ಹುಬ್ಬಳ್ಳಿ: ಬಿಜೆಪಿ (BJP) ರಾಜ್ಯಾಧ್ಯಕ್ಷ (State President) ಸ್ಥಾನಕ್ಕೆ ಬರೀ ಹೆಸರು ಕೇಳಿ ಬರುವುದೇ ಆಯಿತು. ಯಾರು ಅಧ್ಯಕ್ಷರು ಎಂದು ಬಹಿರಂಗವಾಗಿ ಹೇಳಲಿ. ದೆಹಲಿ ವರಿಷ್ಠರು ಒಂದು ಹೆಸರು ಬಿಟ್ಟು ಪ್ಲಸ್ ಮೈನಸ್ ನೋಡಿ ಅದು ಫೇಲ್ ಆಯಿತು ಅಂದರೆ ಮತ್ತೆ ಬೇರೆ ಹೆಸರು ಬಿಡುತ್ತಾರೆ. ರಾಜ್ಯಾಧ್ಯಕ್ಷ ಆಯ್ಕೆಯಲ್ಲಿ ಪ್ರಯೋಗ ಮಾಡುತ್ತಿದ್ದಾರೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ (Jagadish Shettar) ವ್ಯಂಗ್ಯವಾಡಿದ್ದಾರೆ.
ಈ ಬಗ್ಗೆ ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಶೋಭಾ ಕರಂದ್ಲಾಜೆ ಅವರು ಅಧ್ಯಕ್ಷ ಸ್ಥಾನದ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ, ಇದು ಊಹಾಪೋಹ ಎಂದು ಹೇಳಿದ್ದಾರೆ. ಇದನ್ನು ಹೇಗೆ ಅಧಿಕೃತ ಎಂದು ಹೆಳುತ್ತೀರಿ. ಇದಕ್ಕೆ ಯಾವುದೇ ಅರ್ಥ ಇಲ್ಲ. ಒಂದು ರಾಷ್ಟ್ರೀಯ ಪಕ್ಷದ ಸೋಲು ಆಗಬೇಕು ಎನ್ನುವ ಉದಾಹರಣೆ ಇದ್ದರೆ ಇದಕ್ಕೆ ರಾಜ್ಯ ಬಿಜೆಪಿ ಪರಿಸ್ಥಿತಿಯೇ ಸಾಕ್ಷಿ ಎಂದರು. ಇದನ್ನೂ ಓದಿ: ಸದ್ದಿಲ್ಲದೇ ನಡೆಯುತ್ತಿದೆ ಮಲಪ್ರಭಾ ನದಿ ಪ್ರದೇಶ ಒತ್ತುವರಿ ಕಾರ್ಯ – ಕಣ್ಮುಚ್ಚಿ ಕುಳಿತಿದೆ ಜಿಲ್ಲಾಡಳಿತ
ರಾಜ್ಯಾಧ್ಯಕ್ಷರನ್ನು, ವಿಪಕ್ಷ ನಾಯಕರನ್ನು ಆಯ್ಕೆ ಮಾಡದ ಶೋಚನೀಯ ಪರಿಸ್ಥಿತಿ ಬಿಜೆಪಿಗೆ ಬಂದಿದೆ. ಇದನ್ನು ಜನ ಅರ್ಥ ಮಾಡಿಕೊಳ್ಳಬೇಕೆಂದಿದ್ದಾರೆ. ಸಂಕ್ರಾಂತಿ ನಂತರ ರಾಜ್ಯ ರಾಜಕೀಯದಲ್ಲಿ ಅಲ್ಲೋಲಕಲ್ಲೋಲ ಆಗುತ್ತದೆ ಎಂದು ಬಿಜೆಪಿ ನಾಯಕರು ಹೇಳುತ್ತಿದ್ದಾರೆ. ಆದರೆ ಕಾಂಗ್ರೆಸ್ ಸರ್ಕಾರಕ್ಕೆ ಏನು ಆಗೋದಿಲ್ಲ. ಕಾಂಗ್ರೆಸ್ ಸರ್ಕಾರ ಗಟ್ಟಿಮುಟ್ಟಾಗಿ ಐದು ವರ್ಷ ಇರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ಓದಿ: 2022ರಲ್ಲೇ ಹುಲಿ ಚರ್ಮ ಹಿಂದಿರುಗಿಸಲಾಗಿದೆ- ವಿನಯ್ ಗುರೂಜಿ ಆಶ್ರಮದಿಂದ ಸ್ಪಷ್ಟನೆ
104 ಸೀಟು ಇದ್ದಾಗಾಲೇ ಏನು ಮಾಡಲು ಆಗಿಲ್ಲ. ಈಗ ಏನು ಮಾಡಲು ಸಾಧ್ಯ? ಆದರೆ ಸಂಕ್ರಾಂತಿ ನಂತರ ಅಲ್ಲೋಲ ಕಲ್ಲೋಲ ಆಗುತ್ತದೆ ಎಂದು ಆಶಾಭಾವನೆ ಮೂಡಿಸಿ ಕಾರ್ಯಕರ್ತರನ್ನು ಪಕ್ಷ ಬಿಟ್ಟು ಹೋಗುತ್ತಿರುವ ನಾಯಕರನ್ನು ಹಿಡಿದಿಟ್ಟುಕೊಳ್ಳುವ ಪ್ರಯತ್ನ ಬಿಜೆಪಿ ಮಾಡುತ್ತಿದೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಸರ್ಕಾರದ ಹಣ ತಿಂದಿಲ್ಲವೆಂದು ಹೆಚ್‍ಡಿಕೆ ಧರ್ಮಸ್ಥಳಕ್ಕೆ ಬಂದು ಪ್ರಮಾಣ ಮಾಡ್ಲಿ: ಬಾಲಕೃಷ್ಣ
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]