ನವದೆಹಲಿ: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (PFI) ಮತ್ತು ಅದರ ಅಂಗಸಂಸ್ಥೆಗಳ ಮೇಲೆ ವಿಧಿಸಲಾಗಿರುವ ನಿಷೇಧವನ್ನು ಪರಿಶೀಲಿಸುವ ಕಾನೂನುಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ (UAPA) ನ್ಯಾಯಮಂಡಳಿಯ ಅಧ್ಯಕ್ಷರಾಗಿ ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ದಿನೇಶ್ ಕುಮಾರ್ ಶರ್ಮಾ ಅವರನ್ನು ಕೇಂದ್ರ ಸರ್ಕಾರ ನೇಮಿಸಿದೆ.
ಈಗ PFI ತನ್ನ ವಾದವನ್ನು ನ್ಯಾಯಮಂಡಳಿಯ ಮುಂದೆ ಮಂಡಿಸಲು ಅವಕಾಶ ಹೊಂದಿರುತ್ತದೆ. ಸರ್ಕಾರದ ನಿರ್ಧಾರವನ್ನು ಇಲ್ಲಿ PFI ಪ್ರಶ್ನೆ ಮಾಡಬಹುದಾಗಿದೆ. ವಿಚಾರಣೆ ಬಳಿಕ ನ್ಯಾಯ ಮಂಡಳಿ, ಸರ್ಕಾರದ ನಿಲುವಿನ ಬಗ್ಗೆ ತನ್ನ ತೀರ್ಪು ನೀಡಲಿದೆ. ಇದನ್ನೂ ಓದಿ: 873 ಪೊಲೀಸ್ ಅಧಿಕಾರಿಗಳಿಗೆ PFI ಜೊತೆ ನಂಟು: NIA
Advertisement
Advertisement
ಕೇಂದ್ರ ಸರ್ಕಾರ ಸೆಪ್ಟೆಂಬರ್ 28 ರಂದು ಯುಎಪಿಎ ಸೆಕ್ಷನ್ 3 ರ ಅಡಿಯಲ್ಲಿ ಪಿಎಫ್‌ಐ ಕಾನೂನುಬಾಹಿರ ಎಂದು ಘೋಷಿಸಿತು. ಐದು ವರ್ಷಗಳ ಕಾಲ ಅದರ ಮೇಲೆ ನಿಷೇಧ ಹೇರಿತು. ಸಂಘಟನೆಯು ದೇಶದ ಸಮಗ್ರತೆ, ಸಾರ್ವಭೌಮತೆ ಮತ್ತು ಭದ್ರತೆಗೆ ಹಾನಿಯುಂಟು ಮಾಡುವ ‘ಕಾನೂನುಬಾಹಿರ ಚಟುವಟಿಕೆʼಗಳಲ್ಲಿ ತೊಡಗಿಸಿಕೊಂಡಿದೆ ಎಂದು ಆರೋಪಿಸಲಾಗಿದೆ.
Advertisement
Advertisement
ಕಾಯಿದೆಯ ಸೆಕ್ಷನ್ 4 ರ ಅಡಿಯಲ್ಲಿ ಮಾಡಿದ ಆದೇಶವನ್ನು UAPA ನ್ಯಾಯಮಂಡಳಿಯು ದೃಢೀಕರಿಸದ ಹೊರತು ಅಂತಹ ಯಾವುದೇ ನಿಷೇಧವು ಜಾರಿಗೆ ಬರುವುದಿಲ್ಲ. ಈ ಹಿನ್ನೆಲೆ ಸರ್ಕಾರ ನ್ಯಾಯಮಂಡಳಿಯನ್ನು ರಚಿಸಿದೆ. ಈ ನ್ಯಾಯಮಂಡಳಿ ಪ್ರಕರಣದ ವಿಚಾರಣೆ ನಡೆಸಿ ಬಳಿಕ ಸರ್ಕಾರದ ನಿರ್ಧಾರದ ಬಗ್ಗೆ ತೀರ್ಪು ನೀಡಲಿದೆ. ಇದನ್ನೂ ಓದಿ: PFI ಜೊತೆ SDPIಗೆ ಯಾವುದೇ ಸಂಬಂಧವಿಲ್ಲ – ಚುನಾವಣಾ ಆಯೋಗ ಸ್ಪಷ್ಟನೆ