ನವದೆಹಲಿ: ರಾಜಧಾನಿಯಲ್ಲಿ ಅಪ್ ಮತ್ತು ಕಾಂಗ್ರೆಸ್ ಕಿತ್ತಾಟ ಈಗ ಮತ್ತಷ್ಟು ಹೆಚ್ಚಾಗಿದೆ. ದೆಹಲಿ ಮುಖ್ಯಮಂತ್ರಿ ಅತಿಶಿ (CM Atishi) ಮತ್ತು ರಾಜ್ಯಸಭಾ ಸಂಸದ ಸಂಜಯ್ ಸಿಂಗ್ (Sanjay Singh) ವಿರುದ್ಧ 10 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಕಾಂಗ್ರೆಸ್ ನಾಯಕ ಸಂದೀಪ್ ದೀಕ್ಷಿತ್ (Sandeep Dikshit) ಹೇಳಿದ್ದಾರೆ.
ಸುದ್ದಿಗೋಷ್ಠಿ ನಡೆಸಿ ಅವರು, ಬಿಜೆಪಿಯಿಂದ ನಾನು ಹಣವನ್ನು ಪಡೆಯುತ್ತಿದ್ದೇನೆ ಎಂದು ದೆಹಲಿ ಸಿಎಂ ಮಾಡಿದ ಆರೋಪವನ್ನು ಅವರು ತಿರಸ್ಕರಿಸಿದರು.
Advertisement
#WATCH | Delhi: Congress candidate from New Delhi Assembly Constituency Sandeep Dikshit says he will file a criminal and civil defamation case against CM Atishi and AAP MP Sanjay Singh.
He says, “5-6 days ago, Delhi CM Atishi said that I am taking a huge amount of money from the… pic.twitter.com/ynLrnjKcAX
— ANI (@ANI) December 31, 2024
Advertisement
ಕಳೆದ 10-12 ವರ್ಷಗಳಿಂದ ನಾನು ಕಾಂಗ್ರೆಸ್ ಪರವಾಗಿ ಕೆಲಸ ಮಾಡುತ್ತಿದ್ದೇನೆ. ತನ್ನ ವಿರುದ್ಧ ಹೊರಿಸಲಾದ ಆಧಾರರಹಿತ ಆರೋಪಗಳಿಗೆ ಪ್ರತಿಯಾಗಿ ಮಾನನಷ್ಟ ಮೊಕದ್ದಮೆ ಹೂಡುತ್ತಿದ್ದೇನೆ ಎಂದರು. ಇದನ್ನೂ ಓದಿ: ರಾಜ್ಯದ 4 ಸಾರಿಗೆ ಸಂಸ್ಥೆಗಳಲ್ಲಿ ಆರ್ಥಿಕ ಮುಗ್ಗಟ್ಟು – 2,000 ಕೋಟಿ ರೂ. ಸಾಲ ಪಡೆಯಲು ಸರ್ಕಾರ ಅನುಮೋದನೆ
Advertisement
10 ಕೋಟಿ ರೂ. ಪೈಕಿ ಅರ್ಧದಷ್ಟು ಮೊತ್ತವನ್ನು ಯಮುನಾ ನದಿಯನ್ನು ಸ್ವಚ್ಛಗೊಳಿಸಲು 5 ಕೋಟಿ ರೂ. ಮತ್ತು ದೆಹಲಿಯಲ್ಲಿನ ಮಾಲಿನ್ಯ ಸಮಸ್ಯೆಗಳ ಪರಿಹಾರಕ್ಕಾಗಿ 5 ಕೋಟಿ ರೂ. ನೀಡಲಾಗುವುದು ಎಂದು ಅವರು ತಿಳಿಸಿದರು.
Advertisement
ಮುಂಬರುವ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಎಎಪಿಯ ಅರವಿಂದ್ ಕೇಜ್ರಿವಾಲ್ (Arvind Kejriwal) ವಿರುದ್ಧ ನವದೆಹಲಿ ಕ್ಷೇತ್ರದಿಂದ ದೀಕ್ಷಿತ್ ಸ್ಪರ್ಧಿಸುತ್ತಿದ್ದಾರೆ.