ದೀಪಾವಳಿ ಹೊಸ್ತಿಲಲ್ಲೇ ಪಟಾಕಿ ಬ್ಯಾನ್ ಮಾಡಿದ ದೆಹಲಿ ಸರ್ಕಾರ

Public TV
1 Min Read
Fire Crackers

– ಜ.1ರ ವರೆಗೆ ಪಟಾಕಿ ಉತ್ಪಾದನೆ, ಮಾರಾಟ, ಬಳಕೆಗೆ ಬ್ರೇಕ್

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ವಾಯುಮಾಲಿನ್ಯ ಹೆಚ್ಚುತ್ತಿರುವ ಹಿನ್ನೆಲೆ ಪಟಾಕಿ ಮಾರಾಟ ಹಾಗೂ ಬಳಕೆಯನ್ನು 2025ರ ಜನವರಿ 1 ರ ವರೆಗೆ ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ದೆಹಲಿ ಸರ್ಕಾರ (Delhi Government) ತಿಳಿಸಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ದೆಹಲಿಯ ಪರಿಸರ ಸಚಿವ ಗೋಪಾಲ್ ರೈ (Gopal Rai), ಕೇಜ್ರಿವಾಲ್ ಸರ್ಕಾರವು ಪಟಾಕಿಗಳ ತಯಾರಿಕೆ, ಸಂಗ್ರಹಣೆ, ಮಾರಾಟ ಮತ್ತು ಬಳಕೆಯ ಮೇಲೆ ಸಂಪೂರ್ಣ ನಿಷೇಧವನ್ನು ವಿಧಿಸಿದೆ. 2025ರ ಜನವರಿ 1ರ ವರೆಗೆ ಆನ್‌ಲೈನ್‌ನಲ್ಲಿ ಪಟಾಕಿ ಮಾರಾಟ ಮತ್ತು ವಿತರಣೆಯನ್ನು ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ.ಇದನ್ನೂ ಓದಿ: ಎತ್ತಿನಹೊಳೆ ಯೋಜನೆಯ ಮೊದಲ ಹಂತ ಉದ್ಘಾಟನೆ ಬೆನ್ನಲ್ಲೆ ಕೇಂದ್ರ ಸರ್ಕಾರ ಆಕ್ಷೇಪ

ಚಳಿಗಾಲದ ಅಧಿವೇಶನದಲ್ಲಿ ವಾಯುಮಾಲಿನ್ಯವನ್ನು ತಡೆಯುವ 21 ಅಂಶಗಳ ಯೋಜನೆಯ ಭಾಗವಾಗಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಪರಿಸರ ಇಲಾಖೆಯು ಮಾಲಿನ್ಯದ ಹಾಟ್‌ಸ್ಪಾಟ್‌ಗಳಲ್ಲಿ ಗಾಳಿಯ ಗುಣಮಟ್ಟ ಮೇಲ್ವಿಚಾರಣೆ ಮಾಡಲು ಡ್ರೋನ್‌ಗಳನ್ನು ಬಳಸುತ್ತದೆ ಎಂದು ಮಾಹಿತಿ ನೀಡಿದ್ದಾರೆ.ಇದನ್ನೂ ಓದಿ: ದರ್ಶನ್‌ ಜೊತೆಗೆ ಸಂಪರ್ಕ ಬೆಳೆದಿದ್ದು ಹೇಗೆ? – ಎಳೆಎಳೆಯಾಗಿ ಬಿಚ್ಚಿಟ್ಟ ಪವಿತ್ರಾಗೌಡ

Gopal Rai

ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejrival) ಅವರ ನೇತೃತ್ವದಲ್ಲಿ, ಚಳಿಗಾಲದಲ್ಲಿ ಉಂಟಾಗುವ ಮಾಲಿನ್ಯ ಸಮಸ್ಯೆ ಎದುರಿಸಲು ಸರ್ಕಾರ ತೀವ್ರ ಸಿದ್ಧತೆಗಳನ್ನು ನಡೆಸಿದೆ. ನಮ್ಮ ಸರ್ಕಾರವು ದೆಹಲಿಯಲ್ಲಿ ವಾಯುಮಾಲಿನ್ಯವನ್ನು ಕಡಿಮೆ ಮಾಡಲು ನಿರಂತರವಾಗಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ. ಇದರ ಪರಿಣಾಮವಾಗಿ ಕಳೆದ 9 ವರ್ಷಗಳಲ್ಲಿ ಸುಮಾರು 30 ಪ್ರತಿಶತದಷ್ಟು ಮಾಲಿನ್ಯವನ್ನು ಕಡಿಮೆ ಮಾಡಲಾಗಿದೆ ಎಂದರು.

Share This Article