ನವದೆಹಲಿ: ದೆಹಲಿ ಮದ್ಯ ಹಗರಣದಲ್ಲಿ (Delhi Liquor Scam) ಬಂಧನಕ್ಕೆ ಒಳಗಾಗಿರುವ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ಗೆ (Arvind Kejriwal) ದೆಹಲಿ ಹೈಕೋರ್ಟ್‌ನಲ್ಲಿ (Delhi High Court) ರಿಲೀಫ್ ಸಿಕ್ಕಿಲ್ಲ. ಟ್ರಯಲ್ ಕೋರ್ಟ್ ಮಂಜೂರು ಮಾಡಿದ್ದ ಜಾಮೀನಿಗೆ (Bail) ಹೈಕೋರ್ಟ್ ಇಂದು ತಡೆಯಾಜ್ಞೆ ನೀಡಿದೆ.
ಜಾರಿ ನಿರ್ದೇಶಾನಾಲಯ (ED) ನೀಡಿದ್ದ ವಿವರಣೆಗಳನ್ನು ಪರಿಗಣನೆಗೆ ತೆಗೆದುಕೊಳ್ಳುವಲ್ಲಿ ಟ್ರಯಲ್ ಕೋರ್ಟ್ ವಿಫಲವಾಗಿದೆ ಎಂದು ನ್ಯಾ. ಸುಧೀರ್ ಕುಮಾರ್ ಜೈನ್ ಅವರಿದ್ದ ಪೀಠ ಹೇಳಿದೆ. ಇದನ್ನೂ ಓದಿ: ಗಂಡ ಇಲ್ಲದೇ ಒಂದೊತ್ತಿನ ಊಟಕ್ಕೂ ಪರದಾಡುವಂತಾಗಿದೆ: ರೇಣುಕಾಸ್ವಾಮಿ ಕೊಲೆ ಕೇಸ್‌ನ ಎ4 ಆರೋಪಿ ಪತ್ನಿ ಕಣ್ಣೀರು
Advertisement
Advertisement
ಜಾಮೀನು ಅರ್ಜಿ ಮೇಲೆ ನಿರ್ಣಯ ತೆಗೆದುಕೊಳ್ಳುವಾಗ ಸಮಗ್ರವಾಗಿ ಆಲೋಚನೆ ಮಾಡಿಲ್ಲ. ಜಾಮೀನು ಅರ್ಜಿ ವಿಚಾರಣೆ ವೇಳೆ ಇಡಿ ಪರ ವಕೀಲರಿಗೆ ಅಗತ್ಯ ಅವಕಾಶವನ್ನು ನೀಡಬೇಕಿತ್ತು ಎಂದು ದೆಹಲಿ ಹೈಕೋರ್ಟ್ ಅಭಿಪ್ರಾಯಪಟ್ಟಿದೆ.
Advertisement
ಟ್ರಯಲ್ ಕೋರ್ಟ್ ನೀಡಿದ್ದ ಜಾಮೀನು ಆದೇಶವನ್ನು ಪ್ರಶ್ನಿಸಿ ಇಡಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ಹೈಕೋರ್ಟ್ ಪೀಠವು ಜೂನ್ 21 ರಂದು ಆದೇಶ ಕಾಯ್ದಿರಿಸಿ ಇಂದು ತನ್ನ ತೀರ್ಪು ಪ್ರಕಟಿಸಿದೆ.
Advertisement
ಕೋರ್ಟ್ ತಡೆ ನೀಡಿದ್ದರಿಂದ ಕೇಜ್ರಿವಾಲ್ ತಿಹಾರ್ ಜೈಲಿನಲ್ಲೇ (Tihar Jail) ಮುಂದುವರಿಯಬೇಕಾಗುತ್ತದೆ. ಹೈಕೋರ್ಟ್ ನೀಡಿದ ಆದೇಶವನ್ನು ಸುಪ್ರೀಂನಲ್ಲಿ ಪ್ರಶ್ನಿಸಲು ಕೇಜ್ರಿವಾಲ್ ವಕೀಲರ ತಂಡ ಮುಂದಾಗಿದೆ.
ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಕಳೆದ ಮಾರ್ಚ್ 21ರಂದು ಇಡಿ ಬಂಧಿಸಿತ್ತು. ಚುನಾವಣಾ ಪ್ರಚಾರಕ್ಕಾಗಿ ಸುಪ್ರೀಂ ಕೋರ್ಟ್ ಜೂನ್ 1ರವರೆಗೆ ಮಧ್ಯಂತರ ಜಾಮೀನು ನೀಡಿತ್ತು. ಜೂನ್ 2 ರಂದು ಅವರು ಮತ್ತೆ ಶರಣಾಗಿದ್ದರು.