ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ (Manish Sisodia) ಅವರಿಗೆ ಜಾಮೀನು ನೀಡಲು ದೆಹಲಿ ಹೈಕೋರ್ಟ್ (Delhi High Court) ನಿರಾಕರಿಸಿದೆ. ಸುದೀರ್ಘ ವಿಚಾರಣೆ ಬಳಿಕ ಇಂದು ತೀರ್ಪು ಪ್ರಕಟಿಸಿದ ಹೈಕೋರ್ಟ್ ಸಾಕ್ಷ್ಯಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಹಿನ್ನಲೆ ಜಾಮೀನು (Bail) ನೀಡಲು ಸಾಧ್ಯವಿಲ್ಲ ಎಂದು ಹೇಳಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಮನೀಶ್ ಸಿಸೋಡಿಯಾ ಅವರನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಜಾಮೀನು ನೀಡುವಂತೆ ಕೋರಿ ಮನೀಶ್ ಸಿಸೋಡಿಯಾ ದೆಹಲಿ ಹೈಕೋರ್ಟ್‌ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಇದನ್ನೂ ಓದಿ: ಮಹಾರಾಷ್ಟ್ರದ ಜನರು ಪ್ರಜಾಪ್ರಭುತ್ವ ವಿರೋಧಿ ಶಕ್ತಿಗಳಿಗೆ ಬಲಿಯಾಗುವುದಿಲ್ಲ: ಶರದ್ ಪವಾರ್
Advertisement
Advertisement
Advertisement
ಮನೀಶ್ ಸಿಸೋಡಿಯಾ, ರಾಜಕೀಯ ಸ್ಥಾನಮಾನಗಳು ಹೊಂದಿರುವ ಕಾರಣದಿಂದ ಸಾಕ್ಷಿಗಳನ್ನು ತಿರುಚುವ ಅಥವಾ ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆಯನ್ನು ತಳ್ಳಿಹಾಕಲು ಸಾಧ್ಯವಿಲ್ಲ. ಸಾಕ್ಷ್ಯಗಳ ನಾಶವಾಗದಂತೆ ಕಾಪಾಡಬೇಕಾದ ಹಿನ್ನೆಲೆ ರಾಜಕೀಯ ಹಸ್ತಕ್ಷೇಪದಿಂದ ಉಳಿಸಿಕೊಳ್ಳಲು ಜಾಮೀನು ನಿರಾಕರಿಸಿದೆ ಎಂದು ಕೋರ್ಟ್ ಹೇಳಿದೆ. ಇದನ್ನೂ ಓದಿ: ಬೆಂಗ್ಳೂರಲ್ಲಿ ವಿಪಕ್ಷಗಳ ನಾಯಕರ ಸಭೆ – ಮತ್ತೆ ದಿನಾಂಕ ಮುಂದೂಡಿಕೆ
Advertisement
ಇದೇ ಪ್ರಕರಣದಲ್ಲಿ ಆಮ್ ಆದ್ಮಿ ಪಕ್ಷದ ಮಾಜಿ ಸಂವಹನ ಉಸ್ತುವಾರಿ ವಿಜಯ್ ನಾಯರ್, ಹೈದರಾಬಾದ್ ಮೂಲದ ಉದ್ಯಮಿ ಅಭಿಷೇಕ್ ಬೋನಪಲ್ಲಿ, ಮದ್ಯ ಕಂಪನಿ ಎಂ/ಎಸ್ ಪೆರ್ನೋಡ್ ರಿಕಾರ್ಡ್ ಮ್ಯಾನೇಜರ್ ಬಿನೋಯ್ ಬಾಬು ಬಿನೋಯ್ ಜಾಮೀನು ಅರ್ಜಿಯ ಮೇಲೂ ನ್ಯಾಯಾಲಯ ಆದೇಶ ನೀಡಿದೆ. ಮೇ 6 ರಂದು ಇಡಿ ಹೆಚ್ಚುವರಿ ಚಾರ್ಜ್‌ಶೀಟ್ ಸಲ್ಲಿಸಿದೆ. ಮೊದಲ ಬಾರಿಗೆ ಮನೀಶ್ ಸಿಸೋಡಿಯಾ ಹೆಸರನ್ನು ಇಲ್ಲಿ ಉಲ್ಲೇಖಿಸಿದ್ದು ಆರೋಪಿ ಎಂದು ಹೆಸರಿಸಿದೆ. ಈ ಆದೇಶವನ್ನು ಪ್ರಶ್ನಿಸಿ ಅವರು ಸುಪ್ರೀಂಕೋರ್ಟ್ ಮೆಟ್ಟಿಲೇರುವ ಸಾಧ್ಯತೆಗಳಿವೆ. ಇದನ್ನೂ ಓದಿ: ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರ- ವಿಸ್ತೃತ ವರದಿ ಕೇಳಿದ ಸುಪ್ರೀಂ ಕೋರ್ಟ್
Web Stories