ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್‍ರನ್ನು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿದೆ.
Advertisement
ಏಪ್ರಿಲ್ ತಿಂಗಳಲ್ಲಿ ಸತ್ಯೇಂದ್ರ ಜೈನ್ ಕುಟುಂಬದ ಒಡೆತನದಲ್ಲಿರುವ 4.81 ಕೋಟಿ ರೂ. ಮೌಲ್ಯದ ಐದು ಸಂಸ್ಥೆಗಳಿಗೆ ಸೇರಿದ ಸ್ಥಿರಾಸ್ತಿಯನ್ನು ಇಡಿ ಜಪ್ತಿ ಮಾಡಿತ್ತು. 4 ವರ್ಷಗಳ ಹಿಂದೆ 2018ರಲ್ಲಿ ಇಡಿ ಸತ್ಯೇಂದ್ರ ಜೈನ್‍ರನ್ನು ವಿಚಾರಣೆಗೆ ಒಳಪಡಿಸಿತ್ತು. ಆ ಬಳಿಕ ಇದೀಗ ಐಪಿಸಿ ಸೆಕ್ಷನ್ 109 ಮತ್ತು ಸೆಕ್ಷನ್ 13(2)ರ ಅಡಿ ಸತ್ಯೇಂದ್ರ ಜೈನ್ ಮತ್ತು ಇತರರ ವಿರುದ್ಧ ಕೇಂದ್ರೀಯ ತನಿಖಾ ಸಂಸ್ಥೆ (ಸಿಬಿಐ) ದಾಖಲಿಸಿರುವ ಎಫ್‍ಐಆರ್ ಆಧಾರದ ಮೇಲೆ ಇಡಿ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆ ನಡೆಸುತ್ತಿದ್ದು, ಇದೀಗ ಸತ್ಯೇಂದ್ರ ಜೈನ್‍ರನ್ನು ಬಂಧಿಸಿದೆ. ಇದನ್ನೂ ಓದಿ: ಯತ್ನಾಳ್‍ರಂತೆ ನನಗೂ ಸಚಿವರನ್ನಾಗಿ ಮಾಡ್ತೀವಿ ಎಂದು ಹಣ ಕೇಳಿದ್ರು: ರೇಣುಕಾಚಾರ್ಯ ಬಾಂಬ್
Advertisement
Advertisement
ಸತ್ಯೇಂದ್ರ ಜೈನ್ ಬಂಧನದ ಬಳಿಕ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಇಡಿ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಟ್ವಿಟ್ಟರ್ ಮೂಲಕ ಹರಿಹಾಯ್ದಿದ್ದಾರೆ. ಹಿಮಾಚಲ ಪ್ರದೇಶದಲ್ಲಿ ಮುಂಬರುವ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಸತ್ಯೇಂದ್ರ ಜೈನ್ ಬಂಧನವಾಗಿದೆ. ಇವರು ಹಿಮಾಚಲ ಪ್ರದೇಶದ ಚುನಾವಣೆಯ ಎಎಪಿ ಉಸ್ತುವಾರಿಯಾಗಿದ್ದಾರೆ. ಸತ್ಯೇಂದ್ರ ಜೈನ್ ವಿರುದ್ಧ ಎಂಟು ವರ್ಷಗಳಿಂದ ನಕಲಿ ಕೇಸ್ ಮುಂದುವರಿಯುತ್ತಿದೆ. ಇದುವರೆಗೆ ಇಡಿ ಹಲವು ಬಾರಿ ವಿಚಾರಣೆಗೆ ಒಳಪಡಿಸಿ ಕ್ಲೀನ್ ಚಿಟ್ ನೀಡಿದೆ. ಆದರೂ ಇದೀಗ ಬಂಧಿಸಲಾಗಿದೆ. ಇದನ್ನೂ ಓದಿ: ಖಾದರ್ ಸರಿಯಾಗಿ ಪ್ರತಿಕ್ರಿಯಿಸುತ್ತಿಲ್ಲ, ಅಡ್ಯಾರ್‌ಗೆ ಹೋಗಿ ಕ್ರಿಕೆಟ್ ಆಡ್ತಿದ್ದಾರೆ- ಹಿಜಬ್ ವಿದ್ಯಾರ್ಥಿನಿ ಅಸಮಾಧಾನ
Advertisement
सत्येंद्र जैन के ख़िलाफ़ 8 साल से एक फ़र्ज़ी केस चलाया जा रहा है. अभी तक कई बार ED बुला चुकी है। बीच में कई साल ED ने बुलाना भी बंद कर दिया था क्योंकि उन्हें कुछ मिला ही नहीं। अब फिर शुरू कर दिया क्योंकि सत्येंद्र जैन हिमाचल के इलेक्शन इंचार्ज हैं।1/2
— Manish Sisodia (@msisodia) May 30, 2022
ಹಿಮಾಚಲ ಪ್ರದೇಶದಲ್ಲಿ ನಡೆಯಲಿರುವ ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಹೀನಾಯವಾಗಿ ಸೋಲುತ್ತದೆ. ಎಎಪಿ ಅಲ್ಲೂ ಕೂಡ ಗೆಲುವು ದಾಖಲಿಸುತ್ತದೆ. ಅದಕ್ಕಾಗಿಯೇ ಸತ್ಯೇಂದ್ರ ಜೈನ್ ಅವರನ್ನು ಹಿಮಾಚಲ ಪ್ರದೇಶಕ್ಕೆ ಹೋಗದಂತೆ ತಡೆಯಲು ಬಂಧಿಸಲಾಗಿದೆ. ಇದು ಬಿಜೆಪಿಯ ಪಿತೂರಿ ಕೆಲವೇ ದಿನಗಳಲ್ಲಿ ಅವರನ್ನು ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.