ಲಕ್ನೋ: ದೆಹಲಿಯಲ್ಲಿ ಭೀಕರ ಕಾರು ಸ್ಫೋಟ ಸಂಭವಿಸಿದ ಬೆನ್ನಲ್ಲೇ ದೇಶಾದ್ಯಂತ ಪ್ರಮುಖ ನಗರಗಳಲ್ಲಿ ಹೈಅಲರ್ಟ್ ಘೋಷಿಸಲಾಗಿದೆ. ಇದರೊಂದಿಗೆ ಉತ್ತರ ಪ್ರದೇಶದ ಅಯೋಧ್ಯಾ ರಾಮ ಮಂದಿರಕ್ಕೂ ಬಿಗಿ ಭದ್ರತೆ ಕಲ್ಪಿಸಲಾಗಿದೆ.
ಯುಪಿನಲ್ಲಿ ಕಟ್ಟೆಚ್ಚರ
ಉತ್ತರ ಪ್ರದೇಶದಲ್ಲೂ ರಾಜ್ಯಾದ್ಯಂತ ಕಟ್ಟೆಚ್ಚರ ವಹಿಸಲು ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿ ಅಮಿತಾಭ್ ಯಶ್ ಸೂಚಿಸಿದ್ದಾರೆ. ಸೂಕ್ಷ್ಮ ಧಾರ್ಮಿಕ ಸ್ಥಳಗಳು, ಸೂಕ್ಷ್ಮ ಜಿಲ್ಲೆಗಳು ಮತ್ತು ಗಡಿ ಪ್ರದೇಶಗಳಲ್ಲಿ ಕೂಡಲೇ ಭದ್ರತೆ ಹೆಚ್ಚಿಸಲು ಉತ್ತರ ಪ್ರದೇಶದ ಎಲ್ಲಾ ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಅಲ್ಲದೇ ಸೂಕ್ಷ್ಮ ಪ್ರದೇಶಗಳಲ್ಲಿ ಗಸ್ತು ನಡೆಸುವಂತೆ ಆದೇಶ ಹೊರಡಿಸಿದ್ದಾರೆ. ಅಲ್ಲದೇ ಮುಂಬೈನಲ್ಲೂ ಪೊಲೀಶರು ಕಟ್ಟೆಚ್ಚರ ವಹಿಸಿದ್ದಾರೆ.

