ನವದೆಹಲಿ: ಸಾಲದ ಸುಳಿಯಲ್ಲಿರುವ ಏರ್ ಇಂಡಿಯಾ ವಿಮಾನಯಾನ ಸಂಸ್ಥೆಯ ಹರಾಜು ಪ್ರಕ್ರಿಯೆಯಲ್ಲಿ ಟಾಟಾ ಸನ್ಸ್ ಸಲ್ಲಿಸಿರುವ ಬಿಡ್‌ಗೆ ಅನುಮೋದನೆ ಸಿಕ್ಕಿರುವುದನ್ನು ಪ್ರಶ್ನಿಸಿ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಅವರು ಸಲ್ಲಿಸಿರುವ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದೆ.
18,000 ಕೋಟಿ ರೂ.ಗೆ ಟಾಟಾ ಕಂಪನಿ ಬಿಡ್ ಕೂಗಿದೆ. ಆದರೆ, ಏರ್ ಇಂಡಿಯಾ ಹೂಡಿಕೆ ಪ್ರಕ್ರಿಯೆಯನ್ನು ರದ್ದುಗೊಳಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರ್ಟ್‌ಗೆ ಮನವಿ ಸಲ್ಲಿಸಿದ್ದರು. ಇದು ಅಸಾಂವಿಧಾನಿಕ, ಅನ್ಯಾಯ ಮತ್ತು ಟಾಟಾ ಪರವಾಗಿ ಕೆಲಸ ಮಾಡಲಾಗಿದೆ ಎಂದು ಆರೋಪಿಸಿದ್ದರು. ಇದನ್ನೂ ಓದಿ: ತನ್ನ ಹೆಸರನ್ನೇ ಬಿಟ್ಟು All-Time XI ಹೆಸರಿಸಿದ ಸಚಿನ್ – ಈ ಸ್ಟಾರ್ ಆಟಗಾರಿಗಿಲ್ಲ ಸ್ಥಾನ!
ಹೂಡಿಕೆ ಹಿಂತೆಗೆದುಕೊಳ್ಳುವಿಕೆಯು ನೀತಿ ನಿರ್ಧಾರವಾಗಿದೆ. ಅದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಲಾಗುವುದಿಲ್ಲ. ರಾಷ್ಟ್ರೀಯ ವಿಮಾನಯಾನ ಸಂಸ್ಥೆಯು ಪ್ರತಿದಿನ ಸಾವಿರಾರು ಕೋಟಿಯಷ್ಟು ನಷ್ಟವನ್ನು ಅನುಭವಿಸುತ್ತಿದೆ ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಕೋರ್ಟ್‌ಗೆ ತಿಳಿಸಿದ್ದರು.
The Delhi HC dismisses my WP on Air India. But reasoned Order is being uploaded. After reading that we shall decide on going to SC
— Subramanian Swamy (@Swamy39) January 6, 2022
ಸರ್ಕಾರಿ ಸ್ವಾಮ್ಯದ ಏರ್ ಇಂಡಿಯಾ ವಿಮಾನಯಾನ ಸಂಸ್ಥೆಗೆ ಟಾಟಾ ಸನ್ಸ್ ಸಲ್ಲಿಸಿರುವ ಬಿಡ್‌ಗೆ 2021ರ ಅಕ್ಟೋಬರ್ 8ರಂದು ಆರ್ಥಿಕ ವ್ಯವಹಾರಗಳ ಕ್ಯಾಬಿನೆಟ್ ಸಮಿತಿಯು ಅನುಮೋದನೆ ನೀಡಿದೆ. ಇದನ್ನು ಪ್ರಶ್ನಿಸಿ ಸುಬ್ರಮಣಿಯನ್ ಸ್ವಾಮಿ ಅವರು ಕೋರ್ಟ್ ಮೆಟ್ಟಿಲೇರಿದ್ದರು. ಇದನ್ನೂ ಓದಿ: ಪ್ರಧಾನಿಗೆ ಭದ್ರತಾ ವೈಫಲ್ಯ – ಸುಪ್ರೀಂ ಮೇಲ್ವಿಚಾರಣೆಯಲ್ಲಿ ತನಿಖೆಗೆ ಮನವಿ, ನಾಳೆ ಮಹತ್ವದ ವಿಚಾರಣೆ
ಅರ್ಜಿ ವಜಾಗೊಂಡಿರುವುದಕ್ಕೆ ಪ್ರತಿಕ್ರಿಯಿಸಿದ ಸುಬ್ರಮಣಿಯನ್ ಸ್ವಾಮಿ ಅವರು, ನಮ್ಮ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದೆ. ಅದರ ಆದೇಶವು ತರ್ಕಬದ್ಧವಾಗಿದೆ. ನಾವು ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ನಿರ್ಧರಿಸಿದ್ದೇವೆ ಎಂದು ಟ್ವೀಟ್ ಮಾಡಿದ್ದಾರೆ.
ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಪಕ್ಷದವರೇ ಆದ ಸುಬ್ರಮಣಿಯನ್ ಸ್ವಾಮಿ ಅವರು, ಸರ್ಕಾರಿ ಸ್ವಾಮ್ಯದ ಸಂಸ್ಥೆಯೊಂದನ್ನು ಖಾಸಗಿ ಅವರಿಗೆ ನೀಡುವ ನಿರ್ಧಾರವನ್ನು ತೀವ್ರವಾಗಿ ಖಂಡಿಸಿದ್ದಾರೆ.