ನವದೆಹಲಿ: ದೆಹಲಿ ಮದ್ಯ ನೀತಿಗೆ (Delhi Liquor Policy) ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್‌ಗೆ (Arvind Kejriwal) ಹಿನ್ನಡೆಯಾಗಿದೆ. ಜೈಲಿನಿಂದ ಕೇಜ್ರಿವಾಲ್ ಬಿಡುಗಡೆಗೆ ದೆಹಲಿ ಹೈಕೋರ್ಟ್ ತಡೆ ನೀಡಿದೆ.
ಹೊಸ ಮದ್ಯ ನೀತಿ ಪ್ರಕರಣದಲ್ಲಿ ಕೇಜ್ರಿವಾಲ್‌ಗೆ ರೋಸ್ ಅವೆನ್ಯೂ ನ್ಯಾಯಾಲಯ ಗುರುವಾರ ಜಾಮೀನು ನೀಡಿತ್ತು. ಜಾಮೀನು ಪ್ರಶ್ನಿಸಿ ಜಾರಿ ನಿರ್ದೇಶನಾಲಯ ದೆಹಲಿ ಹೈಕೋರ್ಟ್ (Delhi High Court) ಮೊರೆ ಹೋಗಿತ್ತು. ನ್ಯಾ. ಸುಧೀರ್ ಕುಮಾರ್ ಜೈನ್ ಮತ್ತು ರವೀಂದರ್ ದುಡೇಜಾ ಪೀಠವು ಅರ್ಜಿ ತುರ್ತು ವಿಚಾರಣೆ ನಡೆಸಿದ್ದು, ಜಾಮೀನು ಆದೇಶಕ್ಕೆ ತಡೆ ನೀಡಿದೆ. ಇದನ್ನೂ ಓದಿ: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಜಾಮೀನು ಮಂಜೂರು
Advertisement
Advertisement
ಅರ್ಜಿಯ ವಿಚಾರಣೆ ನಡೆಸುವವರೆಗೂ ವಿಚಾರಣಾ ನ್ಯಾಯಾಲಯದ ಆದೇಶದ ಪ್ರಕಾರ ಕ್ರಮ ಕೈಗೊಳ್ಳುವುದಿಲ್ಲ ಎಂದು ಹೈಕೋರ್ಟ್ ಹೇಳಿದೆ.
Advertisement
Advertisement
ಕೇಜ್ರಿವಾಲ್ ಅವರ ಪತ್ನಿ ಸುನಿತಾ ಕೇಜ್ರಿವಾಲ್ ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕರು ಇಂದು ಸಂಜೆ 4 ಗಂಟೆಗೆ ತಿಹಾರ್ ಜೈಲಿಗೆ ಭೇಟಿ ನೀಡಿ ದೆಹಲಿ ಮುಖ್ಯಮಂತ್ರಿಯನ್ನು ಸ್ವಾಗತಿಸಲು ಯೋಜಿಸಿದ್ದರು. ಇದನ್ನೂ ಓದಿ: ಭಾರತ-ಪಾಕಿಸ್ತಾನ ಗಡಿಯಲ್ಲಿ ಯೋಗ ಪ್ರದರ್ಶನ