ನವದೆಹಲಿ: ಕೆಂಪು ಕೋಟೆ, ರಾಜ್‍ಘಾಟ್ ಹಾಗೂ ಐಟಿಒನಲ್ಲಿ ದೆಹಲಿ ಪೊಲೀಸರು ಸೆಕ್ಷನ್ 144 ಜಾರಿ ಮಾಡಿದ್ದಾರೆ.
ಪ್ರತಿವರ್ಷದಂತೆ ಈ ವರ್ಷವೂ ಆಗಸ್ಟ್ 15 ಸ್ವಾತಂತ್ರ್ಯ ದಿನವನ್ನು (Independent Day) ಆಚರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸಾಕಷ್ಟು ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗುತ್ತಿದೆ. ಅಂತೆಯೇ ದೇಶಾದ್ಯಂತ ಪೊಲೀಸರು ಕಟ್ಟೆಚ್ಚರ ವಹಿಸುತ್ತಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಉಪ ಪೊಲೀಸ್ ಆಯುಕ್ತ, ಕೆಂಪು ಕೋಟೆ ಹಾಗೂ ರಾಜ್‍ಘಾಟ್ ಪ್ರದೇಶಗಳಲ್ಲಿ ಯಾವುದೇ ರೀತಿಯ ಸಭೆ, ಸಮಾರಂಭಗಳನ್ನು ಮಾಡಲು ಅನುಮತಿ ನೀಡಲ್ಲ ಎಂದು ಬರೆದುಕೊಂಡಿದ್ದಾರೆ.
ಇನ್ನು ಎಂದಿನಂತೆ ಈ ಬಾರಿಯೂ ಪ್ರಧಾನಿ ನರೇಂದ್ರ ಮೋದಿಯವರು ಕೆಂಪು ಕೋಟೆಯಲ್ಲಿ ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ.
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]