ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರನ್ನು ಮಾರ್ಚ್ 21 ರಂದು ಬಂಧಿಸಿದಾಗಿನಿಂದ 4.5 ಕೆಜಿ ಕಳೆದುಕೊಂಡಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ (AAP) ನಾಯಕಿ ಮತ್ತು ಸಚಿವ ಅತಿಶಿ (Atishi) ಇಂದು ಹೇಳಿದ್ದಾರೆ.
ಇಂದು ಬೆಳಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ಅತಿಶಿ, ಕೇಜ್ರಿವಾಲ್ ಅವರು ಮಧುಮೇಹದಿಂದ ಬಳಲುತ್ತಿದ್ದಾರೆ. ಆರೋಗ್ಯ ಸಮಸ್ಯೆ ಇದ್ದರೂ ಅವರು ರಾಷ್ಟ್ರದ ಸೇವೆಗಾಗಿ ಹಗಲಿರುಳು ಶ್ರಮಿಸುತ್ತಿದ್ದಾರೆ. ಅವರ ಬಂಧನಗೊಂಡ ದಿನದಿಂದ ಕೇಜ್ರಿವಾಲ್ ಅವರು 4.5 ಕೆಜಿ ತೂಕವನ್ನು ಕಳೆದುಕೊಂಡಿದ್ದಾರೆ. ಇದು ತುಂಬಾ ಕಳವಳಕಾರಿಯಾಗಿದೆ. ಬಿಜೆಪಿ ಅವರ ಆರೋಗ್ಯವನ್ನು ಅಪಾಯಕ್ಕೆ ತಳ್ಳುತ್ತಿದೆ. ಅರವಿಂದ್ ಕೇಜ್ರಿವಾಲ್ ಅವರಿಗೆ ಏನಾದರೂ ಸಂಭವಿಸಿದರೆ, ದೇಶವೇ ಅಲ್ಲ, ದೇವರು ಕೂಡ ಅವರನ್ನು ಕ್ಷಮಿಸುವುದಿಲ್ಲ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಯಾರೇ ಹೇಳಲಿ, ಬಿಡಲಿ ನಮ್ಮ ಕ್ಷೇತ್ರದಲ್ಲಿ ಸುಧಾಕರ್‌ಗೆ ಬಹುಮತ ಕೊಡುತ್ತೇವೆ: ಎಸ್‌ಆರ್ ವಿಶ್ವನಾಥ್
Advertisement
अरविंद केजरीवाल एक severe diabetic हैं। स्वास्थ की समस्याओं के बावजूद, वे देश की सेवा में 24 घण्टे लगे रहते थे।
गिरफ़्तारी के बाद से अब तक, अरविंद केजरीवाल का वज़न 4.5 किलो घट गया है। यह बहुत चिंताजनक है। आज भाजपा उन्हें जेल में डाल कर उनके स्वास्थ को ख़तरे में डाल रही है।
अगर…
— Atishi (@AtishiAAP) April 3, 2024
Advertisement
ಮದ್ಯ ಹಗರಣಕ್ಕೆ (Liquor Scam) ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ (ED) ಬಂಧನಕ್ಕೊಳಗಾದ ಕೇಜ್ರಿವಾಲ್ ಅವರನ್ನು ಏಪ್ರಿಲ್ 15 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ ನಂತರ ಸೋಮವಾರ ತಿಹಾರ್ ಜೈಲಿಗೆ ಸ್ಥಳಾಂತರಿಸಲಾಯಿತು.
Advertisement
ಮುಖ್ಯಮಂತ್ರಿಗಳಿಗೆ ಮಧ್ಯಾಹ್ನ ಮತ್ತು ರಾತ್ರಿಯ ಊಟಕ್ಕೆ ಮನೆಯ ಆಹಾರವನ್ನು ನೀಡಲಾಗುತ್ತದೆ. ಅವರ ಆರೋಗ್ಯದ ಮೇಲೆ ನಿಗಾ ಇಡಲಾಗಿದೆ. ಯಾವುದೇ ತುರ್ತು ಪರಿಸ್ಥಿತಿಗಾಗಿ ಅವರ ಸೆಲ್ ಬಳಿ ಕ್ವಿಕ್ ರೆಸ್ಪಾನ್ಸ್ ತಂಡವನ್ನು ನಿಯೋಜಿಸಲಾಗಿದೆ ಎಂದು ಜೈಲಿನ ಅಧಿಕಾರಿಗಳು ಹೇಳಿದ್ದಾರೆ.