ನವದೆಹಲಿ: ಟುಡೇಸ್ ಚಾಣಕ್ಯ (Today’s Chanakya) ಈ ಬಾರಿಯ ದೆಹಲಿ ಚುನಾವಣೆಯಲ್ಲಿ ಬಿಜೆಪಿ (BJP) 50+ ಸ್ಥಾನ ಗೆಲ್ಲಬಹುದು ಎಂದು ಭವಿಷ್ಯ ನುಡಿದಿದೆ.
ಬುಧವಾರ ತನ್ನ ಚುನಾವಣೋತ್ತರ ಸಮೀಕ್ಷೆಯನ್ನು (Delhi Exit Poll) ಪ್ರಕಟಿಸದ ಟುಡೇಸ್ ಚಾಣಕ್ಯ ಇಂದು ಸಂಜೆ 7 ಗಂಟೆಗೆ ದತ್ತಾಂಶವನ್ನು ಬಿಡುಗಡೆ ಮಾಡಿತು.
Advertisement
ಬಿಜೆಪಿ ಮೈತ್ರಿಕೂಟ 51 ± 6, ಆಪ್ 19 ± 6, ಇತರರು 0 ± 3 ಸ್ಥಾನ ಗೆಲ್ಲಬಹುದು ಎಂದು ಹೇಳಿದೆ. ಬಿಜೆಪಿ 49%, ಆಪ್ 41%, ಇತರರು 10% ಮತ ಪಡೆಯಬಹುದು ಎಂದು ತಿಳಿಸಿದೆ. ಇದನ್ನೂ ಓದಿ: US Deportation| 2009ರಿಂದ 15,000 ಭಾರತೀಯರ ಗಡಿಪಾರು – ಯಾವ ವರ್ಷ ಎಷ್ಟು ಮಂದಿ?
Advertisement
Advertisement
ದೆಹಲಿ ಚುನಾವಣೆಗೆ ಸಂಬಂಧಿಸಿದಂತೆ ಒಟ್ಟು ಇಲ್ಲಿಯವರೆಗೆ ಪ್ರಕಟವಾದ 12 ಸಮೀಕ್ಷೆಗಳಲ್ಲಿ 10 ಸಮೀಕ್ಷೆಗಳು ಬಿಜೆಪಿ ಗೆಲ್ಲಲಿದೆ ಎಂದು ಹೇಳಿದರೆ 2 ಸಮೀಕ್ಷೆಗಳು ಆಪ್ ಜಯಗಳಿಸಲಿದೆ ಎಂದು ತಿಳಿಸಿದೆ.
Advertisement
ಒಟ್ಟು 70 ಕ್ಷೇತ್ರಗಳಿಗೆ 699 ಅಭ್ಯರ್ಥಿಗಳು ಕಣದಲ್ಲಿದ್ದು ಫೆ.8 ರಂದು ದೆಹಲಿ ಚುನಾವಣೆಯ ಫಲಿತಾಂಶ ಪ್ರಕಟವಾಗಲಿದೆ. ಸರಳ ಬಹುಮತಕ್ಕೆ 36 ಸ್ಥಾನಗಳ ಅಗತ್ಯವಿದೆ.
ಕಳೆದ 25 ವರ್ಷಗಳಿಂದ ಮರೀಚಿಕೆಯಾಗಿರುವ ಅಧಿಕಾರವನ್ನು ದಕ್ಕಿಸಿಕೊಳ್ಳಲು ಬಿಜೆಪಿ (BJP) ಸರ್ವ ಶಕ್ತಿಗಳನ್ನು ಪಣಕ್ಕೊಡಿದೆ. ದಶಕದಿಂದ ಇರುವ ಅಧಿಕಾರವನ್ನು ಉಳಿಸಿಕೊಳ್ಳಲು ಹಿಂದೆಂದಿಗಿಂತಲೂ ಹೆಚ್ಚು ಉಚಿತ ಯೋಜನೆಗಳನ್ನು ಆಪ್ (AAP) ಘೋಷಿಸಿದೆ. ಒಂದಿಷ್ಟು ಸೀಟ್‌ಗಳನ್ನಾದರೂ ಗೆದ್ದು ಮಾನ ಉಳಿಸಿಕೊಳ್ಳಲು ಕಾಂಗ್ರೆಸ್ (Congress) ಸಹ ಭರವಸೆಗಳ ಮೇಲೆ ಭರವಸೆ ನೀಡಿದೆ.