ನವದೆಹಲಿ: ಇಂದು ಮಧ್ಯಾಹ್ನ 2 ಗಂಟೆಗೆ ದೆಹಲಿ ವಿಧಾನಸಭಾ ಚುನಾವಣಾ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಪ್ರಕಟಿಸಲಿದೆ.
70 ಸದಸ್ಯ ಬಲದ ದಿಲ್ಲಿ ವಿಧಾನಸಭೆಯ ಅವಧಿ ಫೆ.23ರಂದು ಅಂತ್ಯಗೊಳ್ಳಲಿದ್ದು, ಅದಕ್ಕೂ ಮೊದಲೇ ಚುನಾವಣೆ ನಡೆಸಬೇಕಿದೆ.
Advertisement
ಈಗಾಗಲೇ ದೆಹಲಿ ವಿಧಾನಸಭಾ ಚುನಾವಣೆಗಾಗಿ ಆಮ್ ಆದ್ಮಿ ಪಕ್ಷ (AAP) ಎಲ್ಲಾ 70 ಸ್ಥಾನಗಳಿಗೆ ತನ್ನ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದೆ. ಜೊತೆಗೆ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ (Arvind Kejriwal) ನವದೆಹಲಿ ಕ್ಷೇತ್ರದಿಂದ ಹಾಗೂ ಹಾಲಿ ಸಿಎಂ ಅತಿಶಿ ಅವರು ಕಲ್ಕಾಜಿ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.
Advertisement
Advertisement
ಫೆಬ್ರವರಿಯಲ್ಲಿ ನಡೆಯಲಿರುವ 70 ಸದಸ್ಯರ ದೆಹಲಿ ವಿಧಾನಸಭೆ ಚುನಾವಣೆಯ ದಿನಾಂಕ ಪ್ರಕಟವಾಗುವ ಮೊದಲೇ ಬಿಜೆಪಿ, ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಬಿಜೆಪಿ ಬೃಹತ್ ಪ್ರಚಾರವನ್ನು ನಡೆಸುತ್ತಿದ್ದ ಪ್ರಧಾನಿ ಮೋದಿ ಪ್ರಚಾರದ ಮೂಲಕ ಕೇಜ್ರಿವಾಲ್ ಸರ್ಕಾರವನ್ನು ಟೀಕಿಸುತ್ತಿದ್ದಾರೆ. ಬಿಜೆಪಿ ಮತ್ತು ಕಾಂಗ್ರೆಸ್ ಆಡಳಿತಾರೂಢ ಎಎಪಿಯ ಭದ್ರಕೋಟೆ ಎಂದು ಪರಿಗಣಿಸಲಾದ ನಗರಗಳಲ್ಲಿ ನೆಲೆಯೂರಲು ಸಿದ್ಧತೆಯನ್ನು ನಡೆಸಿದೆ.
Advertisement
ಬಿಜೆಪಿಯು 1998 ರಿಂದ ದೆಹಲಿಯಲ್ಲಿ ಅಧಿಕಾರದಿಂದ ಹೊರಗುಳಿದಿದ್ದು, 2015 ರಿಂದ ವಿಧಾನಸಭಾ ಚುನಾವಣೆಯಲ್ಲಿ ಪ್ರಾಬಲ್ಯ ಹೊಂದಿರುವ ಎಎಪಿಯನ್ನು ಸೋಲಿಸಲು ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದೆ. ಎಎಪಿ 2015 ಮತ್ತು 2020ರಲ್ಲಿ ವಿಧಾನಸಭಾ ಚುನಾವಣೆಗಳಲ್ಲಿ ಕ್ರಮವಾಗಿ 67 ಮತ್ತು 62 ಸ್ಥಾನಗಳಲ್ಲಿ ಗೆಲುವು ಸಾಧಿಸಿ ಅಧಿಕಾರಕ್ಕೆ ಏರಿತ್ತು.