– ದಾಖಲೆಗಳು ದೊಡ್ಡದಾಗಿದೆ ಎಂದು ದೆಹಲಿ ಕೋರ್ಟ್ ಹೇಳಿದೆ
– ನಮ್ಮ ವಾದವನ್ನು ಸರಿಯಾಗಿ ಆಲಿಸಿಲ್ಲ: ಇಡಿ
ನವದೆಹಲಿ: ದೆಹಲಿ ಮದ್ಯ ಹಗರಣದಲ್ಲಿ (Delhi Liquor Scam) ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (CM Arvind Kejriwal) ಅವರಿಗೆ ರೋಸ್ ಅವೆನ್ಯೂ ಕೋರ್ಟ್ ನೀಡಿದ ಜಾಮೀನಿಗೆ (Bail) ದೆಹಲಿ ಹೈಕೋರ್ಟ್ (Delhi High Court) ಮಧ್ಯಂತರ ತಡೆ ನೀಡಿದೆ. ವಿಸ್ತೃತ ಆದೇಶವನ್ನು ಕಾಯ್ದಿರಿಸಿದ್ದು ಎರಡು ಮೂರು ದಿನಗಳಲ್ಲಿ ಪ್ರಕಟಿಸಲಾಗುವುದು ಎಂದು ನ್ಯಾಯಾಲಯ ಹೇಳಿದೆ.
ವಿಚಾರಣಾ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಜಾರಿ ನಿರ್ದೇಶನಾಲಯ (ED) ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸುಧೀರ್ ಕುಮಾರ್ ಜೈನ್ ಈ ಆದೇಶ ನೀಡಿದ್ದಾರೆ. ನಾನು ಆದೇಶವನ್ನು ಎರಡು ಮೂರು ದಿನಗಳವರೆಗೆ ಕಾಯ್ದಿರಿಸುತ್ತಿದ್ದೇನೆ. ಆದೇಶವನ್ನು ಪ್ರಕಟಿಸುವವರೆಗೆ ವಿಚಾರಣಾ ನ್ಯಾಯಾಲಯದ ಆದೇಶದ ಕಾರ್ಯಾಚರಣೆಯನ್ನು ತಡೆಹಿಡಿಯಲಾಗಿದೆ ಎಂದು ತಿಳಿಸಿದರು.
Advertisement
Advertisement
ವಿಚಾರಣೆ ವೇಳೆ ವಾದ ಮಂಡಿಸಿದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌ವಿ ರಾಜು, ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (PMLA) ಅಡಿಯಲ್ಲಿ ಆದೇಶವಾಗಿದ್ದರೂ ವಿಚಾರಣಾ ನ್ಯಾಯಾಲಯವು ಇಡಿ ವಾದವನ್ನು ಸರಿಯಾಗಿ ಆಲಿಸಿಲ್ಲ ಎಂದು ಪ್ರತಿಪಾದಿಸಿದರು. ಇಡಿ ಸಲ್ಲಿಸಿದ ದಾಖಲೆಗಳನ್ನು ಪರಿಗಣಿಸಲು ವಿಚಾರಣಾ ನ್ಯಾಯಾಲಯ ವಿಫಲವಾಗಿದೆ ಎಂದು ಹೇಳಿದರು. ಇದನ್ನೂ ಓದಿ: ಕೆಡಿಪಿ ಸಭೆಯಲ್ಲಿ ಭರ್ಜರಿ ನಿದ್ದೆ ಮಾಡಿದ ಎಂಎಲ್‌ಸಿ ವಸಂತ ಕುಮಾರ್
Advertisement
ದಯವಿಟ್ಟು ವಿಚಾರಣಾ ನ್ಯಾಯಾಲಯದ ಆದೇಶವನ್ನು ಗಮನಿಸಬೇಕು. ನ್ಯಾಯಾಲಯವು ನಮ್ಮ ಮಾತುಗಳನ್ನು ಕೇಳುವುದಿಲ್ಲ, ನಾವು ನೀಡಿದ ದಾಖಲೆಗಳನ್ನು ನೋಡುವುದಿಲ್ಲ ಮತ್ತು ಅದು ದೊಡ್ಡದಾಗಿದೆ ಎಂದು ಹೇಳುತ್ತದೆ. ಬೃಹತ್ ದಾಖಲೆಗಳನ್ನು ಸಲ್ಲಿಸಲಾಗಿದೆ ಎಂದು ನ್ಯಾಯಾಲಯ ಹೇಳುತ್ತದೆ. ಇದಕ್ಕಿಂತ ವಿಕೃತ ಆದೇಶ ಇರಲು ಸಾಧ್ಯವಿಲ್ಲ. ಈ ಮೂಲಕ ನ್ಯಾಯಧೀಶರು ದಾಖಲೆಗಳನ್ನು ಪರಿಶೀಲಿಸಲಿಲ್ಲ ಎಂದು ಆದೇಶದಲ್ಲೇ ಒಪ್ಪಿಕೊಂಡಿದ್ದಾರೆ ಎಂಬ ವಿಚಾರವನ್ನು ಕೋರ್ಟ್ ಗಮನಕ್ಕೆ ತಂದರು.
Advertisement
ಕೇಜ್ರಿವಾಲ್ ಪರ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ (Abhishek Singhvi), ಇಡಿ 3 ಗಂಟೆ 45 ನಿಮಿಷಗಳ ಕಾಲ ವಾದ ಮಂಡಿಸಿದೆ. ತನ್ನ ವಾದದಲ್ಲಿ ಸರ್ಕಾರಿ ಸಂಸ್ಥೆಯ ಮೂಲಕ ನ್ಯಾಯಧೀಶರನ್ನು ನಿಂದಿಸಿದ್ದಾರೆ. ಬಂಧನದ ಕಾನೂನು ಬದ್ಧತೆಯ ವಿಷಯವು ಇನ್ನೂ ಉನ್ನತ ನ್ಯಾಯಾಲಯದ ಮುಂದೆ ಬಾಕಿ ಇದೆ. ಆರ್ಟಿಕಲ್ 21 ಅಸ್ತಿತ್ವದಲ್ಲಿಲ್ಲ, ವ್ಯಕ್ತಿ ಸ್ವಾತಂತ್ರ್ಯವು ತುಂಬಾ ಕಡಿಮೆಯಾಗಿದೆ. ಇಡಿಗೆ ಕಣ್ಣುಗಳಿದ್ದರೆ ವಾಸ್ತವದಲ್ಲಿ ಕೇಜ್ರಿವಾಲ್ ಅವರನ್ನು ಬಂಧಿಸುತ್ತಿರಲಿಲ್ಲ. ಜೈಲಿಗೆ ಕಳುಹಿಸುತ್ತಿರಲಿಲ್ಲ. ಇದು ಕೇವಲ ಹೇಳಿಕೆ ಮೇಲೆ ದಾಖಲಿಸಿರುವ ಪ್ರಕರಣ ಎಂದು ವಾದಿಸಿದರು.