ನವದೆಹಲಿ: 16 ವರ್ಷದ ಹುಡುಗಿಯನ್ನು ಆಕೆಯ ಮನೆಯ ಸಮೀಪದಲ್ಲಿ ಅಪಹರಿಸಿ ಚಲಿಸುತ್ತಿದ್ದ ಕಾರಿನೊಳಗೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.
ದೆಹಲಿಯ ವಸಂತ ವಿಹಾರ್ನಿಂದ 16 ವರ್ಷದ ಹುಡುಗಿಯನ್ನು ಆರೋಪಿಗಳು ಅಪಹರಿಸಿದ್ದಾರೆ. ಸುಮಾರು 44 ಕಿಲೋಮೀಟರ್ಗಳವರೆಗೆ ಕಾರನ್ನು ಚಲಾಯಿಸುತ್ತಲ್ಲೆ ಹುಡುಗಿಯನ್ನು ಕಿರಾತಕರು ಅತ್ಯಾಚಾರ ಮಾಡಿದ್ದಾರೆ. ಕಾರು ಓಡಿಸಿಕೊಂಡೆ ಅತ್ಯಾಚಾರವೆಸಗಿದರಿಂದ ಯಾರಿಗೂ ತಿಳಿದುಬಂದಿಲ್ಲ. ಘಟನೆ ನಂತರ ಸಂತ್ರಸ್ತೆ ಕುಟುಂಬಸ್ಥರಿಗೆ ತಿಳಿಸಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾಳೆ. ಇದನ್ನೂ ಓದಿ: ಸರ್ಕಾರಿ ಶಾಲಾ-ಕಾಲೇಜುಗಳ ಆಸ್ತಿ ರಕ್ಷಣೆಗೆ ಶಿಕ್ಷಣ ಇಲಾಖೆಯಿಂದ ವಿಶೇಷ ಅಭಿಯಾನ
ಆಸ್ಪತ್ರೆಯಿಂದ ಪೊಲೀಸರಿಗೆ ಘಟನೆ ಬಗ್ಗೆ ಮಾಹಿತಿ ತಿಳಿದುಬಂದಿದೆ. ನಂತರ ಸಂತ್ರಸ್ತೆಯನ್ನು ವಿಚಾರಣೆ ಮಾಡಿದ ಪೊಲೀಸರು ಆರೋಪಿಗಳನ್ನು ಕಂಡುಹಿಡಿದಿದ್ದಾರೆ. ಯುವತಿಯ ತಂದೆ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಮನೋಜ್ ಕುಮಾರ್ (25), ರೂಪೇಶ್ ಕುಮಾರ್ (35), ಮೊಹಮ್ಮದ್ ಆರಿಫ್ (23) ಎಂದು ಗುರುತಿಸಲಾಗಿದ್ದು, ಎಲ್ಲರೂ ಟ್ಯಾಕ್ಸಿ ಚಾಲಕರಾಗಿದ್ದಾರೆ.
ನಡೆದಿದ್ದೇನು?
ಜುಲೈ 6ರ ಸಂಜೆ ಸಂತ್ರಸ್ತೆಯು ತನ್ನ ಸ್ನೇಹಿತೆ ಮನೆಯಿಂದ ಹಿಂದಿರುಗುತ್ತಿದ್ದಳು. ವಸಂತ್ ವಿಹಾರ್ ಮಾರುಕಟ್ಟೆಯಲ್ಲಿ ಇಬ್ಬರು ಆರೋಪಿಗಳನ್ನು ಸಂತ್ರಸ್ತೆ ಭೇಟಿಯಾಗಿದ್ದಾಳೆ. ಅವರು ಆಕೆಯ ಸುತ್ತಮುತ್ತ ತಿರುಗಾಡುತ್ತಿದ್ದರು. ಸ್ವಲ್ಪ ಸಮಯದ ನಂತರ ಸಂತ್ರಸ್ತೆಯ ಬಳಿಗೆ ಕಾರನ್ನು ತೆಗೆದುಕೊಂಡು ಹೋಗಿ ಆಕೆಯ ಮುಖಕ್ಕೆ ಮದ್ಯವನ್ನು ಎಸೆದು ಕಾರಿನಲ್ಲಿ ಅಪಹರಿಸಿದ್ದಾರೆ. ಇದನ್ನೂ ಓದಿ: ಒಕ್ಕೂಟದ ಪತನದ ನಂತರ ರಾಜೀನಾಮೆ ನೀಡಲು ಮುಂದಾದ ಇಟಲಿ ಪಿಎಂ
ನಂತರ ಆರೋಪಿಗಳು ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ. ನಗರದಾದ್ಯಂತ ಕಾರು ಓಡಿಸುತ್ತ ಆಕೆಯ ಮೇಲೆ ಥಳಿಸಿದ್ದಾರೆ. ಅಪರಾಧ ಎಸಗಬೇಕಾದರೆ ವೀಡಿಯೋ ಕೂಡ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಬಾಲಕಿ ಚಿಕಿತ್ಸೆ ಪಡೆಯುತ್ತಿದ್ದ ಆಸ್ಪತ್ರೆಯಿಂದ ಎರಡು ದಿನಗಳ ನಂತರ ಪೊಲೀಸರಿಗೆ ಮಾಹಿತಿ ಸಿಕ್ಕಿದ್ದು, 23, 25 ಮತ್ತು 35 ವರ್ಷ ವಯಸ್ಸಿನ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.