ನವದೆಹಲಿ: ಅಗ್ನಿಪಥ್ ಯೋಜನೆಯನ್ನು (Agnipath Scheme) ರಾಷ್ಟ್ರೀಯ ಹಿತಾಸಕ್ತಿಗಾಗಿ ಪರಿಚಯಿಸಲಾಗಿದೆ. ಈ ಯೋಜನೆಯಲ್ಲಿ ಮಧ್ಯಪ್ರವೇಶಿಸಲು ಯಾವುದೇ ಕಾರಣಗಳಿಲ್ಲ ಎಂದು ದೆಹಲಿ ಹೈಕೋರ್ಟ್ (Delhi HighCourt) ಹೇಳಿದೆ.
ಅಗ್ನಿಪಥ್ ಯೋಜನೆಯ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ್ದ ಹೈಕೋರ್ಟ್ ಇಂದು (ಫೆ.27) ತೀರ್ಪು ಪ್ರಕಟಿಸಿದೆ. ಇದನ್ನೂ ಓದಿ: ಸ್ಕೂಲ್‌ನಲ್ಲೇ ಆತ್ಮಹತ್ಯೆ ಮಾಡಿಕೊಳ್ಳೋಕೆ ಹೋಗಿದ್ದ ಪಿಯು ವಿದ್ಯಾರ್ಥಿನಿ- ಅಸಲಿ ಕಾರಣ ಬಯಲು
Advertisement
Advertisement
ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ಮತ್ತು ನ್ಯಾಯಮೂರ್ತಿ ಸುಬ್ರಮೋನಿಯಂ ಪ್ರಸಾದ್ ಅವರ ವಿಭಾಗೀಯ ಪೀಠವು ಈ ತೀರ್ಪು ನೀಡಿದೆ. `ನ್ಯಾಯಾಲಯವು ಈ ಯೋಜನೆಯಲ್ಲಿ ಮಧ್ಯಪ್ರವೇಶಿಸಲು ಯಾವುದೇ ಕಾರಣವನ್ನು ಕಂಡುಕೊಳ್ಳುವುದಿಲ್ಲ ಎಂದು ಹೇಳಿ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಲಾಗಿದೆ. ನಾವು ಯೋಜನೆಯನ್ನು ರಾಷ್ಟ್ರೀಯ ಹಿತಾಸಕ್ತಿಯಿಂದ ಪರಿಚಯಿಸಲಾಗಿದೆ ಎಂದು ತೀರ್ಮಾನಿಸಬಹುದು’ ಎಂದು ನ್ಯಾಯಾಲಯ ಹೇಳಿದೆ. ಇದನ್ನೂ ಓದಿ: ಕೇಸರಿಮಯವಾದ ಕುಂದಾನಗರಿ ಬೆಳಗಾವಿ- ಗಲ್ಲಿ ಗಲ್ಲಿಗಳಲ್ಲಿ ಬಿಜೆಪಿ ಬಾವುಟ ಹಾರಾಟ
Advertisement
Advertisement
ಅಲ್ಲದೇ ನೇಮಕಾತಿಗಾಗಿ ಜಾಹೀರಾತುಗಳಿಂದ ಯಾವುದೇ ಪ್ರಾಮಿಸರಿ ಎಸ್ಟೊಪೆಲ್ ಅಥವಾ ಕಾನೂನುಬದ್ಧ ನಿರೀಕ್ಷೆಯನ್ನು ಸೃಷ್ಟಿಸಲಾಗಿಲ್ಲ ಎಂದು ಪೀಠ ಹೇಳಿದೆ. ಕಳೆದ ಡಿಸೆಂಬರ್ 15 ರಂದು ಈ ಪ್ರಕರಣದ ತೀರ್ಪನ್ನು ನ್ಯಾಯಾಲಯ ಕಾಯ್ದಿರಿಸಿತ್ತು.
ಅಗ್ನಿಪಥ್ ಯೋಜನೆಯನ್ನು ಪ್ರಶ್ನಿಸಿ ದೇಶಾದ್ಯಂತ ಹೈಕೋರ್ಟ್‌ಗಳಲ್ಲಿ ಹಲವಾರು ಅರ್ಜಿಗಳನ್ನು ಸಲ್ಲಿಸಲಾಗಿತ್ತು ಮತ್ತು ನೇಮಕಾತಿ ಪ್ರಕ್ರಿಯೆಗಳನ್ನು ಸ್ಥಗಿತಗೊಳಿಸಲಾಯಿತು. ನಂತರ ಸುಪ್ರೀಂ ಕೋರ್ಟ್ (Supreme Court) ಈ ಎಲ್ಲಾ ವಿಷಯಗಳನ್ನು ದೆಹಲಿ ಹೈಕೋರ್ಟ್‌ಗೆ ವರ್ಗಾಯಿಸಿತು.