ನವದೆಹಲಿ: ಉತ್ತಮ್ ನಗರ ಪೂರ್ವ ಮೆಟ್ರೋ ನಿಲ್ದಾಣದಲ್ಲಿ (Uttam Nagar East) ಹಳಿಗಳಿಗೆ ಹಾರಿ 45 ವರ್ಷದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಮೃತರನ್ನು ರಾಜಸ್ಥಾನದ ಕರೋಲಿ ಜಿಲ್ಲೆಯ ಮಹಾರಾಜ್ ಸಿಂಗ್ ಎಂದು ಗುರುತಿಸಲಾಗಿದೆ. ಶವವನ್ನು ಹಳಿಗಳಿಂದ ಹೊರತೆಗೆದು ಡಿಡಿಯು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.
ಮಹಾರಾಜ್ ಸಿಂಗ್ ಹಲವಾರು ವರ್ಷಗಳಿಂದ ಖಿನ್ನತೆಯಿಂದ ಬಳಲುತ್ತಿದ್ದರು ಮತ್ತು ಆರ್‌ಎಂಎಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಘಟನೆಗೆ ಕೇವಲ ಒಂದು ದಿನ ಮೊದಲು ಅವರು ಚಿಕಿತ್ಸೆಗಾಗಿ ಆಸ್ಪತ್ರೆಗೆ ಭೇಟಿ ನೀಡಿದ್ದರು. ತಮ್ಮ ಅಣ್ಣನ ಮಗಳ ಮದುವೆಯಲ್ಲಿ ಪಾಲ್ಗೊಳ್ಳಲು ದೆಹಲಿಗೆ ಬಂದಿದ್ದರು. ಇದನ್ನೂ ಓದಿ: ಅಮೆರಿಕದಲ್ಲಿ ಭಾರಿ ಹಿಮಪಾತ; 5,600 ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದು – ಶಾಲೆಗಳಿಗೆ ರಜೆ
ಪೊಲೀಸರು CrPC ಸೆಕ್ಷನ್ 174 ರ ಅಡಿಯಲ್ಲಿ ವಿಚಾರಣೆ ಆರಂಭಿಸಿದ್ದಾರೆ. ಘಟನೆಯ ಸುತ್ತಲಿನ ಸಂದರ್ಭಗಳನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ. ಐದು ದಿನಗಳಲ್ಲಿ ಉತ್ತಮ್ ನಗರ ಪೂರ್ವ ಮೆಟ್ರೋ ನಿಲ್ದಾಣದಲ್ಲಿ ನಡೆದ ಎರಡನೇ ಆತ್ಮಹತ್ಯೆ ಇದಾಗಿದೆ.

