ನವದೆಹಲಿ: 18 ರಿಂದ 59 ವರ್ಷ ವಯಸ್ಸಿನ ಎಲ್ಲರಿಗೂ ಕೋವಿಡ್ ಲಸಿಕೆಯ ಬೂಸ್ಟರ್ ಡೋಸ್‌ನ್ನು ದೆಹಲಿಯ ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲೂ ಉಚಿತವಾಗಿ ನೀಡಲಾಗುವುದು ಎಂದು ದೆಹಲಿ ಸರ್ಕಾರ ಘೋಷಿಸಿದೆ.
ರಾಷ್ಟ್ರ ರಾಜಧಾನಿಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಅರವಿಂದ್ ಕೇಜ್ರಿವಾಲ್ ಸರ್ಕಾರ ಉಚಿತವಾಗಿ ಬೂಸ್ಟರ್ ಡೋಸ್ ನೀಡುವುದಾಗಿ ತಿಳಿಸಿದೆ. ಇದನ್ನೂ ಓದಿ: ಎಲೆಕ್ಟ್ರಿಕ್ ವಾಹನಗಳ ಕಂಪನಿಗಳಿಗೆ ಖಡಕ್ ವಾರ್ನಿಂಗ್ ಕೊಟ್ಟ ನಿತಿನ್ ಗಡ್ಕರಿ
Advertisement
Advertisement
ದೆಹಲಿಯಲ್ಲಿರುವ ಅರ್ಹ ಫಲಾನುಭವಿಗಳು ಮುನ್ನೆಚ್ಚರಿಕೆ ಡೋಸ್ ಪ್ರಯೋಜನ ಪಡೆದುಕೊಳ್ಳಲೆಂದು, ಏಪ್ರಿಲ್ 21 ರಿಂದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ (ಕೋವಿಡ್ ಲಸಿಕಾ ಕೇಂದ್ರ) 18 ರಿಂದ 59 ವರ್ಷ ವಯಸ್ಸಿನವರಿಗೆ ಉಚಿತವಾಗಿ ನೀಡಲಾಗುವುದು ಎಂದು ಆರೋಗ್ಯ ಇಲಾಖೆ ಆದೇಶದಲ್ಲಿ ತಿಳಿಸಿದೆ. ದೆಹಲಿಯ ಕೋ-ವಿನ್ ಪೋರ್ಟಲ್‌ನಲ್ಲಿ ಅಗತ್ಯ ಬದಲಾವಣೆ ಮಾಡಲಾಗಿದೆ.
Advertisement
ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 965 ಕೋವಿಡ್ ಪ್ರಕರಣಗಳು ವರದಿಯಾಗಿವೆ. ಪಾಸಿಟಿವಿಟಿ ದರ ಶೇ.4.71ಕ್ಕೆ ಏರಿಕೆಯಾಗಿದೆ ಎಂದು ದೆಹಲಿ ಆರೋಗ್ಯ ಇಲಾಖೆ ವರದಿ ಮಾಡಿದೆ. ಇದನ್ನೂ ಓದಿ: ಪ್ರಧಾನಿ ಭೇಟಿಗೂ ಮುನ್ನ ಜಮ್ಮುವಿನಲ್ಲಿ ಎನ್‌ಕೌಂಟರ್ – ಇಬ್ಬರು ಉಗ್ರರ ಹತ್ಯೆ
Advertisement
ಕೋವಿಡ್ ಪ್ರಕರಣಗಳ ಸಂಖ್ಯೆ ಏರಿಕೆಯಿಂದಾಗಿ ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಜನರು ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಸರ್ಕಾರ ಸೂಚನೆ ನೀಡಿದೆ. ನಿಯಮ ಉಲ್ಲಂಘಿಸಿದವರಿಗೆ 500 ರೂ. ದಂಡ ವಿಧಿಸಲಾಗುವುದು ಎಂದು ಎಚ್ಚರಿಸಿದೆ.