ನವದೆಹಲಿ: ಅಬಕಾರಿ ನೀತಿ ಪ್ರಕರಣದಲ್ಲಿ ಜೈಲಿನಲ್ಲಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ (Arvind Kejrival), ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಯ ತೀರ್ಪು ಶುಕ್ರವಾರ ಪ್ರಕಟವಾಗಲಿದೆ.
ಈ ಹಿಂದೆ ಅಬಕಾರಿ ನೀತಿ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್ ಅವರನ್ನು ಸಿಬಿಐ ಬಂಧಿಸಿತ್ತು. ಕೇಜ್ರಿವಾಲ್ ಅವರು ಸಿಬಿಐ ಬಂಧಿಸಿದ್ದನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳ ಕುರಿತು ಸುಪ್ರೀಂ ಕೋರ್ಟ್ ತನ್ನ ತೀರ್ಪು ನೀಡಲಿದೆ.ಇದನ್ನೂ ಓದಿ: ಪಿಎಸ್‌ಐ ಪರೀಕ್ಷೆ ಮುಂದೂಡಿಕೆ – ಶೀಘ್ರವೇ ಪರೀಕ್ಷಾ ದಿನ ನಿಗದಿ: ಗೃಹ ಸಚಿವ
ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಮಂಜೂರು ಮಾಡುವುದಕ್ಕೆ ಹೈಕೋರ್ಟ್ ತಡೆಯಾಜ್ಞೆ ಪ್ರಶ್ನಿಸಿ ಕೇಜ್ರಿವಾಲ್, ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಪ್ರಕರಣದ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಉಜ್ಜಲ್ ಭುಯಾನ್ ಅವರನ್ನೊಳಗೊಂಡ ಪೀಠವು ಪ್ರಕರಣದ ತೀರ್ಪನ್ನು ಕಾಯ್ದಿರಿಸಿತ್ತು.
ಮದ್ಯ ನೀತಿ ಪ್ರಕರಣದಲ್ಲಿ ದೆಹಲಿಯ ರೋಸ್ ಅವೆನ್ಯೂ ಕೋರ್ಟ್ನೊಳಗೆ ಸಿಬಿಐನಿಂದ ಬಂಧಿಸಲಾಗಿತ್ತು.ಇದನ್ನೂ ಓದಿ: ದೂದ್ ಸಾಗರ್ ಬಳಿ ಹಳಿ ತಪ್ಪಿದ ರೈಲು – ಮಾರ್ಗ ಬದಲು
ಕೆಲವು ವಾರಗಳ ಹಿಂದೆ ರೋಸ್ ಅವೆನ್ಯೂ ಕೋರ್ಟ್ ದೆಹಲಿ ಸಿಎಂಗೆ ಜಾಮೀನು ನೀಡಿತ್ತು. ಇದನ್ನು ಪ್ರಶ್ನಿಸಿ ಇಡಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿತು. ಜಾಮೀನು ನೀಡಿ ಅವೆನ್ಯೂ ಕೋರ್ಟ್ ಹೊರಡಿಸಿದ್ದ ಆದೇಶಕ್ಕೆ ದೆಹಲಿ ಹೈಕೋರ್ಟ್ ತಡೆ ನೀಡಿತು. ಹೈಕೋರ್ಟ್ ಆದೇಶ ಪ್ರಶ್ನಿಸಿ ಕೇಜ್ರಿವಾಲ್ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು.