-ಸಿಬಿಎಸ್‍ಇ ಪರೀಕ್ಷೆಗಳು ಮುಂದೂಡಿಕೆ
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದ ಹಿಂಸಾಚಾರದಲ್ಲಿ ಸಾವನ್ನಪ್ಪಿದವರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ. ಹಿಂಸಾಚಾರದಲ್ಲಿ ಸುಮಾರು 180ಕ್ಕೂ ಅಧಿಕ ಜನ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
Delhi: Latest visuals from Jafrabad metro station. The protesters left the metro station last night. #NortheastDelhi https://t.co/VA0MyUsiJd pic.twitter.com/YjbRDjsMLY
— ANI (@ANI) February 26, 2020
Advertisement
ದೆಹಲಿಯಲ್ಲಿ ಗಲಭೆ ಮತ್ತು ಹಿಂಸಾಚಾರ ಹಿನ್ನೆಲೆಯಲ್ಲಿ ದೆಹಲಿ ಹೈಕೋರ್ಟ್ ರಾತ್ರಿಯೇ ಘಟನೆಯ ಬಗ್ಗೆ ವಿಚಾರಣೆಯೇ ನಡೆಸಿತು. ನ್ಯಾ. ಮುರಳೀಧರ್ ಅವರು ರಾತ್ರಿ 12.30ರ ವೇಳೆಗೆ ತಮ್ಮ ನಿವಾಸದಲ್ಲಿ ವಿಚಾರಣೆ ನಡೆಸಿ, ಗಾಯಾಳುಗಳಿಗೆ ಸೂಕ್ತ ವೈದ್ಯಕೀಯ ನೆರವು ನೀಡಬೇಕು. ಸೂಕ್ತ ಭದ್ರತಾ ಕ್ರಮ ತೆಗೆದುಕೊಳ್ಳಬೇಕು. ಇಂದು ಮಧ್ಯಾಹ್ನ 2.30ಕ್ಕೆ ವಿಚಾರಣೆ ನಡೆಸಲಾಗುತ್ತದೆ. ವಿಚಾರಣೆ ವೇಳೆ ದೆಹಲಿ ಪೊಲೀಸರಿಗೆ ಘಟನೆಯ ಸಂಪೂರ್ಣ ವರದಿ ಸಲ್ಲಿಸಲು ನ್ಯಾಯಾಧೀಶರು ಸೂಚಿಸಿದ್ದಾರೆ.
Advertisement
Hearing at 1 AM at Justice Muralidhar Residence: Delhi HC directs Police to provide safe passage to injured victims to Govt hospitals@DelhiPolice @advsanjoy #DelhiRiots #delhivoilence #DelhiIsBurning #ShootAtSight @suroorm #DelhiCAAClashes https://t.co/fTPBZxORJu
— Bar & Bench (@barandbench) February 25, 2020
Advertisement
ಫೆಬ್ರವರಿ 23ರಂದು ಈಶಾನ್ಯ ದೆಹಲಿಯಲ್ಲಿ ಆರಂಭವಾದ ಗಲಾಟೆ ಹಿಂಸಾಚಾರ ರೂಪ ಪಡೆದುಕೊಂಡಿದೆ. ಇಂದು ನಡೆಯಬೇಕಿದ್ದ 10 ಮತ್ತು 12ನೇ ತರಗತಿಯ ಸಿಬಿಎಸ್‍ಇ ಪರೀಕ್ಷೆಗಳನ್ನು ಮುಂದೂಡಿದೆ. ಮೌಜ್‍ಪುರ್ ಮತ್ತು ಗೋಕುಲ್ಪುರಿ ಪ್ರದೇಶದಲ್ಲಿ ನಿಷೇಧಾಜ್ಞೆ ಮುಂದುವರಿದಿದ್ದು, ಅಂಗಡಿ ಮುಂಗಟ್ಟು ಬಂದ್ ಮಾಡಲಾಗಿದೆ. ಮೌಜ್‍ಪುರ್ ಮತ್ತು ಗೋಕುಲ್ಪುರಿ ಪ್ರದೇಶಗಳ ಒಳಗೆ ವಾಹನ ಸಂಚಾರ ರದ್ದು ಮಾಡಲಾಗಿದ್ದು, ಪರಿಸ್ಥಿತಿ ನಿಯಂತ್ರಣಕ್ಕೆ ಭದ್ರತಾ ಪಡೆಗಳು ಆಗಮಿಸಿವೆ.