ಬ್ರಿಜ್ ಭೂಷಣ್ ವಿರುದ್ಧ 1,000 ಪುಟಗಳ ಚಾರ್ಜ್‌ಶೀಟ್ ಸಲ್ಲಿಕೆ – ಪೋಕ್ಸೊ ಕೇಸ್‌ ರದ್ದಿಗೆ ದೆಹಲಿ ಪೊಲೀಸರ ಶಿಫಾರಸ್ಸು

Public TV
2 Min Read
Brij Bhushan Sharan Singh

ನವದೆಹಲಿ: ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಭಾರತೀಯ ಕುಸ್ತಿ ಫೆಡರೇಶನ್ (WFI) ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ (Bhushan Sharan Singh) ವಿರುದ್ಧ ದೆಹಲಿ ಪೊಲೀಸರು ಗುರುವಾರ 1,000 ಪುಟಗಳ ಆರೋಪಪಟ್ಟಿ ಸಲ್ಲಿಸಿದ್ದಾರೆ. ರೋಸ್ ಅವೆನ್ಯೂ ಕೋರ್ಟ್‌ಗೆ ಆರೋಪಪಟ್ಟಿ ಸಲ್ಲಿಕೆಯಾಗಿದ್ದು ಜುಲೈ 4 ರಂದು ವಿಚಾರಣೆ ನಡೆಯಲಿದೆ.

Wrestlers

ಚಾರ್ಜ್‌ಶೀಟ್ ನಲ್ಲಿ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಫೋಕ್ಸೊ ಪ್ರಕರಣ ರದ್ದು ಮಾಡುವಂತೆ ಪೋಲೀಸರು ಶಿಫಾರಸ್ಸು ಮಾಡಿದ್ದಾರೆ. ಈ ಬಗ್ಗೆ 500 ಪುಟಗಳ ವರದಿ ನೀಡಿರುವ ಪೊಲೀಸರು ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವುದಕ್ಕೆ ಯಾವುದೇ ಸಾಕ್ಷ್ಯ – ಪುರಾವೆಗಳು ಲಭ್ಯವಾಗಿಲ್ಲ ಎಂದು ನ್ಯಾಯಾಲಯಕ್ಕೆ (Court) ತಿಳಿಸಿದ್ದಾರೆ. ಇದನ್ನೂ ಓದಿ: ಹೋರಾಟದಿಂದ ಹಿಂದೆ ಸರಿದಿಲ್ಲ, ಸುಳ್ಳು ಸುದ್ದಿ ಹಬ್ಬಿಸಬೇಡಿ – ಸಾಕ್ಷಿ ಮಲಿಕ್

Wrestler

ಕುಸ್ತಿಪಟುಗಳ ದೂರಿನ ಮೇರೆಗೆ ದಾಖಲಿಸಿದ FIR ಆಧರಿಸಿ ನಡೆಸಿದ ತನಿಖೆ ಬಳಿಕ ಆರೋಪಿ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಐಪಿಸಿ ಸೆಕ್ಷನ್ 354, 354 A, 354 D ಮತ್ತು IPC ಸೆಕ್ಷನ್ 109/ 354/354 A/506ರ ಅಡಿಯಲ್ಲಿ ಚಾರ್ಜ್‌ಶೀಟ್ ಸಲ್ಲಿಸಲಾಗಿದೆ. ಸಂತ್ರಸ್ತೆಯ ಮತ್ತು ಆಕೆಯ ತಂದೆಯ ಹೇಳಿಕೆ ಆಧಾರದ ಮೇಲೆ ನಾವು ಪೋಕ್ಸೊ (POCSO) ರದ್ದತಿ ವರದಿ ಸಲ್ಲಿಸಿದ್ದೇವೆ ಎಂದು ದೆಹಲಿ ಪೊಲೀಸ್ ವಕ್ತಾರೆ ಸುಮನ್ ನಲ್ವಾ ಹೇಳಿದ್ದಾರೆ. ಇದನ್ನೂ ಓದಿ: ಬೇಕಂತಲೇ ಹೆಣ್ಮಕ್ಕಳ ಮೈ ಮುಟ್ಟುತ್ತಿದ್ದ, ಹಿಂಬಾಲಿಸುತ್ತಿದ್ದ – ಬ್ರಿಜ್‌ ಭೂಷಣ್‌ ವಿರುದ್ಧ 10 ಕಂಪ್ಲೆಂಟ್‌, 2 FIR

Wrestlers 5

ಬ್ರಿಜ್ ಭೂಷಣ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದ ಸಾಕ್ಷಿ ಮಲಿಕ್, ಬಜರಂಗ್ ಪುನಿಯಾ ಮತ್ತು ವಿನೇಶ್ ಫೋಗಟ್ ದೆಹಲಿಯ ಜಂತರ್ ಮಂತರ್ ನಲ್ಲಿ ಪ್ರತಿಭಟನೆ ನಡೆಸಿದ್ದರು. ಅಲ್ಲದೇ ನೂತನ ಸಂಸತ್‌ ಭವನದ ಎದುರು ಪ್ರತಿಭಟನೆ ನಡೆಸಲು ತೆರಳುತ್ತಿದ್ದಾಗ ಪೊಲೀಸರಿಂದ ಹಲ್ಲೆಗೊಳಗಾಗಿದ್ದರು. ಮಾತ್ರವಲ್ಲದೇ ದೆಹಲಿ ಪೊಲೀಸರು ಕುಸ್ತಿಪಟುಗಳ ವಿರುದ್ಧವೂ ಪ್ರಕರಣ ದಾಖಲಿಸಿದ್ದರು. ಇದರಿಂದ ಮನನೊಂದ ಕುಸ್ತಿಪಟುಗಳು ತಮ್ಮ ಒಲಿಂಪಿಕ್ಸ್‌ ಪದಕಗಳನ್ನ ಹರಿದ್ವಾರದಲ್ಲಿರುವ ಗಂಗಾನದಿಯಲ್ಲಿ ವಿರ್ಸಜನೆಗೆ ಮುಂದಾಗಿದ್ದರು.

ಈ ವೇಳೆ ರೈತ ಮುಖಂಡ ರಾಕೇಶ್ ಟಿಕಾಯತ್ ಸಹೋದರ ಕುಸ್ತಿಪಟುಗಳನ್ನು ತಡೆದು ನ್ಯಾಯ ಕೊಡಿಸುವ ಭರವಸೆ ನೀಡಿದ್ದರು. ಆ ಬಳಿಕ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಭೇಟಿಯಾಗಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಸ್ತಿಪಟುಗಳು ಚರ್ಚೆ ನಡೆಸಿದ್ದರು.

Share This Article