ನವದೆಹಲಿ: ದೆಹಲಿ ಅಬಕಾರಿ ಹಗರಣಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜೈಲು ಸೇರಿರುವ ಆಮ್ ಆದ್ಮಿ ಪಕ್ಷದ ಸಂಸದ ಸಂಜಯ್ ಸಿಂಗ್ ಅವರಿಗೆಯಾವುದೇ ಪರಿಹಾರ ಸಿಗುವಂತೆ ಕಾಣುತ್ತಿಲ್ಲ. ದೆಹಲಿ ಹೈಕೋರ್ಟ್ (Delhi High Court) ಅವರ ಜಾಮೀನು ಅರ್ಜಿಯನ್ನು ಇಂದು ತಿರಸ್ಕರಿಸಿದೆ.
ದೆಹಲಿ ಮದ್ಯ ಹಗರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಭಾಗಿಯಾಗಿದ್ದಕ್ಕಾಗಿ ಸಂಜಯ್ ಸಿಂಗ್ (Sanjay Singh) ಅವರನ್ನು 2023 ರ ಅಕ್ಟೋಬರ್ 4 ರಂದು ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಬಂಧಿಸಿದ್ದರು. ಜನವರಿ 31 ರಂದು ಮದ್ಯದ ಹಗರಣ ಪ್ರಕರಣದಲ್ಲಿ ಸಂಜಯ್ ಸಿಂಗ್ ಪರವಾಗಿ ಹಿರಿಯ ವಕೀಲ ಮೋಹಿತ್ ಮಾಥುರ್ ನ್ಯಾಯಾಲಯಕ್ಕೆ ಹಾಜರಾಗಿದ್ದರು.
Advertisement
Advertisement
ಈ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌ವಿ ರಾಜು ಅವರು ವಾದ ಮಂಡಿಸಿದರು. ಜನವರಿ 31 ರಂದು ನ್ಯಾಯಾಲಯ ತನ್ನ ತೀರ್ಪನ್ನು ಕಾಯ್ದಿರಿಸಿತ್ತು. ಇಂದು ನ್ಯಾಯಾಲಯ ಜಾಮೀನು ಅರ್ಜಿ ತಿರಸ್ಕರಿಸಿದೆ. ಇದನ್ನೂ ಓದಿ: ಇಡಿ ಅಧಿಕಾರಿಗಳ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್ ತಡೆ
Advertisement
ಆರೋಪಗಳೇನು?: ಮದ್ಯದ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸಂಜಯ್ ಸಿಂಗ್ ಅವರನ್ನು ಬಂಧಿಸಲಾಗಿದೆ. ಸಂಜಯ್ ಸಿಂಗ್ ಅವರು ಕೆಲವು ಮಧ್ಯ ಉತ್ಪಾದಕರು, ಸಗಟು ವ್ಯಾಪಾರಿಗಳು ಸೇರಿದಂತೆ ಹಲವು ವಹಿವಾಟುಗಳಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಇಡಿ ವಕೀಲರು ನ್ಯಾಯಾಲಯಕ್ಕೆ ತಿಳಿಸಿದ್ದರು.