ನವದೆಹಲಿ: ಸೈನಿಕರಿಗೆ ಅಂಗವೈಕಲ್ಯ ಪಿಂಚಣಿ (Disability Pension) ನೀಡುವುದನ್ನು ಪ್ರಶ್ನಿಸಿ ರಕ್ಷಣಾ ಸಚಿವಾಲಯ ಸಲ್ಲಿಸಿದ್ದ ಸುಮಾರು 300 ಅರ್ಜಿಗಳನ್ನು ದೆಹಲಿ ಹೈಕೋರ್ಟ್ (Delhi High Court) ಇತ್ತೀಚೆಗೆ ವಜಾಗೊಳಿಸಿದೆ. ಸಶಸ್ತ್ರ ಪಡೆಗಳ ನ್ಯಾಯಮಂಡಳಿ ಹೊರಡಿಸಿದ್ದ ಆದೇಶದ ವಿರುದ್ಧ ಕೇಂದ್ರ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿದ ನ್ಯಾ. ನವೀನ್ ಚಾವ್ಲಾ ಮತ್ತು ಶಾಲಿಂದರ್ ಕೌರ್ ಅವರಿದ್ದ ವಿಭಾಗೀಯ ಪೀಠವು ಸಶಸ್ತ್ರ ಪಡೆಗಳ ಸಿಬ್ಬಂದಿ ಅಂಗವೈಕಲ್ಯ ಪಿಂಚಣಿಗೆ ಅರ್ಹರು ಎಂದಿದೆ.
ಸಶಸ್ತ್ರ ಪಡೆಗಳ ಸಿಬ್ಬಂದಿಗೆ ಅಂಗವೈಕಲ್ಯ ಪಿಂಚಣಿ ನೀಡುವುದು ಔದಾರ್ಯಕ್ಕಲ್ಲ, ಬದಲಿಗೆ ರಾಷ್ಟ್ರಕ್ಕಾಗಿ ಅವರು ಮಾಡಿದ ತ್ಯಾಗಕ್ಕೆ ಸಲ್ಲಿಸಬೇಕಾದ ಗೌರವ ಎಂದು ನ್ಯಾಯಾಲಯ ಬುದ್ಧಿವಾದ ಹೇಳಿದೆ. ಇದನ್ನೂ ಓದಿ: ಅರ್ಜೆಂಟೀನಾದಲ್ಲಿ ಪ್ರಧಾನಿ ಮೋದಿಗೆ ಹಲೋ ಹೇಳಲು 400 ಕಿಮೀ ಪ್ರಯಾಣಿಸಿದ ಭಾರತೀಯ
ಇಂತಹ ಪಿಂಚಣಿಯಿಂದ ಸೇವೆಯ ಕಾರಣಕ್ಕೆ ಅಂಗವೈಕಲ್ಯಕ್ಕೆ ತುತ್ತಾದ ಯೋಧನಿಗೆ ನೆರವು, ಆರ್ಥಿಕ ಭದ್ರತೆ ಹಾಗೂ ಘನತೆಯಿಂದ ಬದುಕಲು ಸಾಧ್ಯವಾಗುತ್ತದೆ. ಇದು ಧೈರ್ಯ ಮತ್ತು ಶ್ರದ್ಧೆಯಿಂದ ದೇಶಕ್ಕಾಗಿ ದುಡಿದ ಸೈನಿಕರೆಡೆಗೆ ಪ್ರಭುತ್ವ ನಿರ್ವಹಿಸಬೇಕಾದ ಜವಾಬ್ದಾರಿಯುತ ಕ್ರಮ ಎಂದು ತಿಳಿಸಿದೆ. ಇದನ್ನೂ ಓದಿ: ಫಾರ್ಮ್ ಹೌಸ್‌ನಲ್ಲಿ ಚಾಮುಂಡಿ ಪೂಜೆ ನೆರವೇರಿಸಿದ ದರ್ಶನ್
