– ಪೊಲೀಸ್ ಕಾರ್ಯಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ
ನವದೆಹಲಿ: ಹೆಮ್ಮಾರಿ ಕೊರೊನಾ ವೈರಸ್‍ನಿಂದಾಗಿ ಭಾರತ ಸೇರಿದಂತೆ ಅನೇಕ ದೇಶಗಳಲ್ಲಿ ಏಕಾಏಕಿ ಲಾಕ್‍ಡೌನ್ ಜಾರಿಗೆ ಬಂದಿದೆ. ಇಂತಹ ಸಮಯದಲ್ಲಿ ಕರ್ತವ್ಯದಲ್ಲಿದ್ದ ಪೊಲೀಸರಿಂದ ಅನೇಕ ಹೃದಯ ಸ್ಪರ್ಶಿಸು ಪ್ರಸಂಗಗಳು ನಡೆದಿವೆ. ಅಂತೆ ಪೊಲೀಸರ ಪುಟ್ಟ ಸಹಾಯದಿಂದ ಶನಿವಾರ ಕೂಲಿ ಕಾರ್ಮಿಕರ ನಾಲ್ಕು ವರ್ಷದ ಬಾಲಕಿಯೊಬ್ಬಳು ತನ್ನ ಜನ್ಮದಿನವನ್ನು ಆಚರಿಸಿಕೊಳ್ಳಲು ಸಾಧ್ಯವಾಯಿತು.
ಫತೇಪುರಿ ಬೇರಿಯ ಪೊಲೀಸ್ ಠಾಣೆ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇನ್ನು ಕೆಲವರು ತಮ್ಮದೆ ರೀತಿಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.
Advertisement
Today on birthday of a 4-yr-old girl, the daughter of a labourer,a cake was arranged by staff of Police Station Fatehpuri Beri&her birthday was celebrated with her friends in community kitchen at the labour camp there. The girl is a resident of Chandan Hulla village: Delhi Police pic.twitter.com/Y1KhZ6UUXq
— ANI (@ANI) April 18, 2020
Advertisement
ಈ ಫೋಟೋದಲ್ಲಿ ಬಾಲಕಿ ತನ್ನ ಮುಂದೆ ಕೇಕ್‍ನೊಂದಿಗೆ ಬರ್ತ್ ಡೇ ಟೋಪಿ ಧರಿಸಿರುವುದನ್ನು ಕಾಣಬಹುದು. ಬಾಲಕಿ ಕೇಕ್ ಕತ್ತರಿಸಿ ಖುಷಿ ವ್ಯಕ್ತಪಡಿಸಿದ್ದಾಳೆ.
Advertisement
ಬಾಲಕಿಯ ಈ ವರ್ಷದ ಬರ್ತ್ ಡೇ ಅತ್ಯಂತ ಸ್ಮರಣಿಯವಾಗಿತ್ತದೆ ಎಂದು ನೆಟ್ಟಿಗರು ಪ್ರತಿಕ್ರಿಯಿಸಿದ್ದಾರೆ. ಬಾಲಕಿ ಚಂದನ್ ಹುಲ್ಲಾ ಗ್ರಾಮದ ನಿವಾಸಿ ಎಂಬ ಮಾಹಿತಿಯನ್ನು ದೆಹಲಿ ಪೊಲೀಸರು ನೀಡಿದ್ದಾರೆ.