ನವದೆಹಲಿ: ದೆಹಲಿಯ ಐತಿಹಾಸಿಕ ಕೆಂಪುಕೋಟೆ ಬಳಿ ಕಾರು ಸ್ಫೋಟಗೊಂಡಿದ್ದು, ಸ್ಥಳೀಯರು ಹಾಗೂ ತೀವ್ರ ಆತಂಕ ಸೃಷ್ಟಿಸಿದೆ.
#BREAKING – Twin car blasts reported near the Red Fort in New Delhi.#RedFort #CarBlast #News pic.twitter.com/kFXNQagYH2
— TIMES NOW (@TimesNow) November 10, 2025
ಜಮ್ಮು ಮತ್ತು ಕಾಶ್ಮೀರ ಪೊಲೀಸರು ಇಂದು ದೆಹಲಿ ಸಮೀಪ ಭಾರೀ ಪ್ರಮಾಣದ ಸ್ಫೋಟಕ ವಸ್ತುಗಳನ್ನು ಪತ್ತೆಹಚ್ಚಿದ ಕೆಲವೇ ಗಂಟೆಗಳಲ್ಲಿ ಸ್ಫೋಟ ಸಂಭವಿಸಿರುವುದು ಭಾರೀ ಆತಂಕಕ್ಕೆ ಕಾರಣವಾಗಿದೆ.
ಕೆಂಪು ಕೋಟೆ ಮೆಟ್ರೋ ನಿಲ್ದಾಣದ ಗೇಟ್ ಸಂಖ್ಯೆ-1ರ ಬಳಿ ಸ್ಫೋಟ ಸಂಭವಿಸಿದೆ. ಒಂದು ಕಾರು ಸ್ಫೋಟಗೊಂಡ ಬಳಿಕ ಪಕ್ಕದಲ್ಲೇ ಇದ್ದ ಮೂರರಿಂದ ನಾಲ್ಕು ವಾಹನಗಳೂ ಬೆಂಕಿಗೆ ಆಹುತಿಯಾಗಿವೆ. ಜೊತೆಗೆ ಸಮೀಪದ ಅಂಗಡಿ ಮುಂಗಟ್ಟುಗಳಿಗೂ ಬೆಂಕಿಯ ಕಿಡಿಗಳು ತಾಕಿದ್ದು, ಹಾನಿಯುಂಟು ಮಾಡಿದೆ. ಘಟನೆಯಲ್ಲಿ ಓರ್ವ ಮೃತಪಟ್ಟಿರುವುದಾಗಿ ಸ್ಥಳೀಯರು ತಿಳಿಸಿದ್ದಾರೆಂದು ಮಾಧ್ಯಮಗಳು ವರದಿ ಮಾಡಿವೆ.
ವಿಷಯ ತಿಳಿಯುತ್ತಿದ್ದಂತೆ ದೆಹಲಿ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ದೆಹಲಿ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು, ಬೆಂಕಿಯನ್ನೂ ನಿಯಂತ್ರಣಕ್ಕೆ ತಂದಿದ್ದಾರೆ. ಈ ಬೆನ್ನಲ್ಲೇ ವಿಧಿವಿಜ್ಞಾನ ಪ್ರಯೋಗಾಲಯ ತಂಡ, ಬಾಂಬ್ ನಿಷ್ಕ್ರಿಯ ದಳಗಳು ಸ್ಥಳಕ್ಕೆ ಧಾವಿಸಿದ್ದು, ಕಾರು ಸ್ಫೋಟಕ್ಕೆ ಕಾರಣ ಪತ್ತೆಹಚ್ಚುವ ಕೆಲಸದಲ್ಲಿ ತೊಡಗಿವೆ.

