ನವದೆಹಲಿ: ಅಕ್ರಮ ಸಂಬಂಧ ಶಂಕೆ ಹಿನ್ನೆಲೆ ವ್ಯಕ್ತಿಯೋರ್ವ ತನ್ನ ಪತ್ನಿಯನ್ನೇ ಹತ್ಯೆಗೈದಿರುವ ಘಟನೆ ರಾಜಧಾನಿ ದೆಹಲಿಯಲ್ಲಿ ನಡೆದಿದೆ.
Advertisement
ಆರೋಪಿಯನ್ನು ಛೋಟೆ ಎಂದು ಗುರುತಿಸಲಾಗಿದ್ದು, ಈತನಿಗೆ 5 ಜನ ಮಕ್ಕಳಿದ್ದಾರೆ. ಆದರೆ ತನ್ನ ಪತ್ನಿ ಬೇರೊಬ್ಬರ ಜೊತೆ ಅಕ್ರಮ ಸಂಬಂಧ ಹೊಂದಿದ್ದಾಳೆ ಎಂದು ಶಂಕಿಸಿದ ಹರಿತವಾದ ಮಾರಕಾಸ್ತ್ರದಿಂದ ಪತ್ನಿ ತಲೆಗೆ ಹೊಡೆದು ಕೊಲೆ ಮಾಡಿದ್ದಾನೆ. ಇದೀಗ ಪೊಲೀಸರು ಆರೋಪಿಯನ್ನು ಬಂಧಿಸಿ, ಆತನ ಬಳಿ ಇದ್ದ ಚಾಕುವನ್ನು ವಶಪಡಿಸಿಕೊಂಡಿದ್ದಾರೆ. ಇದನ್ನೂ ಓದಿ: ಕಾರ್ಯವೈಖರಿ ಪ್ರಶ್ನಿಸಿದ ಗ್ರಾಮಸ್ಥರ ಮೇಲೆ ಚಪ್ಪಲಿಯಿಂದ ಹಲ್ಲೆಗೆ ಮುಂದಾದ ಗ್ರಾ.ಪ ಅಧ್ಯಕ್ಷೆ
Advertisement
Advertisement
ಘಟನೆ ವೇಳೆ ಗಾಯಗೊಂಡ ಮಹಿಳೆಯನ್ನು ತಕ್ಷಣ ನೆಹರು ವಿಹಾರ್‍ನ ಜಿಟಿಬಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮಹಿಳೆ ಸಾವನ್ನಪ್ಪಿದ್ದಾಳೆ. ಇದೀಗ ದಂಪತಿ ಮಗಳು ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿ ವಿರುದ್ಧ ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್‍ಗಳ ಅಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: 6 ವರ್ಷದ ಹಿಂದೆ ಮದುವೆ- 4ನೇ ಪತ್ನಿಗೆ ಡಿವೋರ್ಸ್ ಕೊಟ್ಟ 91ರ ರೂಪರ್ಟ್ ಮುರ್ಡೋಕ್