ನವದೆಹಲಿ: ಖ್ಯಾತ ಉದ್ಯಮಿ ರತನ್ ಟಾಟಾ ಅವರಿಗೆ ಭಾರತ ರತ್ನ ನೀಡಲು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾ ಮಾಡಿದೆ.
ಒಬ್ಬ ವ್ಯಕ್ತಿಗೆ ಅತ್ಯುನ್ನತ ನಾಗರಿಕ ಗೌರವ ನೀಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡುವುದು ನ್ಯಾಯಾಲಯಕ್ಕೆ ಸಂಬಂಧಿಸಿದ್ದಲ್ಲ ಎಂದು ಹಂಗಾಮಿ ಮುಖ್ಯ ನ್ಯಾಯಮೂರ್ತಿ ವಿಪಿನ್ ಸಂಘಿ ನೇತೃತ್ವದ ಪೀಠ ಸ್ಪಷ್ಟಪಡಿಸಿದೆ. ಇದನ್ನೂ ಓದಿ: ಏನಿದು ಸಶಸ್ತ್ರ ಪಡೆಗಳ ವಿಶೇಷ ಕಾಯ್ದೆ? ಸೈನಿಕರಿಗೆ ಇರೋ ಅಧಿಕಾರ ಏನು? ವಿರೋಧ ಯಾಕೆ?
Advertisement
Advertisement
ಇದು ಯಾವ ರೀತಿಯ ಮನವಿ? ಭಾರತ ರತ್ನ ನೀಡುವಂತೆ ಸರ್ಕಾರಕ್ಕೆ ಕೋರ್ಟ್ ನಿರ್ದೇಶನ ನೀಡಲು ಸಾಧ್ಯವೆ ಎಂದು ಪೀಠ ಪ್ರಶ್ನಿಸಿದೆ.
Advertisement
ಅರ್ಜಿದಾರರ ಪರ ವಕೀಲರು, ಕನಿಷ್ಠ ಪಕ್ಷ ಸರ್ಕಾರಕ್ಕೆ ಮನವಿ ಮಾಡಬಹುದು ಎಂದು ವಾದಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ವಿಪಿನ್ ಸಂಘಿ, ಹೋಗಿ ವಿನಂತಿಯನ್ನು ಮಾಡಿ. ನ್ಯಾಯಾಲಯದ ಮೆಟ್ಟಿಲೇರುವ ಪ್ರಶ್ನೆ ಎಲ್ಲಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಅವಿವಾಹಿತ ಮಗಳು ಪೋಷಕರಿಂದಲೇ ವಿವಾಹದ ವೆಚ್ಚ ಪಡೆಯಬಹುದು: ಹೈಕೋರ್ಟ್
Advertisement
ನ್ಯಾಯಾಲಯವು ಅರ್ಜಿಯನ್ನು ವಜಾಗೊಳಿಸುವುದಾಗಿ ಹೇಳಿದ ನಂತರ ಅರ್ಜಿದಾರರ ಪರ ವಕೀಲರು ಅರ್ಜಿಯನ್ನು ಹಿಂತೆಗೆದುಕೊಂಡರು.
ಅರ್ಜಿದಾರರಾದ ಸಾಮಾಜಿಕ ಕಾರ್ಯಕರ್ತ ರಾಕೇಶ್, ರತನ್ ಟಾಟಾ ಅವರು ರಾಷ್ಟ್ರಕ್ಕೆ ಸೇವೆ ಸಲ್ಲಿಸುತ್ತಿದ್ದಾರೆ. ನಿಷ್ಕಳಂಕ ಜೀವನವನ್ನು ಹೊಂದಿರುವುದರಿಂದ ಭಾರತ ರತ್ನಕ್ಕೆ ಅರ್ಹರು ಎಂದು ಅರ್ಜಿಯಲ್ಲಿ ಉಲ್ಲೇಖಿಸಿದ್ದರು. ಇದನ್ನೂ ಓದಿ: ಪಾಕ್ ಪರ ಘೋಷಣೆ ಕೂಗಿದ್ದ ಕಾಶ್ಮೀರ ವಿದ್ಯಾರ್ಥಿಗಳಿಗೆ ಅಲಹಾಬಾದ್ ಹೈಕೋರ್ಟ್ ಜಾಮೀನು