ್ರವರಿ 5ರಂದು ನಡೆದ ಚುನಾವಣೆಯಲ್ಲಿ 60.42% ರಷ್ಟು ಮತದಾನ ನಡೆದಿತ್ತು. ಸರಳ ಬಹುಮತಕ್ಕೆ 36 ಸ್ಥಾನಗಳ ಅಗತ್ಯವಿದೆ. ಇದನ್ನೂ ಓದಿ: Delhi Election Results | ಬಹುಮತದತ್ತ ಬಿಜೆಪಿ ದಾಪುಗಾಲು – ಮುಸ್ಲಿಂ ಪ್ರಾಬಲ್ಯವುಳ್ಳ ಕ್ಷೇತ್ರದಲ್ಲೂ ಕಮಲ ಕಿಲ ಕಿಲ
Advertisement
2013ರ ಚುನಾವಣೆಯಲ್ಲಿ ಬಿಜೆಪಿ 31, ಆಪ್ 28, ಕಾಂಗ್ರೆಸ್ 08 ಸ್ಥಾನಗಳನ್ನು ಗೆದ್ದುಕೊಂಡಿದ್ದರೆ ಇತರರು ಮೂರು ಸ್ಥಾನ ಗೆದ್ದಿದ್ದರು. ಆಪ್‌ಗೆ ಕಾಂಗ್ರೆಸ್ ಬೆಂಬಲ ನೀಡಿದ್ದರಿಂದ ಕೇಜ್ರಿವಾಲ್ (Arvind Kejriwal) ಮೊದಲ ಬಾರಿಗೆ ಮುಖ್ಯಮಂತ್ರಿ ಹುದ್ದೆಯನ್ನು ಅಲಂಕರಿಸಿದ್ದರು. ಇದನ್ನೂ ಓದಿ: Delhi Election Results | ಬಿಜೆಪಿಗೆ ಆರಂಭಿಕ ಮುನ್ನಡೆ – ಕೇಜ್ರಿವಾಲ್ ಸೇರಿ ಆಪ್ ಘಟಾನುಘಟಿ ನಾಯಕರಿಗೆ ಹಿನ್ನಡೆ
ಕಳೆದ 25 ವರ್ಷಗಳಿಂದ ಮರೀಚಿಕೆಯಾಗಿರುವ ಅಧಿಕಾರವನ್ನು ದಕ್ಕಿಸಿಕೊಳ್ಳಲು ಬಿಜೆಪಿ ಸರ್ವ ಶಕ್ತಿಗಳನ್ನು ಪಣಕ್ಕೊಡಿದೆ. ದಶಕದಿಂದ ಇರುವ ಅಧಿಕಾರವನ್ನು ಉಳಿಸಿಕೊಳ್ಳಲು ಹಿಂದೆಂದಿಗಿಂತಲೂ ಹೆಚ್ಚು ಉಚಿತ ಯೋಜನೆಗಳನ್ನು ಆಪ್ (AAP) ಘೋಷಿಸಿದೆ. ಒಂದಿಷ್ಟು ಸೀಟ್‌ಗಳನ್ನಾದರೂ ಗೆದ್ದು ಮಾನ ಉಳಿಸಿಕೊಳ್ಳಲು ಕಾಂಗ್ರೆಸ್ (Congress) ಸಹ ಭರವಸೆಗಳ ಮೇಲೆ ಭರವಸೆ ನೀಡಿದೆ. ಇದನ್ನೂ ಓದಿ: ಸಮೀಕ್ಷೆ ಸುಳ್ಳಾಗಿ ಆಪ್ ಹ್ಯಾಟ್ರಿಕ್ ಕನಸು ಈಡೇರುತ್ತಾ..? – ಫಿನಿಕ್ಸ್‌ನಂತೆ ಎದ್ದು ಬರ್ತಾರಾ ಕೇಜ್ರಿವಾಲ್?