ನವದೆಹಲಿ: ದೆಹಲಿ ಮದ್ಯದ ಹಗರಣಕ್ಕೆ (Delhi Liquor Scam) ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಿಆರ್‌ಎಸ್ (BRS) ನಾಯಕಿ ಕೆ.ಕವಿತಾ (K Kavitha) ಅವರ ನ್ಯಾಯಾಂಗ ಬಂಧನವನ್ನು (Judicial Custody) ದೆಹಲಿ ನ್ಯಾಯಾಲಯ ಜುಲೈ 3ರವರೆಗೆ ವಿಸ್ತರಿಸಿದೆ.
ಇದೇ ಪ್ರಕರಣದ ಇತರ ಮೂವರು ಆರೋಪಿಗಳಾದ ರಾಜಕುಮಾರ್, ಅರವಿಂದ್ ಮತ್ತು ದಾಮೋದರ್ ಅವರಿಗೆ ರೋಸ್ ಅವೆನ್ಯೂ ನ್ಯಾಯಾಲಯವು 1 ಲಕ್ಷ ರೂ.ಗಳ ವೈಯಕ್ತಿಕ ಬಾಂಡ್ ಮೇಲೆ ಜಾಮೀನು ಮಂಜೂರು ಮಾಡಿದೆ. ಸೋಮವಾರ ಕವಿತಾ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಬಳಿಕ ವಿಶೇಷ ನ್ಯಾಯಾಧೀಶೆ ಕಾವೇರಿ ಬವೇಜಾ ನ್ಯಾಯಾಂಗ ಬಂಧನವನ್ನು ವಿಸ್ತರಿಸಿದರು. ಇದನ್ನೂ ಓದಿ: ಮದರ್ ಡೈರಿ ಶಾಕ್ – ಇಂದಿನಿಂದ ಪ್ರತಿ ಲೀಟರ್ ಹಾಲಿನ ದರ 2 ರೂ. ಹೆಚ್ಚಳ!
ಸಿಬಿಐ ದಾಖಲಿಸಿರುವ ಭ್ರಷ್ಟಾಚಾರ ಪ್ರಕರಣದಲ್ಲಿ ಜಾಮೀನು ಕೋರಿ ಮೇ 15ರಂದು ಕವಿತಾ ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಕವಿತಾ ಅವರ ಜಾಮೀನು ಅರ್ಜಿಯನ್ನು ವಿರೋಧಿಸಿದ ಸಿಬಿಐ ಮತ್ತು ಇಡಿ, ಕವಿತಾ ಅವರು ಹೆಚ್ಚು ಪ್ರಭಾವಿ ಮತ್ತು ಶಕ್ತಿಯುತರಾಗಿದ್ದು, ಸಾಕ್ಷಿಗಳ ಮೇಲೆ ಪ್ರಭಾವ ಬೀರಬಹುದು ಎಂದು ಹೇಳಿತ್ತು. ಇದನ್ನೂ ಓದಿ: ಒಡಿಶಾದಲ್ಲಿ ಹೆಚ್ಚಿದ ತಾಪಮಾನ – 3 ದಿನದಲ್ಲಿ ಹೀಟ್‌ಸ್ಟ್ರೋಕ್‌ಗೆ 20 ಮಂದಿ ಸಾವು
ದೆಹಲಿ ಅಬಕಾರಿ ನೀತಿಯಲ್ಲಿ ನಡೆದಿದೆ ಎನ್ನಲಾದ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಸೇರಿ ಒಟ್ಟು 18 ಮಂದಿಯನ್ನು ಇಡಿ ಬಂಧಿಸಿದೆ. ಇದನ್ನೂ ಓದಿ: ಸೆನ್ಸೆಕ್ಸ್, ನಿಫ್ಟಿ ಸಾರ್ವಕಾಲಿಕ ದಾಖಲೆ – Zerodha, CDSL ಸರ್ವರ್ ಡೌನ್, ಹೂಡಿಕೆದಾರರ ಆಕ್ರೋಶ