ಹೊಸದಿಲ್ಲಿ: ಅತ್ಯಾಚಾರ ಆರೋಪದಡಿ ಮಹಿಳೆಯೊಬ್ಬರ ದೂರಿನ ಮೇರೆಗೆ ಎಫ್‌ಐಆರ್ ದಾಖಲಿಸುವಂತೆ ದಿಲ್ಲಿ ಪೊಲೀಸರಿಗೆ ಸೂಚಿಸಿರುವ ವಿಚಾರಣಾ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಬಿಜೆಪಿ ನಾಯಕ ಶಾನವಾಜ್ ಹುಸೇನ್ ಸಲ್ಲಿಸಿದ್ದ ಅರ್ಜಿಯನ್ನು ದಿಲ್ಲಿ ಹೈಕೋರ್ಟ್ ವಜಾಗೊಳಿಸಿದೆ.
ನ್ಯಾಯಮೂರ್ತಿ ಆಶಾ ಮೆನನ್ ಅವರು, ಎಫ್‌ಐಆರ್ ದಾಖಲಿಸಲು ನಿರ್ದೇಶಿಸುವ ವಿಚಾರಣಾ ನ್ಯಾಯಾಲಯದ ಆದೇಶದಲ್ಲಿ ಯಾವುದೇ ಲೋಪವಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ಎಕೆ 47 ಪತ್ತೆಯಾದ ದೋಣಿ ಆಸ್ಟ್ರೇಲಿಯಾ ಪ್ರಜೆಗೆ ಸೇರಿದೆ: ಫಡ್ನವೀಸ್
Advertisement
Advertisement
ಸಲ್ಲಿಕೆಯಾಗಿರುವ ಅರ್ಜಿಯಲ್ಲಿ ಒಪ್ಪುವಂತಹ ಅಂಶಗಳಿಲ್ಲ. ಹೀಗಾಗಿ ಅರ್ಜಿಯನ್ನು ವಜಾಗೊಳಿಸಲಾಗಿದೆ. ಮಧ್ಯಂತರ ಆದೇಶಗಳು ತೆರವುಗೊಂಡಿವೆ. ಎಫ್‌ಐಆರ್ ಅನ್ನು ತಕ್ಷಣವೇ ದಾಖಲಿಸಬೇಕು. ತನಿಖೆಯನ್ನು ಪೂರ್ಣಗೊಳಿಸಿ ಮತ್ತು ಸೆಕ್ಷನ್ 173 ಸಿಆರ್‌ಪಿಸಿ ಅಡಿಯಲ್ಲಿ ವಿವರವಾದ ವರದಿಯನ್ನು ಮೂರು ತಿಂಗಳೊಳಗೆ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಮುಂದೆ ಸಲ್ಲಿಸಬೇಕು ಎಂದು ನ್ಯಾಯಾಲಯವು ಬುಧವಾರ ತನ್ನ ಆದೇಶದಲ್ಲಿ ತಿಳಿಸಿದೆ.
Advertisement
ಪೊಲೀಸರು ಇನ್ನೂ ಕೂಡ ಎಫ್‌ಐಆರ್ ದಾಖಲಿಸದೇ ಇರುವುದಕ್ಕೆ ಕಿಡಿಕಾರಿರುವ ಹೈಕೋರ್ಟ್, ಈ ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಲು ಪೊಲೀಸರು ನಿರಾಸಕ್ತಿ ಹೊಂದಿರುವಂತೆ ತೋರುತ್ತದೆ. ತನಿಖೆಯ ನಂತರವೇ ಪೊಲೀಸರು ಅಪರಾಧ ಎಸಗಿದ್ದಾರೆಯೇ ಅಥವಾ ಇಲ್ಲವೇ ಎಂಬುದು ತಿಳಿದು ಬರಲಿದೆ ಎಂದಿದೆ. ಇದನ್ನೂ ಓದಿ: ಏಕರೂಪದ ಚಾರ್ಜರ್ ಜಾರಿಗೆ ತಜ್ಞರ ಸಮಿತಿ ರಚನೆಗೆ ಮುಂದಾದ ಕೇಂದ್ರ : ಸಭೆಯಲ್ಲಿ ಏನಾಯ್ತು?
Advertisement
2018ರಲ್ಲಿ ದೆಹಲಿ ಮೂಲದ ಮಹಿಳೆಯೊಬ್ಬರು, ಶಹನವಾಜ್ ಹುಸೇನ್ ವಿರುದ್ಧ ಅತ್ಯಾಚಾರ ಆರೋಪ ಹೊರಿಸಿ ಎಫ್‌ಐಆರ್ ದಾಖಲಿಸಲು ಕೋರಿ ಕೆಳ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಜುಲೈ 7, 2018 ರಂದು ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಬಿಜೆಪಿ ನಾಯಕನ ವಿರುದ್ಧ ಎಫ್‌ಐಆರ್ ದಾಖಲಿಸಲು ಆದೇಶಿಸಿತ್ತು. ಇದನ್ನು ಪ್ರಶ್ನಿಸಿ ಬಿಜೆಪಿ ನಾಯಕ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಲಾಗಿದೆ.