ನವದೆಹಲಿ: ಮುಸ್ಲಿಂ ಮಹಿಳೆಯರನ್ನು ಗುರಿಯಾಗಿಸಿಕೊಂಡು ಅಶ್ಲೀಲವಾಗಿ ಚಿತ್ರಿಸಿ ಅವರನ್ನು ಹರಾಜು ಹಾಕುತ್ತಿದ್ದ ಬುಲ್ಲಿ ಬೈ ಆ್ಯಪ್‌ನ್ನು ಕೇಂದ್ರ ಸರ್ಕಾರ ನಿಷೇಧಿಸಿದೆ.
ಸಮುದಾಯದ ಪ್ರಮುಖರು ಶನಿವಾರ ಸ್ಕ್ರೀನ್ ಶಾಟ್ ಸಹಿತ ಈ ಆಘಾತಕಾರಿ ಬೆಳವಣಿಗೆ ಬಗ್ಗೆ ಟ್ವೀಟ್ ಮಾಡಿದ್ದರು. ಶಿವಸೇನೆ ರಾಜ್ಯಸಭಾ ಸದಸ್ಯೆ ಪ್ರಿಯಾಂಕ ಚತುರ್ವೇದಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಸಂಸದ ಶಶಿ ತರೂರ್ ಸೇರಿದಂತೆ ಪ್ರಮುಖರು ಈ ಬಗ್ಗೆ ಕಟುವಾಗಿ ಟೀಕಿಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದರು. ಕೂಡಲೇ ಸ್ಪಂದಿಸಿದ ಕೇಂದ್ರ ಸಚಿವ ಅಶ್ವಿನ್ ವೈಷ್ಣವ್ ಆ್ಯಪ್‌ನ್ನು ನಿಷೇಧಿಸುವ ಕುರಿತು ಕ್ರಮ ಕೈಗೊಂಡಿದ್ದಾರೆ.
महिलाओं का अपमान और सांप्रदायिक नफ़रत तभी बंद होंगे जब हम सब एक आवाज़ में इसके ख़िलाफ़ खड़े होंगे।
साल बदला है, हाल भी बदलो- अब बोलना होगा!#NoFear
— Rahul Gandhi (@RahulGandhi) January 2, 2022
ಸಾವಿರಾರು ಮಹಿಳೆಯರ ಫೋಟೋಗಳನ್ನು ಆನ್‌ಲೈನ್‌ನಲ್ಲಿ ಮಾರಾಟ ಮಾಡಿದ ಬುಲ್ಲಿಬೈ ಎಂಬ ಆ್ಯಪ್‌ನ್ನು ನಿಷೇಧಿಸಲಾಗಿದೆ. ಬುಲ್ಲಿ ಆ್ಯಪ್ ಪೋರ್ಟಲ್‌ನ್ನು ಗಿಟ್‌ಹಬ್ ತನ್ನ ವೇದಿಕೆಯಿಂದ ಬ್ಲಾಕ್ ಮಾಡಿದೆ ಎಂದು ಕೇಂದ್ರ ಮಾಹಿತಿ ತಂತ್ರಜ್ಞಾನ ಹಾಗೂ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ. ಇದನ್ನೂ ಓದಿ: ಹಿಂದೂ ದೇವಾಲಯಗಳು ಸ್ವತಂತ್ರವಾದ್ರೆ ಒಂದಿಷ್ಟು ಅಭಿವೃದ್ಧಿಗೊಳ್ಳುತ್ತದೆ: ಕೋಟ ಶ್ರೀನಿವಾಸ ಪೂಜಾರಿ
Govt. of India is working with police organisations in Delhi and Mumbai on this matter. https://t.co/EOLUb0FlQe
— Ashwini Vaishnaw (@AshwiniVaishnaw) January 2, 2022
ಈ ಬಗ್ಗೆ ಮುಂಬೈ ಹಾಗೂ ದೆಹಲಿ ಪೊಲೀಸರು ತನಿಖೆ ಪ್ರಾರಂಭಿಸಿದ್ದಾರೆ. ದೆಹಲಿ ಪೊಲೀಸರು ಆ್ಯಪ್ ವಿರುದ್ಧ ಲೈಂಗಿಕ ದೌರ್ಜನ್ಯದ ಕೇಸ್ ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: ಪಾದಯಾತ್ರೆ ಕಾಂಗ್ರೆಸ್ಸಿನ ಅತ್ಯಂತ ಹೀನಾಯ ರಾಜಕಾರಣ: ಕಟೀಲ್
ಗಿಟ್ ಹಬ್ ಆ್ಯಪ್ ಮೂಲಕ ಮುಸ್ಲಿಂ ಹೆಣ್ಣುಮಕ್ಕಳ ಫೋಟೋವನ್ನು ಹರಾಜಿಗೆ ಮಾರಾಟ ನಡೆಯುತ್ತಿತ್ತು. ಕಳೆದ ವರ್ಷ ಸುಲ್ಲಿ ಡೀಲ್ಸ್ ಹೆಸರಿನಲ್ಲಿ ಇದೇ ರೀತಿ ಮುಸ್ಲಿಂ ಪತ್ರಕರ್ತರು, ಸಾಮಾಜಿಕ ಕಾರ್ಯಕರ್ತರನ್ನು ಗುರಿಯಾಗಿಸಿ ಅವರನ್ನು ಹರಾಜಿಗೆ ಇಡುವ ರೀತಿ ಬಿಂಬಿಸುವ ವೆಬ್ ಪೋರ್ಟಲ್ ಕಾಣಿಸಿಕೊಂಡಿತ್ತು. ಮಹಿಳೆಯರ ಸಾಮಾಜಿಕ ಜಾಲತಾಣದಲ್ಲಿರುವ ಫೋಟೋವನ್ನು ತೆಗೆದುಕೊಂಡು ಈ ಕೃತ್ಯ ಮಾಡಲಾಗಿದೆ.