ನವದೆಹಲಿ: ವಿರೋಧ ಪಕ್ಷಗಳ ಒಕ್ಕೂಟಕ್ಕೆ ಇಂಡಿಯಾ (INDIA) ಎಂದು ನಾಮಕರಣ ಮಾಡಿದ ನಿರ್ಧಾರವನ್ನು ಪ್ರಶ್ನಿಸಿ ದೆಹಲಿ ಹೈಕೋರ್ಟ್‍ಗೆ (Delhi Highcourt) ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದೆ. ಗಿರೀಶ್ ಭಾರದ್ವಾಜ್ ಎಂಬವರು ಈ ಅರ್ಜಿ ಸಲ್ಲಿಸಿದ್ದು, ಇಂಡಿಯಾ ಪದ ಬಳಕೆ ಮಾಡದಂತೆ ಸೂಚಿಸಲು ಮನವಿ ಮಾಡಿದ್ದಾರೆ.
Advertisement
ಪ್ರಕರಣದ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ಮತ್ತು ನ್ಯಾಯಮೂರ್ತಿ ಸಂಜೀವ್ ನರುಲಾ ಅವರ ವಿಭಾಗೀಯ ಪೀಠ 26 ವಿರೋಧ ಪಕ್ಷಗಳು, ಕೇಂದ್ರ ಸರ್ಕಾರ ಮತ್ತು ಕೇಂದ್ರ ಚುನಾವಣಾ ಆಯೋಗಕ್ಕೆ (Central Election Commission) ನೋಟಿಸ್ ನೀಡಿ ಅಕ್ಟೋಬರ್ 31 ರಂದು ವಿಚಾರಣೆ ಮುಂದೂಡಿತು. ಇದನ್ನೂ ಓದಿ: ರಾಹುಲ್ ಗಾಂಧಿಗೆ ಬಿಗ್ ರಿಲೀಫ್ – ಸೂರತ್ ನ್ಯಾಯಾಲಯ ಆದೇಶಕ್ಕೆ ಸುಪ್ರೀಂ ಕೋರ್ಟ್ ಮಧ್ಯಂತರ ತಡೆ
Advertisement
Advertisement
ಅರ್ಜಿದಾರರ ಪರ ಹಿರಿಯ ವಕೀಲ ಅರುಣಾ ಶ್ಯಾಮ್ ವಾದ ಮಂಡಿಸಿ, ವಿಪಕ್ಷಗಳು ತಮ್ಮ ಸ್ವಾರ್ಥಕ್ಕಾಗಿ ಭಾರತದ (India) ಹೆಸರನ್ನು ಬಳಸುತ್ತಿವೆ. ಇದು 2024 ರ ಮುಂಬರುವ ಸಾರ್ವತ್ರಿಕ ಚುನಾವಣೆಗಳಲ್ಲಿ ಶಾಂತಿಯುತ, ಪಾರದರ್ಶಕ ಮತ್ತು ನ್ಯಾಯಯುತ ಮತದಾನದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು. ನಾಗರಿಕರನ್ನು ಅನಗತ್ಯ ಹಿಂಸಾಚಾರಕ್ಕೆ ಒಡ್ಡಬಹುದು ಮತ್ತು ದೇಶದ ಕಾನೂನು ಮತ್ತು ಸುವ್ಯವಸ್ಥೆಯ ಹದಗೆಡಲು ಕಾರಣವಾಗಬಹುದು.
Advertisement
1950ರ ಲಾಂಛನಗಳು ಮತ್ತು ಹೆಸರುಗಳು (ಅನುಚಿತ ಬಳಕೆ ತಡೆಗಟ್ಟುವಿಕೆ) ಕಾಯಿದೆಯ ಸೆಕ್ಷನ್ 2 ಮತ್ತು 3 ರ ಅಡಿಯಲ್ಲಿ ಭಾರತ ಎಂಬ ಹೆಸರನ್ನು ಬಳಸುವುದನ್ನು ನಿಷೇಧಿಸಲಾಗಿದೆ. ಈ ಹಿನ್ನೆಲೆ ವಿರೋಧ ಪಕ್ಷಗಳು ಭಾರತೀಯ ಧ್ವಜ ಮತ್ತು ಇಂಡಿಯಾ ಪದ ಬಳಕೆ ಮಾಡದಂತೆ ತಡೆಯಲು ನ್ಯಾಯಾಲಯಕ್ಕೆ ಮನವಿ ಮಾಡಿದರು.
ಹೆಚ್ಚುವರಿ ಸಾಲಿಸಿಟರ್ ಜನರಲ್ ಚೇತನ್ ಶರ್ಮಾ ಅವರು ಕೇಂದ್ರ ಸರ್ಕಾರದ ಪರವಾಗಿ ಹಾಜರಾಗಿ ವಿಚಾರಣೆಗೆ ಸಮಯ ನೀಡುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದರು. ಈ ಹಿನ್ನೆಲೆ ಕೋರ್ಟ್ ವಿಚಾರಣೆಯನ್ನು ಮುಂದೂಡಿತು.
Web Stories