LatestMain PostNational

ದೆಹಲಿ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ರಾಜೀನಾಮೆ

ನವದೆಹಲಿ: ದೆಹಲಿ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ತಮ್ಮ ವೈಯಕ್ತಿಕ ಕಾರಣಗಳನ್ನು ಉಲ್ಲೇಖಿಸಿ, ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ಬುಧವಾರ ಮೂಲಗಳು ತಿಳಿಸಿವೆ.

ಈ ಹಿಂದೆ 2016ರ ಡಿಸೆಂಬರ್‌ನಲ್ಲಿ ನಜೀಬ್ ಜಂಗ್ ದೆಹಲಿ ಲೆಫ್ಟಿನೆಂಟ್ ಗವರ್ನರ್ ಹುದ್ದೆಗೆ ಹಠಾತ್ ರಾಜೀನಾಮೆ ನೀಡಿದ್ದರು. ಬಳಿಕ ಬೈಜಾಲ್ ಲೆಫ್ಟಿನೆಂಟ್ ಗವರ್ನರ್ ಆಗಿ ಅಧಿಕಾರ ವಹಿಸಿಕೊಂಡಿದ್ದರು. ಇದನ್ನೂ ಓದಿ: ಕುದುರೆ ರೇಸ್, ಆನ್‌ಲೈನ್‌ ಆಟ, ಕ್ಯಾಸಿನೋಗಳ ಮೇಲೆ ಶೇ.28 ಜಿಎಸ್‌ಟಿ

ದೆಹಲಿ ಲೆಫ್ಟಿನೆಂಟ್ ಗವರ್ನರ್ ಹುದ್ದೆಗೆ ಯಾವುದೇ ನಿಶ್ಚಿತ ಅಧಿಕಾರಾವಧಿ ಇಲ್ಲ. ಇದೀಗ 5 ವರ್ಷಗಳ ಅಧಿಕಾರವನ್ನು ಪೂರ್ಣಗೊಳಿಸಿರುವ ಬೈಜಾಲ್ ವೈಯಕ್ತಿಕ ಕಾರಣ ನೀಡಿ ರಾಜೀನಾಮೆ ನೀಡಿದ್ದಾರೆ. ಇದನ್ನೂ ಓದಿ: ಮಧ್ಯಪ್ರದೇಶ ಸ್ಥಳೀಯ ಸಂಸ್ಥೆ ಎಲೆಕ್ಷನ್- ಒಬಿಸಿ ಕೋಟಾಕ್ಕೆ ಸುಪ್ರೀಂ ಸಮ್ಮತಿ

ಬೈಜಾಲ್ ಯಾರು?
ಅನಿಲ್ ಬೈಜಾಲ್ ಕೇಂದ್ರಾಡಳಿತ ಪ್ರದೇಶದ ಕೇಡರ್‌ನ 1969ರ ಬ್ಯಾಚ್‌ನ ಮಾಜಿ ಭಾರತೀಯ ಆಡಳಿತ ಸೇವಾ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು. ಇದಕ್ಕೂ ಮುನ್ನ ಅವರು ದೆಹಲಿ ಅಭಿವೃದ್ಧಿ ಪ್ರಾಧಿಕಾರದ(ಡಿಡಿಎ) ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಪ್ರಸಾರ ಭಾರತಿ ಹಾಗೂ ಇಂಡಿಯನ್ ಏರ್‌ಲೈನ್ಸ್‌ನಂತಹ ಪ್ರಮುಖ ಸಾರ್ವಜನಿಕ ವಲಯದ ಕಂಪನಿಗಳ ಮುಖ್ಯಸ್ಥರಾಗಿದ್ದರು.

Leave a Reply

Your email address will not be published.

Back to top button