ನವದೆಹಲಿ: ಬಿಜೆಪಿ (BJP) ಸಂಸದ ಬ್ರಿಜ್ ಭೂಷಣ್ (Brij Bhushan Sharan Singh) ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ಮಾಡಿರುವ ಕುಸ್ತಿಪಟುಗಳಿಂದ (wrestlers) ಫೋಟೋ, ಆಡಿಯೋ ಮತ್ತು ವೀಡಿಯೋ ಸಾಕ್ಷಿ ನೀಡುವಂತೆ ದೆಹಲಿ ಪೊಲೀಸರು ತಿಳಿಸಿದ್ದಾರೆ.
ತಮ್ಮ ಉಸಿರಾಟವನ್ನು ಪರೀಕ್ಷಿಸುವ ನೆಪದಲ್ಲಿ ಎದೆ ಮತ್ತು ಹೊಟ್ಟೆಯನ್ನು ಮುಟ್ಟಿದ್ದಾರೆ ಎಂದು ಆರೋಪಿಸಿರುವ ಇಬ್ಬರು ಮಹಿಳಾ ಕುಸ್ತಿಪಟುಗಳಿಗೆ ಈ ಸಾಕ್ಷಿ ಒದಗಿಸುವಂತೆ ಸೂಚಿಸಿದ್ದಾರೆ. ಅಲ್ಲದೆ ದೂರುದಾರರೊಬ್ಬರನ್ನು ತಬ್ಬಿಕೊಂಡಿದ್ದರು ಎನ್ನಲಾದ ಬಗ್ಗೆ ಪುರಾವೆ ಒದಗಿಸುವಂತೆ ಹೇಳಲಾಗಿದೆ. ಸಿಆರ್‌ಪಿಸಿಯ ಸೆಕ್ಷನ್ 91ರ ಅಡಿಯಲ್ಲಿ ಸಾಕ್ಷಿಗಳನ್ನು ಒದಗಿಸುವ ಬಗ್ಗೆ ನೋಟಿಸ್ ಜಾರಿ ಮಾಡಲಾಗಿದೆ. ಇದನ್ನೂ ಓದಿ:ನಾವು ನುಡಿದಂತೆ ನಡೆಯುವವರು ಎಂಬುದಕ್ಕೆ ಶಕ್ತಿ ಯೋಜನೆಯೇ ಸಾಕ್ಷಿ: ದಿನೇಶ್ ಗುಂಡೂರಾವ್
ಅಲ್ಲದೇ ಆಪಾದಿತ ಘಟನೆಗಳ ದಿನಾಂಕಗಳು ಮತ್ತು ಸಮಯಗಳಲ್ಲಿ ಅವರು ಡಬ್ಲ್ಯುಎಫ್‍ಐ ಕಚೇರಿಗೆ ಭೇಟಿ ನೀಡಿದ ಮಾಹಿತಿ ನೀಡುವಂತೆ ಸೂಚಿಸಲಾಗಿದೆ. ಈ ವೇಳೆ ಕುಸ್ತಿಪಟು ಒಬ್ಬರು ತಂಗಿದ್ದ ಹೋಟೆಲ್‍ನ ಬಗ್ಗೆಯೂ ಪೊಲೀಸರು ಮಾಹಿತಿ ಕೇಳಿದ್ದಾರೆ.
ಬ್ರಿಜ್ ಭೂಷಣ್ ಅವರು ತಮ್ಮ ಪ್ರಭಾವವನ್ನು ಬಳಸಿಕೊಂಡು ಲೈಂಗಿಕ ಕಿರುಕುಳಕ್ಕೆ ಒಳಗಾದವರ ಮೇಲೆ ಒತ್ತಡ ಹೇರುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಕುಸ್ತಿಪಟುಗಳ ಹೇಳಿಕೆಗಳನ್ನು ಬದಲಾಯಿಸುವಂತೆ ಒತ್ತಾಯಿಸುತ್ತಿದ್ದಾರೆ ಎಂದು ಕುಸ್ತಿಪಟುಗಳು ಆರೋಪಿಸಿದ್ದಾರೆ. ಅಲ್ಲದೇ ಜೂನ್ 15 ರೊಳಗೆ ಸಿಂಗ್ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳದಿದ್ದರೆ ತಮ್ಮ ಪ್ರತಿಭಟನೆಯನ್ನು ಪುನರಾರಂಭಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಖಾಸಗಿ ಬಸ್‍ಗಳಲ್ಲೂ ಉಚಿತ ಪ್ರಯಾಣ ಸೇವೆ ಸಿಗುತ್ತಾ- ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದೇನು..?