ನವದೆಹಲಿ: ಅಬಕಾರಿ ನೀತಿ ಹಗರಣಕ್ಕೆ (Liquor Policy Case) ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (CBI) ಸಲ್ಲಿಸಿದ ಜಾರ್ಜ್‍ಶೀಟ್‍ನಲ್ಲಿ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ (Manish Sisodia) ಅವರ ಹೆಸರು ದಾಖಲಾಗಿಲ್ಲ.
Advertisement
ಈ ಹಿಂದೆ ಮನೀಶ್ ಸಿಸೋಡಿಯಾ ಹೆಸರು ಹಗರಣದಲ್ಲಿ ಕೇಳಿ ಬಂದಿತ್ತು. ಅಲ್ಲದೇ ಈ ಬಗ್ಗೆ ಸಿಬಿಐ ಸಿಸೋಡಿಯಾ ಮನೆ ಮೇಲೆ ದಾಳಿ ನಡೆಸಿತ್ತು. ವಿಚಾರಣೆಗೂ ಒಳಪಡಿಸಿತ್ತು. ಇದೀಗ ಸಿಬಿಐ ಸಲ್ಲಿಸಿರುವ ಚಾರ್ಚ್‍ಶೀಟ್‍ನಲ್ಲಿ (Chargesheet) ಮನೀಶ್ ಸಿಸೋಡಿಯಾ ಹೆಸರನ್ನು ಹೊರತು ಪಡಿಸಿ ಇತರ 7 ಮಂದಿ ಆರೋಪಿಗಳ ಹೆಸರನ್ನು ಉಲ್ಲೇಖಿಸಿದೆ. ಇದನ್ನೂ ಓದಿ: ದೆಹಲಿ ಸಿಎಂ ಕೇಜ್ರಿವಾಲ್ ಹತ್ಯೆಗೆ ಬಿಜೆಪಿ ಸಂಚು – ಮನೀಶ್ ಸಿಸೋಡಿಯಾ ಆರೋಪ
Advertisement
Advertisement
ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯದ ವಿಶೇಷ ಸಿಬಿಐ ನ್ಯಾಯಾಧೀಶ ಎಂ.ಕೆ ನಾಗ್ಪಾಲ್ ಅವರ ಮುಂದೆ ಸಿಬಿಐ ಸಲ್ಲಿಸಿರುವ ಮೊದಲ ಜಾರ್ಜ್‍ಶೀಟ್‍ನಲ್ಲಿ ಎಎಪಿ ಮಾಧ್ಯಮ ಉಸ್ತುವಾರಿ ವಿಜಯ್ ನಾಯರ್, ಹೈದರಾಬಾದ್ ಮೂಲದ ಉದ್ಯಮಿ ಅಭಿಷೇಕ್ ಬೋನಪಲ್ಲಿ, ಮದ್ಯದ ವ್ಯಾಪಾರಿ ಸಮೀರ್ ಮಹೇಂದ್ರ, ಬೋನಪಲ್ಲಿಯ ಸಹಾಯಕ ಅರುಣ್ ಪಿಳ್ಳೈ, ಮುತ್ತು ಗೌತಮ್ ಮತ್ತು ಈ ಹಿಂದೆ ಅಬಕಾರಿ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ನೌಕರರ ಹೆಸರನ್ನು ಆರೋಪ ಪಟ್ಟಿಯಲ್ಲಿ ಸೇರಿಸಿದೆ. ಇದನ್ನೂ ಓದಿ: ಭಾರತ್ ಜೋಡೋ ಯಾತ್ರೆ ವೇಳೆ ಪಾಕ್ ಪರ ಘೋಷಣೆ – ಬಿಜೆಪಿ ಆರೋಪ
Advertisement
ಇದು ಸಿಬಿಐ ಸಲ್ಲಿಸಿರುವ ಮೊದಲ ಆರೋಪ ಪಟ್ಟಿಯಾಗಿದ್ದು, ವಿಚಾರಣೆ ನಡೆಯುತ್ತಿರುವ ಕಾರಣ ಹೆಚ್ಚಿನ ವಿಚಾರಣೆ ಬಳಿಕ ಇನ್ನಷ್ಟು ಆರೋಪಿಗಳ ಪಟ್ಟಿಯನ್ನು ಸಲ್ಲಿಸುವ ಸಾಧ್ಯತೆ ಇದೆ. ಸಿಬಿಐ 10,000 ಪುಟಗಳ ಆರೋಪ ಪಟ್ಟಿಯನ್ನು ಕೋರ್ಟ್‍ಗೆ ಸಲ್ಲಿಸಿದ್ದು ನ.30ಕ್ಕೆ ವಿಚಾರಣೆ ಮುಂದೂಡಲಾಗಿದೆ.
ದೆಹಲಿ ಸರ್ಕಾರದ ಅಬಕಾರಿ ನೀತಿ 2021-22ರ ಅನುಷ್ಠಾನದಲ್ಲಿನ ಅಕ್ರಮಗಳಿಗೆ ಸಂಬಂಧಿಸಿದಂತೆ ಮನೀಶ್ ಸಿಸೋಡಿಯಾ ಹಾಗೂ ಇತರೆ 8 ಮಂದಿ ವಿರುದ್ಧ ಈ ಹಿಂದೆ ಸಿಬಿಐ ಲುಕ್‍ಔಟ್ ನೋಟಿಸ್ ಜಾರಿಯಾಗಿತ್ತು.