ಅಂಗವೈಕಲ್ಯಕ್ಕೆ ತುತ್ತಾದ ಸೇನಾ ಸಿಬ್ಬಂದಿಯು ಸಂಘರ್ಷ ರಹಿತ ಪ್ರದೇಶದಲ್ಲಿ ಕರ್ತವ್ಯದಲ್ಲಿದ್ದರು ಎಂಬ ಒಂದೇ ಕಾರಣಕ್ಕೆ ಅವರಿಗೆ ಅಂಗವೈಕಲ್ಯ ಪಿಂಚಣಿ ನಿರಾಕರಿಸುವಂತಿಲ್ಲ. ಅತ್ಯಂತ ಕಠಿಣ ಹವಾಮಾನ ಮತ್ತು ಪರಿಸ್ಥಿತಿಗಳಲ್ಲಿ ಕರ್ತವ್ಯ ನಿರ್ವಹಿಸುವ ಸೈನಿಕರಲ್ಲಿ ಕಾಣಿಸಿಕೊಂಡ ಮಧುಮೇಹ ಮತ್ತು ಅಧಿಕ ರಕ್ತದೊತ್ತಡದಂತಹ ನ್ಯೂನತೆಗಳು ಸೇನಾ ಸೇವೆಯಿಂದ ಬಂದಿಲ್ಲ ಎಂದು ಸಾಬೀತುಪಡಿಸುವ ಜವಾಬ್ದಾರಿ ವೈದ್ಯಕೀಯ ಮಂಡಳಿಯ (RMB) ಮೇಲಿದೆ ಎಂದು ಹೇಳಿದೆ. ಇದನ್ನೂ ಓದಿ: ಕೊಡವ ಕಮ್ಯೂನಿಟಿಯಿಂದ ಇಂಡಸ್ಟ್ರಿಗೆ ಬಂದಿದ್ದು ನಾನೇ ಫಸ್ಟ್ – ರಶ್ಮಿಕಾ ಮತ್ತೊಂದು ಯಡವಟ್ಟು
ಸೇನಾ ಸಿಬ್ಬಂದಿಯ ನಿಯೋಜನೆಯ ಸ್ಥಳವನ್ನು ಆಧರಿಸಿ ಅವರ ಹಕ್ಕನ್ನು ಸಂಪೂರ್ಣವಾಗಿ ತಿರಸ್ಕರಿಸುವಂತಿಲ್ಲ ಎಂದ ನ್ಯಾಯಾಲಯ, ಕೇಂದ್ರ ಸರ್ಕಾರ ಸಲ್ಲಿಸಿದ್ದ ಅರ್ಜಿಗಳನ್ನು ವಜಾಗೊಳಿಸಿತು. ಇದನ್ನೂ ಓದಿ: ಅಮರನಾಥ ಯಾತ್ರೆಗೆ ತೆರಳುತ್ತಿದ್ದ 5 ಬಸ್‌ಗಳ ನಡುವೆ ಸರಣಿ ಅಪಘಾತ – 30ಕ್ಕೂ ಹೆಚ್ಚು ಮಂದಿಗೆ ಗಾಯ
ಸೇನೆಗೆ ಸಲ್ಲಿಸಿದ ಸೇವೆಯಿಂದಾಗಿ ಅರ್ಜಿದಾರ ಸೈನಿಕರಿಗೆ ಅಂಗವೈಕಲ್ಯ ಉಂಟಾಗಿಲ್ಲ. ಅವರು ಅಂಗವೈಕಲ್ಯ ಪಿಂಚಣಿಗೆ ಅರ್ಹರಲ್ಲ ಎಂದು ರಕ್ಷಣಾ ಸಚಿವಾಲಯ ನ್ಯಾಯಾಲಯದ ಮೆಟ್ಟಿಲೇರಿತ್ತು. ಕೇಂದ್ರ ಸರ್ಕಾರದ ಅತ್ಯುನ್ನತ ಕಾನೂನು ಅಧಿಕಾರಿ ಅಟಾರ್ನಿ ಜನರಲ್ ಆರ್ ವೆಂಟಕರಮಣಿ ಸಚಿವಾಲಯದ ಪರವಾಗಿ ವಾದ ಮಂಡಿಸಿದ್ದರು.